ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ಗೌರಿ ಗಣಪತಿ ಹಬ್ಬ

ಗೌರಿ ಎಂಬ ಪದ ಪಾರ್ವತೀದೇವಿಗೆ ಪರ್ಯಾಯವಾದ ಪದ. ಆಕೆಯು ಸೃಷ್ಟಿ, ಸ್ಥಿತಿ, ಲಯ ಕಾರ್ಯಗಳಲ್ಲಿ ಕೊನೆಯದನ್ನು ತನ್ನ ಅಧಿಕಾರದಲ್ಲಿ ಪ್ರಧಾನವಾಗಿ ಹೊಂದಿರುವ ಮಹಾದೇವನ ಅರ್ಧಾಂಗಿ, ಮಹಾದೇವಿ. ಆಕೆಯು ಸಂಹಾರ ಮಾಡುವಾಗ ಕೃಷ್ಣವರ್ಣವನ್ನು ಅಲಂಕರಿಸಿರುವ ಕಾಳೀ ಮಾತೆ, ವಿದ್ಯಾಪ್ರದಾನ ಮಾಡುವಾಗ ಶ್ಯಾಮಲ ವರ್ಣದ ಶ್ಯಾಮಲಾಂಬಿಕೆಯಂತೆ, ಸೌಮಂಗಲ್ಯ, ಸೌಭಾಗ್ಯ ಸಂಪತ್ತನ್ನು ಅನುಗ್ರಹಿಸುವಾಗ ಸಂಪಿಗೆ ಹೂವಿನ ಬಣದಿಂದ ಮತ್ತು ಕೆಲವೊಮ್ಮೆ ಹಿಮ ಶುಭ್ರ ವರ್ಣದಿಂದ ಕಂಗೊಳಿಸುವ ಗೌರೀಮಾತೆ.

ಭಾದ್ರಪದ ಶುಕ್ಲ ತೃತೀಯ ತಿಥಿಯಂದ (ತದಿಗೆ) ಶ್ರೀ ಗೌರಿ ಹಬ್ಬ. ಅಂದು ಸೂರ್ಯೋದಯ ಸಮಯದಲ್ಲಿ ತೃತೀಯ ತಿಥಿ ಇರಬೇಕು. ಗಣಪತಿಯ ಪೂಜೆಗೆ ಯೋಗ್ಯವಾಗಿರುವ ಚತುರ್ಥೀ ತಿಥಿಯ ಯೋಗವನ್ನು ಗೌರಿದೇವಿಯು ತುಂಬಾ ಪ್ರೀತಿಸುತ್ತಾಳೆ. ಹಾಗಾಗಿ ತೃತೀಯದೊಡನೆ ಚತುರ್ಥೀ ಯೋಗವು ಕೂಡಿ ಬಂದರೆ ಅಂದೇ ಗೌರಿಹಬ್ಬವನ್ನು ಆಚರಿಸಬೇಕು. ಗೌರಿದೇವಿಯು ಪರ್ವತ ಸಾರ್ವಭೌಮನಾದ ಹಿಮವಂತನ ಮಗಳು. ವರುಷಕ್ಕೊಮ್ಮೆ ತವರಿಗೆ ಬರುವ ಅವಳಿಗಾಗಿ ಹಬ್ಬವನ್ನು ಮಾಡುವುದು.

ಗೌರೀ ದೇವಿಯನ್ನು ಹೃದಯದಲ್ಲಿ ಧ್ಯಾನ ಮಾಡಿ ಅನಂತರ ಮಾತೆಗೆ ಬಾಹ್ಯಪೂಜೆ ಅರ್ಪಿಸಬೇಕು. ಗೌರಿದೇವಿಯ ಪ್ರತಿಮೆಯನ್ನು ಸುವರ್ಣ ರೂಪದಲ್ಲಿ, ಕಲಶ ರೂಪದಲ್ಲಿ, ಅರಿಶಿನ ರೂಪದಲ್ಲಿ ಅಥವಾ ಮಣ್ಣಿನ ರೂಪದಲ್ಲಿ ನಿರ್ಮಿಸಿ ಪೂಜೆ ಸಲ್ಲಿಸಬೇಕು. ಮರಳಿನಲ್ಲೂ ಗೌರಿಯನ್ನು ಆವಾಹಿಸಿ ಪೂಜಿಸುವ ಸಂಪ್ರದಾಯವಿದೆ. ನದಿತಟದಲ್ಲಿರುವ ಮರಳನ್ನು ಅರಿಶಿನದ ಬಟ್ಟೆಯಲ್ಲಿ ಇರಿಸಿ ಗಂಟು ಹಾಕಿ ಷೋಡಶೋಪಚಾರ ಪೂಜೆಯನ್ನು ಅರ್ಪಿಸಿ, ಮನೆಗೆ ಅಥವಾ ದೇಗುಲಕ್ಕೆ ತಂದು ಪೂಜಿಸುವರು. ಆಚಮನ, ಸಂಕಲ್ಪ, ಕಳಸ ಪೂಜೆಯ ನಂತರ ಮಹಾಗಣಪತಿಗೆ ಪೂಜಿಸಿ, ಸ್ವರ್ಣಗೌರಿಯನ್ನು ಪ್ರತಿಷ್ಠಾಪಿಸಬೇಕು.

