ಗಣಾನಾಂ ತ್ವಾ ಗಣಪತಿಂ ಹವಾಮಹೇ, ಕವಿಂ ಕವೀನಾಂ ಉಪಮಶ್ರಮವಸ್ತಮಂ|
ಜ್ಯೇಷ್ಠ ರಾಜಂ ಬ್ರಹ್ಮಣಾಂ ಬ್ರಹ್ಮಣಸ್ಪತ ಆನ:ಶೃಣ್ವನ್ ಊತಿಭಿ: ಸೀದ ಸಾಧನಂ||
(ಯಜುರ್ವೇದ ಸಂಹಿತೆ)
ತ್ವಮೇವ ಕೇವಲಂ ಕರ್ತಾಸಿ
ತ್ವಮೇವ ಕೇವಲಂ ಧರ್ತಾಸಿ
ತ್ವಮೇವ ಕೇವಲಂ ಹರ್ತಾಸಿ
ತ್ವಮೇವ ಸರ್ವಂ ಖಲ್ವಿದಂ ಬ್ರಹ್ಮಾಸಿ
ತ್ವಂ ಸಾಕ್ಷಾದಾತ್ಮಾಸಿ ಆತ್ಮಂ
ತ್ವಂ ಬ್ರಹ್ಮಾ ವಿಷ್ಣುಸ್ತ್ವಂ ರುದ್ರಸ್ತ್ವಂ ಇಂದ್ರಸ್ತ್ವಂ ಅಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮಭೂರ್ಭುವಸ್ಸುವರೋಮ್.
ಗಣೇಶಾಥರ್ವಶೀರ್ಷದಲ್ಲಿ ಹೀಗೆ ಆತನನ್ನು ವರ್ಣಿಸಿದೆ.
ಗಣೇಶನು ಶಿವನ ಗಣಗಳ ಅಧಿಪತಿ. ಸ್ವರ್ಣಗೌರಿಯ ಪ್ರೀತಿಯ ಪುತ್ರ. ವಿಘ್ನ ವಿನಾಶಕ ವಿನಾಯಕ.
ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗುದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು. ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು.
ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಇದರ ಬಗೆಗಿನ ಕಥೆ ಎಲ್ಲರಿಗೂ ತಿಳಿದಿರುವುದೇ.
ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ.
ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.
ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.
ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ. ನಮ್ಮ ಕಾಲೋನಿಯಲ್ಲಿಯೂ ಗಣಪತಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು.
ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್
ಗಣಪತಿ ಆರತಿ
ಮಹಾರಾಷ್ಟ್ರದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮಂಗಳಾರತಿಯ ಸಮಯದಲ್ಲಿ
ಹಾಡುವ ಸುಂದರ ಭಜನೆ – ಕರ್ತೃ ಯಾರೆಂದು ತಿಳಿಯದು
ಸುಖಕರ್ತಾ ದು:ಖಹರ್ತಾ ವಾರ್ತಾ ವಿಘ್ನಾಚೀ
ನುರವೀ ಪುರವೀ ಪ್ರೇಮ ಕೃಪಾ ಜಯಾಚೀ
ಸರ್ವಾಂಗೀ ಸುಂದರ ಉಟಿ ಶೆಂಟೂರಾಚೀ
ಕಂಠೀ ಝಳಕೇ ಮಾಲ ಮುಕ್ತಾ ಫಳಾಚೀ
ಜಯದೇವ ಜಯದೇವ ಜಯ ಮಂಗಲಮೂರ್ತೀ
ದರ್ಶನಮಾತ್ರೇ ಮನಕಾಮನಾ ಪೂರ್ತೀ
ಜಯದೇವ ಜಯದೇವ ಜಯ ಮಂಗಲ ಮೂರ್ತೀ
ದರ್ಶನಮಾತ್ರೇ ಮನಕಾಮನಾ ಪೂರ್ತೀ
ರತ್ನಖಚಿತ ಫರಾ ತುಜ ಗೌರಿಕುಮರಾ
ಚಂದನಾಚೀ ಉಟೀ ಕುಂಕುಮಕೇಶರಾ
ಹಿರೆಜಡಿತ ಮುಕುಟ ಶೋಭತೊ ಬರಾ
ಋಣಝುಣಗೀ ನೂಪುರೇ ಚರಣೀ ಘಾಗರಿಯಾ
ಜಯದೇವ ಜಯದೇವ
ಜಯದೇವ ಜಯದೇವ ಜಯ ಮಂಗಲಮೂರ್ತೀ
ದರ್ಶನಮಾತ್ರೇ ಮನಕಾಮನಾ ಪೂರ್ತೀ
ಜಯದೇವ ಜಯದೇವ
ಲಂಬೋದರ ಪೀತಾಂಬರ ಫಣಿವರಬಂಧನಾ
ಸರಲ ಸೋಂಡ ವಕ್ರತುಂಡ ತ್ರಿನಯನಾ
ದಾಸ ರಾಮಾಚಾ ವಾಟ ಪಾಹೆ ಸದನಾ
ಸಂಕಟೀ ಪಾವಾವೇಂ, ನಿರ್ವಾಣೀಂ ರಕ್ಷಾವೇಂ ಸುರವರ ವಂದನಾ
ಜಯದೇವ ಜಯದೇವ
ಜಯದೇವ ಜಯದೇವ ಜಯ ಮಂಗಲಮೂರ್ತೀ
ದರ್ಶನಮಾತ್ರೇ ಮನಕಾಮನಾ ಪೂರ್ತೀ
ಜಯದೇವ ಜಯದೇವ
ಜಯದೇವ ಜಯದೇವ
ಜಯದೇವ ಜಯದೇವ ಜಯ ಮಂಗಲಮೂರ್ತೀ
ದರ್ಶನಮಾತ್ರೇ ಮನಕಾಮನಾ ಪೂರ್ತೀ
ಜಯದೇವ ಜಯದೇವ
2 replies on “ಗಣಪತಿ ಪೂಜೆ (ಕೆಲವು ಮಾಹಿತಿಗಳು)”
Thanks for so many wonderful pictures of Ganesha.
Interesting post, enjoyed reading in Kannada.
excellent