ಪುಷ್ಪಾಕ್ಷತೆಯಿಂದ ಆವಾಹಿಸಿ, ರತ್ನಸಿಂಹಾಸನವನ್ನು ಸಮರ್ಪಿಸಬೇಕು. ಹೊಸದಾದ ಹದಿನಾರು ಗಂಟುಗಳ ದಾರವನ್ನೂ ದೇವಿಯೊಂದಿಗೆ ಪೂಜೆಗಿಡಬೇಕು. ಯಥಾವತ್ ಪಾದ್ಯ, ಅರ್ಘ್ಯ, ಆಚಮನ, ಮಧುಪರ್ಕ, ಪಂಚಾಮೃತ ಸ್ನಾನ, ಶುದ್ಧೋದಕ ಸ್ನಾನ, ವಸ್ತ್ರ, ಆಭರಣ, ಯಜ್ಞೋಪವೀತ, ಗಂಧ, ಅಕ್ಷತೆ, ಅರಿಶಿನ, ಕುಂಕುಮ ಮತ್ತಿತರೇ ಸೌಭಾಗ್ಯ ದ್ರವ್ಯಗಳನ್ನು ದೇವಿಗೆ ಅರ್ಪಿಸಬೇಕು. ಆಭರಣವೆಂದು ಹತ್ತಿಯಿಂದ ಮಾಡಿದ ಗೆಜ್ಜೆವಸ್ತ್ರವನ್ನು ಅರ್ಪಿಸುವುದು ಈಗಿನ ರೂಢಿ. ಹದಿನಾರು ಗಂಟುಗಳ ದಾರಕ್ಕೆ (ದೋರ) ಸ್ವರ್ಣಗೌರಿ, ಮಹಾಗೌರಿ, ಕಾತ್ಯಾಯಿನಿ, ಕೌವರಿ, ಭದ್ರಾ, ವಿಷ್ಣು ಸೋದರೀ, ಮಂಗಳ ದೇವತಾ, ರಾಕೇಂದುವದನಾ, ಚಂದ್ರಶೇಖರಪ್ರಿಯಾ, ವಿಶ್ವೇಶ್ವರಪತ್ನೀ, ದಾಕ್ಷಾಯಣೀ, ಕೃಷ್ಣವೇಣೀ, ಭವಾನೀ, ಲೋಲೇಕ್ಷಣಾ, ಮೇನಕಾತ್ಮಜಾ, ಸ್ವರ್ಣಗೌರೀ ಎಂಬ ಹದಿನಾರು ಹೆಸರುಗಳಿಂದ ಪೂಜಿಸಬೇಕು. ನಂತರ ದೇವಿಗೆ ಅಷ್ಟೋತ್ತರ ಶತನಾಮಾವಳಿ ಪೂರ್ವಕ ಕುಂಕುಮಾರ್ಚನೆ ಮಾಡಿ, ಧೂಪ, ದೀಪ, ನೈವೇದ್ಯ, ತಾಂಬೂಲ, ದಕ್ಷಿಣೆ, ಅರ್ಘ್ಯ, ನೀರಾಜನ, ಪುಷ್ಪಾಂಜಲಿ ಮತ್ತು ಪ್ರದಕ್ಷಿಣೆ ನಮಸ್ಕಾರಗಳನ್ನು ಸಲ್ಲಿಸಬೇಕು. ಅಂದು ವಿಶೇಷವಾದ ಅನ್ನ ಹೆಸರುಬೇಳೆಯಿಂದ ತಯಾರಿಸಿದ ಹುಗ್ಗಿಯನ್ನು ನೈವೇದ್ಯವಾಗಿ ಅರ್ಪಿಸುವುದೂ ವಾಡಿಕೆ. ನಂತರ ಪೂಜಿಸಿದ ದಾರವನ್ನು ಹೂವಿನೊಂದಿಗೆ ಕೈಗೆ ಹಿರಿಯರಿಂದ ಕಟ್ಟಿಸಿಕೊಂಡು ಅವರಿಗೆ ನಮಸ್ಕಾರವನ್ನು ಸಲ್ಲಿಸಬೇಕು.

ಮಾರನೆಯದಿನ ಮಗನಾದ ಗಣಪತಿಯನ್ನು ಕೈಲಾಸಕ್ಕೆ ಕರೆದೊಯ್ಯಲು ಬರುವನು. ಅವನಿಗೆ ಪೂಜೆ ಸಲ್ಲಿಸುವುದೇ ಗಣಪತಿ ಹಬ್ಬ. ಮನೆಯ ಮಗಳಾದ ಗೌರಿಯನ್ನು ಕಳುಹಿಸಿಕೊಡುವಾಗ ಸೋಬಲಕ್ಕಿ ಇಡುವರು. ಅವಳನ್ನು ಕಳುಹಿಸುವದಕ್ಕೆ ವಿಶೇಷದಿನವನ್ನು ನೋಡುವುದು ಪರಿಪಾಠ. ಮಂಗಳವಾರ, ಶುಕ್ರವಾರ, ಪಂಚಮೀ, ನವಮೀ ತಿಥಿಗಳಂದು ಮನೆಯ ಮಗಳನ್ನು ಕಳುಹಿಸುವುದಿಲ್ಲ.

ಗಣಪತಿ ಪೂಜೆ

ಗಣಾನಾಂ ತ್ವಾ ಗಣಪತಿಂ ಹವಾಮಹೇ, ಕವಿಂ ಕವೀನಾಂ ಉಪಮಶ್ರಮವಸ್ತಮಂ|
ಜ್ಯೇಷ್ಠ ರಾಜಂ ಬ್ರಹ್ಮಣಾಂ ಬ್ರಹ್ಮಣಸ್ಪತ ಆನ:ಶೃಣ್ವನ್ ನೂತಿಭಿ: ಸೀದ ಸಾದನಮ್

ಇದು ವೇದ ಮಂತ್ರವಾದರೆ, ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್ ಎಂಬುದು ಬೀಜಾಕ್ಷರ ಮಂತ್ರ.

ತ್ವಮೇವ ಕೇವಲಂ ಕರ್ತಾಸಿ
ತ್ವಮೇವ ಕೇವಲಂ ಧರ್ತಾಸಿ
ತ್ವಮೇವ ಕೇವಲಂ ಹರ್ತಾಸಿ
ತ್ವಮೇವ ಸರ್ವಂ ಖಲ್ವಿದಂ ಬ್ರಹ್ಮಾಸಿ
ತ್ವಂ ಸಾಕ್ಷಾದಾತ್ಮಾಸಿ ಆತ್ಮಂ
ತ್ವಂ ಬ್ರಹ್ಮಾ ವಿಷ್ಣುಸ್ತ್ವಂ ರುದ್ರಸ್ತ್ವಂ ಇಂದ್ರಸ್ತ್ವಂ ಅಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮಭೂರ್ಭುವಸ್ಸುವರೋಮ್.

ಗಣೇಶಾಥರ್ವಶೀರ್ಷದಲ್ಲಿ ಹೀಗೆ ಆತನನ್ನು ವರ್ಣಿಸಿದೆ.

ಗಣೇಶನು ಶಿವನ ಗಣಗಳ ಅಧಿಪತಿ. ಸ್ವರ್ಣಗೌರಿಯ ಪ್ರೀತಿಯ ಪುತ್ರ. ವಿಘ್ನ ವಿನಾಶಕ ವಿನಾಯಕ.

ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗುದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು. ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು.

ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಇದರ ಬಗೆಗಿನ ಕಥೆ ಎಲ್ಲರಿಗೂ ತಿಳಿದಿರುವುದೇ.

ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ.

ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.

ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.

ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.

ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್

ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ದೇಶದಲ್ಲೆಲ್ಲಾ ದೀಪಾವಳಿ


ಭವಿಷ್ಯೋತ್ತರ ಪುರಾಣದಲ್ಲಿ (೧೪೦-೭೧) ಹೇಳಿರುವ ಉಕ್ತಿ ಹೀಗಿದೆ

ಉಪಶಮಿತ ಮೇಘನಾದಂ
ಪ್ರಜ್ವಲಿತ ದಶಾನನಂ ರಮಿತರಾಮಂ|
ರಾಮಾಯಣಮಿದಂ ಸುಭಗಂ
ದೀಪದಿನಂ ಹರತು ವೋ ದುರಿತಂ||

devi1.JPG
ರಾಮಾಯಣದಲ್ಲಿ ಮೇಘನಾಥನು (ಇಂದ್ರಜಿತು) ಶಾಂತನಾಗುವಂತೆ ಈ ಮಹೋತ್ಸವದಲ್ಲಿ ಮೇಘನಾದವು (ಗುಡುಗು) ಶಾಂತವಾಗಿಬಿಟ್ಟಿರುತ್ತದೆ. ರಾಮಾಯಣದಲ್ಲಿ ದಶಮುಖರಾವಣನು ಸುಡಲ್ಪಡುವಂತೆ ಇದರಲ್ಲಿ ದಶೆ(ಬತ್ತಿ)ಗಳನ್ನು ಉರಿಸಲ್ಪಡುವುದು. ಅಲ್ಲಿ ರಾಮನು ರಮಿಸುವಂತೆ ಇಲ್ಲಿ ಶ್ರೀರಾಮನೂ ಮತ್ತು ರಮಣಿಯರೂ ರಮಿಸುತ್ತಾರೆ. ಹೀಗೆ ರಾಮಾಯಣದಂತೆ ರಮಣೀಯವಾಗಿರುವ ದೀಪಾವಳಿ ಮಹೋತ್ಸವ ದಿನವು ನಮ್ಮ ಹಾಗೂ ನಿಮ್ಮ ಪಾಪಗಳನ್ನು ಹೋಗಲಾಡಿಸಲಿ.

ನಮ್ಮ ದೇಶದಲ್ಲಿ ಅಲ್ಲದೇ ಅಕ್ಕ ಪಕ್ಕದ ದೇಶಗಳಲ್ಲೆಲ್ಲಾ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ ಕೆಲವೇ ಹಬ್ಬಗಳಲ್ಲಿ, ದೀಪಾವಳಿಯೂ ಮುಖ್ಯವಾದುದು. ಇದನ್ನು ನಾಡಹಬ್ಬವಾಗಿಯೂ ಆಚರಿಸುವ ಸಂಪ್ರದಾಯವುಂಟು.

ದೀಪಗಳ ಆವಳಿ – ಸರಮಾಲೆ – ದೀಪಗಳ ಸಾಲು ಎಂದರ್ಥ. ಕಾರ್ತಿಕ ಮಾಸದ ಕಡೆಯಲ್ಲಿ ಮನೆ ಮಂದಿರಗಳಲ್ಲಿ ಕಾರ್ತೀಕ ದೀಪೋತ್ಸವ, ಶಿವ ದೀಪೋತ್ಸವ ಮತ್ತು ವಿಷ್ಣು ದೀಪೋತ್ಸವಗಳೆಂದು ಕರೆದು ಎಲ್ಲೆಡೆ ದೀಪಗಳನ್ನು ಸಾಲು ಸಾಲಾಗಿ ಹಚ್ಚಿಡುವರು. ಮುಂದೆ ಕಾರ್ತೀಕ ದೀಪೋತ್ಸವದಲ್ಲಿ ದೀಪಗಳನ್ನು ಬೆಳಗಿಸುವ ಸಮಾರಂಭಕ್ಕೆ ದೀಪಾವಳಿಯು ನಾಂದಿಯಾಗಿರುತ್ತದೆ. ದೀಪಾವಳಿ ಉತ್ಸವದಲ್ಲಿ ಮಹಾವಿಷ್ಣುವಿನ ಪೂಜೆ, ನರಕಾಸುರನ ವಧೆ, ಬಲೀಂದ್ರ ವಿಜಯದ ಪೂಜೆ, ಮಹಾಲಕ್ಷ್ಮಿಯ ಪೂಜೆ, ಮಹಾದೇವನ ಪೂಜೆ, ಮಹಾರಾತ್ರಿಯ ಪೂಜೆ, ಕುಬೇರನ ಪೂಜೆ, ಯಮಧರ್ಮರಾಜನ ಪೂಜೆ, ಗೋವಿನ ಪೂಜೆ ಮತ್ತು ಗೋವರ್ಧನ ಪೂಜೆಗಳನ್ನೂ ಮಾಡುವರು. ಈ ಸಮಯದಲ್ಲಿ ಪಶು ಪ್ರಾಣಿಗಳಿಗೂ ಪೂಜೆಯಲ್ಲಿ ಆದ್ಯತೆ ನೀಡಲಾಗುವುದು. ಇಷ್ಟಲ್ಲದೇ ಇದೇ ಸಮಯದಲ್ಲಿ ದೀಪದಾನವನ್ನೂ ನಡೆಸುವರು. ಇಷ್ಟಲ್ಲದೇ ವಿಶೇಷ ದಿನಗಳಲ್ಲಿ ಆಯಾ ಪ್ರಾಂತ್ಯಗಳಲ್ಲಿ ಆಚರಣೆಯಲ್ಲಿರುವ ಕೌಮುದೀ ಮಹೋತ್ಸವ, ನರಕ ಚತುರ್ದಶೀ, ಬಲಿಪಾಡ್ಯಮಿ, ವೀರಪ್ರತಿಪದಾ, ಭಗಿನೀ ದ್ವಿತೀಯಾ (ಬಿಹಾರ ಉತ್ತರ ಪ್ರದೇಶಗಳಲ್ಲಿ ಭಾವುದೂಜ್), ಸೋದರ ಬಿದಿಗೆ (ಮಹಾರಾಷ್ಟ್ರದಲ್ಲಿ ಭಾವುಬೀಜ್) ಇತ್ಯಾದಿ ಹಬ್ಬಗಳನ್ನು ಆಚರಿಸುವರು.

deepa1.JPG
ಆಶ್ವಯುಜ ಮಾಸ ಕೃಷ್ಣ ಪಕ್ಷದ ತ್ರಯೋದಶಿಯ ಸಂಜೆ ಶುದ್ಧವಾದ ನೀರನ್ನು ಮನೆಯ ಎಲ್ಲ ಪಾತ್ರೆಗಳಿಗೂ ಸ್ನಾನಕ್ಕಾಗಿಯೂ ತುಂಬಿಟ್ಟು, ರಾತ್ರಿ ಸಮಯದಲ್ಲಿ ಅಪಮೃತ್ಯ ನಿವಾರಣೆಗಾಗಿ ಯಮಧರ್ಮರಾಜನನ್ನು ಸಂತೋಷಪಡಿಸಲು ಮನೆಯ ಹೊರಗಡೆ ದೀಪವನ್ನು ಹೊತ್ತಿಸಿಡುವರು. ಇದಕ್ಕೆ ಯಮದೀಪ ಎಂದು ಹೆಸರಿಸುವರು. ಮೃತ್ಯುವಿನಿಂದಲೂ, ಪಾಶದಂಡಗಳಿಂದಲೂ, ಕಾಲಪುರುಷನಿಂದಲೂ ಮತ್ತು ಶ್ಯಾಮಾದೇವಿಯಿಂದಲೂ ಕೂಡಿದ ಸೂರ್ಯಪುತ್ರ ಯಮಧರ್ಮರಾಜನು ತ್ರಯೋದಶಿಯ ಈ ದೀಪದಾನದಿಂದ ಸಂತುಷ್ಟನಾಗುವನು. ಅಂದಿನ ದಿನವನ್ನು ನೀರು ತುಂಬುವ ಹಬ್ಬವೆಂದೂ ಕರೆವರು. ದಕ್ಷಿಣ ಭಾರತದಲ್ಲಿ ನೀರು ಕಾಯಿಸುವ ಒಲೆಯನ್ನು ಚೆನ್ನಾಗಿ ತೊಳೆದು ಅದಕ್ಕೆ ಅರಿಶಿನ, ಕುಂಕುಮಗಳೊಂದಿಗೆ ರಂಗೋಲಿಯನ್ನಿಟ್ಟು ಮಾರನೆಯ ದಿನದ ಅಭ್ಯಂಜನ ಸ್ನಾನಕ್ಕೆ ಅಣಿಗೊಳಿಸುವರು.
ಮಾರನೆಯದಿನ ಚತುರ್ದಶಿಯಂದು ಬ್ರಾಹ್ಮೀ ಮುಹೂರ್ತದಲ್ಲಿ ಅಭ್ಯಂಜನ ಸ್ನಾನ ಮಾಡಿ, ಹೊಸದಾಗಿ ಮದುವೆಯಾದ ಅಳಿಯ ಮತ್ತು ಅವನ ಬಂಧುಬಳಗವನ್ನು ಕರೆಸಿ ಸುಖ ಸಂತೋಷಪಡಿಸುವುದೂ ಪದ್ಧತಿಯಲ್ಲಿದೆ. ಅಭ್ಯಂಜನ ಸ್ನಾನದಿಂದ ನರಕಾಂತಕನಾದ ನಾರಾಯಣನಿಗೆ ಸಂತೋಷ ಉಂಟಾಗುತ್ತದೆ ಮತ್ತು ನರಕಭೀತಿ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. ಅಭ್ಯಂಜನಕ್ಕೆ ಉಪಯೋಗಿಸುವ ಎಣ್ಣೆ ಮತ್ತು ಪುಡಿಗಳಿಗೆ ವಿಶೇಷವಾದ ಶಕ್ತಿ ಇದ್ದು ನರ ದೌರ್ಬಲ್ಯವನ್ನು ತಡೆಗಟ್ಟುವುದು. ಅಂದು ಯಮಧರ್ಮರಾಜನಿಗೆ ಹದಿನಾಲ್ಕು ಹೆಸರುಗಳಿಂದ ತಿಲತರ್ಪಣವನ್ನು ಕೊಡುವ ವಿಧಿಯೂ ಇದೆ. ಅಂದು ಬೈಗಿನಲ್ಲೂ ಮತ್ತು ರಾತ್ರಿಯಲ್ಲಿಯೂ ಮಕ್ಕಳಾದಿಯಾಗಿ ದೊಡ್ಡವರೂ ಸೇರಿ ಪಟಾಕಿ, ಬಾಣ ಬಿರುಸುಗಳನ್ನು ಸುಟ್ಟು ನಲಿಯುವರು. ನರಕಪರಿಹಾರಕ್ಕೋಸ್ಕರವಾಗಿ ದೇವಾಲಯಗಳಲ್ಲಿ, ಮಠ, ಬೃಂದಾವನ ಮತ್ತು ಮನೆಗಳ ಅಂಗಳಗಳಲ್ಲಿ, ನದಿ, ಬಾವಿ ಮತ್ತು ಮುಖ್ಯ ಬೀದಿಗಳಲ್ಲಿಯೂ ನಾಲ್ಕು ಬತ್ತಿಗಳುಳ್ಳ ದೀಪಗಳನ್ನು ಹಚ್ಚಿಡುವರು.

untitled1.JPG
ಮಾರನೆಯ ದಿನ ಅಮಾವಾಸ್ಯೆಯಂದು ಅಭ್ಯಂಜನ ಸ್ನಾನ ಮಾಡಿ ಲಕ್ಷ್ಮೀದೇವಿಯನ್ನು ಪೂಜಿಸಬೇಕು. ಸ್ನಾನ ಮಾಡುವ ನೀರಿನಲ್ಲಿ ಅರಳಿ, ಅತ್ತಿ, ಮಾವು, ಆಲ ಮತ್ತು ಪ್ಲಕ್ಷ ಎಂಬ ಮರಗಳ ತೊಗಟೆಗಳನ್ನು ಸೇರಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ದೇವತಾ ಪೂಜೆಯ ನಂತರ ಪಿತೃ ದೇವತೆಗಳಿಗೆ ತರ್ಪಣ ಕೊಡುವ ಪದ್ಧತಿಯೂ ಇದೆ. ಹೆಚ್ಚಿನದಾಗಿ ಉತ್ತರ ಭಾರತದಲ್ಲಿ ಮತ್ತು ಇತರೆಡೆಗಳಲ್ಲಿ ರಾತ್ರಿ ಪೂರ್ತಿ ಜಾಗರಣೆ ಮಾಡಿ ಸಂಪತ್ತಿನ ಒಡತಿ ಲಕ್ಷ್ಮಿಯನ್ನು ಪೂಜಿಸುವರು. ವರ್ತಕರು ಲೆಕ್ಕಾಚಾರಕ್ಕಾಗಿ ಹೊಸ ಪುಸ್ತಕಗಳನ್ನು ತೆರೆಯುವರು. ಅದನ್ನು ಪೂಜಿಸಿ, ತಮ್ಮಲ್ಲಿಗೆ ಬರುವ ಗ್ರಾಹಕರಿಗೆ ಸಿಹಿತಿಂಡಿಗಳನ್ನು ಮತ್ತು ತಾಂಬೂಲವನ್ನು ನೀಡುವರು. ಅಂದು ಅವರುಗಳಿಗೆ ಇದು ಹೊಸವರ್ಷದ ಮೊದಲ ದಿನ. ಲಕ್ಷ್ಮೀದೇವಿಯ ಜೊತೆಗೆ ಧನಾಧಿಪತಿಯಾದ ಕುಬೇರನನ್ನೂ ಆರಾಧಿಸುವ ವಾಡಿಕೆ ಇದೆ. ಅಂದು ಮುಂಬಯಿಯ ಶೇರು ಮಾರುಕಟ್ಟೆಯಲ್ಲಿ (ಇತರೆ ಮಾರುಕಟ್ಟೆಗಳಲ್ಲಿಯೂ ಸಹ) ಮೂರತ್ ಟ್ರೇಡಿಂಗ್ ಅಥವಾ ಮುಹೂರ್ತ ವ್ಯಾಪಾರವೆಂದು ಎಲ್ಲರೂ ಪಾಲ್ಗೊಳ್ಳುವರು. ಪ್ರತಿ ಮನೆ ಮನೆಗಳಲ್ಲಿಯೂ ಅತಿ ಕಡಿಮೆ ಎಂದರೆ ಒಂದು ಗ್ರಾಮಿನಷ್ಟು ಚಿನ್ನ ಅಥವಾ ಬೆಳ್ಳಿಯನ್ನು ಕೊಳ್ಳುವುದೂ ವಾಡಿಕೆ. ಅಂದು ಚಿನಿವಾರರ ಅಂಗಡಿಗಳಲ್ಲಿ ಬಹಳ ಜೋರಿನಿಂದ ವ್ಯಾಪಾರವಾಗುವುದು. ಅಂದು ಅಕ್ಕ ಪಕ್ಕದ ಮನೆಯವರುಗಳಿಗೆ ಮತ್ತು ನೆಂಟರಿಷ್ಟರುಗಳಿಗೆ ಬಾಗಿನ ಕೊಡುವುದೂ ರೂಢಿಯಲ್ಲಿದೆ. ಸಿಹಿತಿಂಡಿಗಳನ್ನು ಎಲ್ಲರೂ ನೀಡುವರೆಂದು ಈಗೀಗ ಒಣಹಣ್ಣುಗಳನ್ನು (ಡ್ರೈಫ್ರೂಟ್) ಕೊಡುವ ಅಭ್ಯಾಸ ಚಾಲ್ತಿಯಲ್ಲಿದೆ. ಅಂಗಡಿಗಳಲ್ಲಿ ಇದನ್ನೇ ಪ್ರತ್ಯೇಕವಾಗಿ ಪ್ಯಾಕ್ ಮಾಡಿಟ್ಟಿರುತ್ತಾರೆ. ಇದಲ್ಲದೇ ಉಡುಗೊರೆಯಾಗಿ ಬೆಳ್ಳಿ ಅಥವಾ ಚಿನ್ನದ ನಾಣ್ಯವನ್ನೂ ನೀಡುವರು. ಕೆಲಸಗಾರರಿಗೆ ಮಾಲೀಕರು ಬೋನಸ್, ಉಡುಗೊರೆಯನ್ನಿತ್ತರೆ, ದೈನಂದಿನ ಸೇವೆಗಳನ್ನು ನೀಡುವ ಹಾಲಿನವರು, ದಿನಪತ್ರಿಕೆ ಸರಬರಾಜು ಮಾಡುವವರು, ಕಟ್ಟಡಗಳನ್ನು ಕಾಯುವ ರಕ್ಷಣಾ ಪಡೆಯವರು, ಕ್ಯಾಂಟೀನಿನಲ್ಲಿ ಕೆಲಸ ಮಾಡುವವರು, ಮಹಾನಗರಪಾಲಿಕೆಯ ಕೆಲಸಗಾರರು, ವಿದ್ಯುತ್ ಮತ್ತು ದೂರವಾಣಿ ಇಲಾಖೆಯವರು, ಮತ್ತಿತರೇ ಮಂದಿಗಳಿಗೂ ಉಡುಗೊರೆಯಾಗಿ ಹಣವನ್ನು ಕೊಡುವ ಪರಿಪಾಠವಿದೆ. ಒಮ್ಮೊಮ್ಮೆ ಇದು ಅತಿರೇಕಕ್ಕೆ ಹೋಗಿ, ಹಣ ನೀಡದವರನ್ನು ಒತ್ತಾಯ ಮಾಡಿ ಹಣ ನೀಡುವಂತೆ ಮಾಡುವರು ಅಥವಾ ಅವರುಗಳೊಂದಿಗೆ ಜಗಳಕ್ಕಿಳಿಯುವರು.

ಕಾರ್ತಿಕ ಶುದ್ಧ ಪ್ರಥಮಾ ತಿಥಿಯಂದು ಬಲಿಪಾಡ್ಯಮಿ. ಅಂದು ಸ್ವಾತಿ ನಕ್ಷತ್ರವಿದ್ದರೆ ಇನ್ನೂ ತುಂಬಾ ಶ್ರೇಷ್ಠವಾದ ದಿನ. ಅಂದಿನ ಮುಖ್ಯ ವಿಧಿಗಳಲ್ಲಿ ಬಲೀಂದ್ರ ಪೂಜೆಯೂ ಒಂದು. ಬಲೀಂದ್ರನ ಚಿತ್ರವನ್ನು ಐದು ಬಣ್ಣದ ಪುಡಿಗಳಿಂದ ರಚಿಸಬೇಕು ಅಥವಾ ವಿಗ್ರಹವನ್ನು ಪ್ರತಿಷ್ಠಾಪಿಸಬೇಕು. ಆತನೊಡನೆ ಆತನ ಪತ್ನಿ ವಿಂಧ್ಯಾವಳೀ ಮತ್ತು ಪರಿವಾರದ ರಾಕ್ಷಸರಾದ ಬಾಣ, ಕೂಷ್ಮಾಂಡ ಮತ್ತು ಮುರರನ್ನು ಚಿತ್ರಿಸಬೇಕು. ಬಲೀಂದ್ರನನ್ನು ಕರ್ಣಕುಂಡಲ, ಕಿರೀಟ ಮುಂತಾದ ಆಭರಣಗಳಿಂದ ಅಲಂಕಾರಗೊಳಿಸಬೇಕು. ಕಮಲದ ಹೂ, ಸುವರ್ಣ ಪುಷ್ಪ, ಗಂಧ, ಧೂಪ, ದೀಪ ಮತ್ತು ನೈವೇದ್ಯಗಳಿಂದ ಆತನನ್ನು ಪೂಜಿಸಬೇಕು. ನಮ್ಮಲ್ಲಿ ಬಲೀಂದ್ರನ ವಿಗ್ರಹವನ್ನು ಹಸುವಿನ ಸಗಣಿಯಿಂದ ಮಾಡುವರು. ಬಲಿ ಚಕ್ರವರ್ತಿಯ ನೆನಪಿನಲ್ಲಿ ದಾನವನ್ನು ಮಾಡುವುದರಿಂದ ದಾನವು ಅಕ್ಷಯವಾಗುವುದು ಮತ್ತು ನಾರಾಯಣನು ಪ್ರಸನ್ನನಾಗುವನು ಎಂಬ ಪ್ರತೀತಿ ಇದೆ. ಅಂದಿನ ದಿನದಲ್ಲಿ ಶಿವನು ಪಾರ್ವತಿಯೊಡನೆ ಪಗಡೆಯಾಡಿದಂತೆ, ಹಳ್ಳಿಗಳಲ್ಲಿ ಪಗಡೆ ಮತ್ತು ಜೂಜುಗಳನ್ನಾಡುವರು. ಅಂದು ಜಯ ಹೊಂದಿದವರು ವರ್ಷಪೂರ್ತಿ ಜಯ ಹೊಂದುವರು ಎಂಬ ನಂಬಿಕೆ ಇದೆ. ಅಂದು ಹಸುಗಳಿಗೆ ಮತ್ತು ಎತ್ತುಗಳಿಗೆ ಸಂಪೂರ್ಣ ವಿಶ್ರಾಂತಿಯನ್ನು ಕೊಡಬೇಕು. ಅವುಗಳಿಗೆ ಸ್ನಾನ ಮಾಡಿಸಿ ಅಲಂಕರಿಸಿ, ಒಳ್ಳೆಯ ಆಹಾರವನ್ನು ಕೊಟ್ಟು ಪೂಜಿಸಬೇಕು. ಗೋವರ್ಧನ ಪರ್ವತವನ್ನು ಪ್ರದಕ್ಷಿಣೆ ಮಾಡಿ ಗೋಪಾಲಕೃಷ್ಣನನ್ನು ಪೂಜಿಸಬೇಕು. ಗೋವರ್ಧನ ಗಿರಿಗೆ ಹೋಗಲಾಗದವರು ಆ ಪರ್ವತದ ಚಿತ್ರವನ್ನು ರಚಿಸಿ ಪೂಜಿಸಬೇಕು. ರಾತ್ರಿಯ ವೇಳೆಯಲ್ಲಿ ಹಸು ಕರು ಎತ್ತುಗಳನ್ನು ಬೆಂಕಿಯ ಮೇಲೆ ಓಡಿಸುವರು. ಇದಕ್ಕೆ ಕಿಚ್ಚು ಹಾಯಿಸುವ

om.JPG
ುದು ಎಂದು ಕರೆವರು. ಇದರಿಂದ ಪಶುಗಳ ಮೇಲೆ ದುಷ್ಟ ಶಕ್ತಿಗಳ ಆಕ್ರಮಣವಾಗುವುದಿಲ್ಲ ಎಂಬ ನಂಬಿಕೆ ಇದೆ.

ಕಾರ್ತಿಕ ಶುದ್ಧ ದ್ವಿತೀಯಾ ತಿಥಿಯಂದು ಉತ್ತರ ಭಾರತದಲ್ಲಿ ಭಾವು ದೂಜ್ ಎಂದೂ, ಮಹಾರಾಷ್ಟ್ರದಲ್ಲಿ ಭಾವುಬೀದ್ ಎಂದೂ, ಇತರೆ ಕಡೆಗಳಲ್ಲಿ, ಭ್ರಾತೃದ್ವಿತೀಯಾ, ಯಮದ್ವಿತೀಯಾ, ಭಗಿನೀದ್ವಿತೀಯಾ ಅಥವಾ ಸೋದರಿ ಬಿದಿಗೆ ಎಂದು ಹಬ್ಬವನ್ನಾಚರಿಸುವರು. ಆ ದಿನದಂದು ಯಮಧರ್ಮರಾಜನು ತನ್ನ ಸೋದರಿಯಾದ ಯಮುನಾದೇವಿಯ ಮನೆಗೆ ತೆರಳಿ ಆಕೆಯ ಆತಿಥ್ಯವನ್ನು ಗೌರವಿಸಿದನೆಂದು ಪ್ರತೀತಿ ಇದೆ. ಅಂದು ಮಧ್ಯಾಹ್ನ ಪುರುಷರು ತಮ್ಮ ಮನೆಗಳಲ್ಲಿ ಊಟ ಮಾಡದೇ, ಸೋದರಿಯ ಮನೆಗೆ ಔತಣಕ್ಕೆ ಹೋಗಬೇಕು. ಆಕೆಗೆ ಯಥಾಶಕ್ತಿ ಉಡುಗೊರೆಯನ್ನು ಇತ್ತು ಗೌರವಿಸಬೇಕು. ಅಂದು ಯಮನಿಗೂ, ಯಮುನಾದೇವಿಗೂ ಮತ್ತು ಚಿತ್ರಗುಪ್ತನಿಗೂ ಅರ್ಘ್ಯವನ್ನು ಅರ್ಪಿಸಿ ಪೂಜೆಯನ್ನು ಸಲ್ಲಿಸಬೇಕು. ಅಲ್ಲದೇ ಚಿರಂಜೀವಿಗಳಾದ ಮಾರ್ಕಂಡೇಯ, ಬಲಿ, ವ್ಯಾಸ, ಹನುಮಂತ, ವಿಭೀಷಣ, ಕೃಪ, ಪರಶುರಾಮ ಮತ್ತು ಅಶ್ವತ್ಥಾಮ ಇವರುಗಳಿಗೆ ಪೂಜೆ ಸಲ್ಲಿಸಬೇಕು.

ಛಠ್ ಪೂಜೆಯ ಬಗ್ಗೆ ಒಂದೆರಡು ಮಾತುಗಳು. ಈ ವ್ರತದ ಬಗ್ಗೆ ಒಂದೆರಡು ಮಾತುಗಳು. ಈ ಒಂದು ರಾತ್ರಿ ಮತ್ತು ಒಂದು ದಿನ ವ್ರತಾರ್ಥಿಗಳು ಗಂಗಾ ನದಿಯ ದಡದಲ್ಲೇ ಇರುವರು. ಅಂದು ಕಟ್ಟುಪವಾಸ ಮಾಡುವರು. ಅಂದು ಬೆಳಗಿನಲ್ಲೇ ಭಕ್ತರು ಗಂಗೆಯಲ್ಲಿ ಮಿಂದು ಮನೆಯಲ್ಲಿ ನೈವೇದ್ಯ ಅರ್ಪಿಸಲು ಗಂಗೆಯ ನೀರನ್ನು ಮನೆಗೆ ತರುವರು. ನೈವೇದ್ಯಕ್ಕೆಂದು ಅರ್ಪಿಸಲು ಖೀರು ( ಪಾಯಸ ), ಪೂರಿ ಮತ್ತು ಬಾಳೆಹಣ್ಣುಗಳನ್ನು ಇಡುವರು. ಬೆಳಗ್ಗೆ ನೈವೇದ್ಯವನ್ನು ತಯಾರಿಸಿ ಸಂಜೆಗೆ ಸೂರ್ಯ ಮುಳುಗುವ ವೇಳೆಯಲ್ಲಿ ನದಿಯ ದಡದಲ್ಲಿ ಸೂರ್ಯದೇವರಿಗೆ ನೈವೇದ್ಯವನ್ನು ಅರ್ಪಿಸುವರು. ರಾತ್ರಿಯಾದೊಡನೆ ಮನೆಗೆ ಬಂದು ಕಬ್ಬಿನ ಜಲ್ಲೆಯಲ್ಲಿ ಚಪ್ಪರವನ್ನು ನಿರ್ಮಿಸಿ ಅದರಲ್ಲಿ ಮಣ್ಣಿನ ಆನೆಯನ್ನು ಮಾಡಿಟ್ಟು ಹಣತೆಗಳಲ್ಲಿ ದೀಪವನ್ನು ಹಚ್ಚಿಟ್ಟು ನೈವೇದ್ಯವನ್ನು ಅರ್ಪಿಸುವರು. ನಂತರ ಅಗ್ನಿ ದೇವನನ್ನು ಆರಾಧಿಸುವರು. ನಸುಕಿನ ಸೂರ್ಯೋದಯಕ್ಕೆ ಮುನ್ನ ನದೀ ದಡಕ್ಕೆ ಹೋಗಿ ಸೂರ್ಯನಿಗೆ ನೈವೇದ್ಯವನ್ನು ಅರ್ಪಿಸಿ, ನಂತರ ತಾವು ಅದನ್ನು ಪ್ರಸಾದವೆಂದು ಸ್ವೀಕರಿಸುವರು.

ಹೊಸದಾಗಿ ಮದುವೆಯಾದ ಹೆಣ್ಣುಮಗಳನ್ನು ಮನೆಗೆ ಕರೆಸಿ, ದೀಪಾವಳಿಯ ನಂತರ ಈ ಛಠ್ ಪೂಜೆಯನ್ನು ಮಾಡಿಸಿ ಮಗಳಿಗೆ ಮತ್ತು ಅಳಿಯನಿಗೆ ಉಡುಗೊರೆಯನ್ನು ನೀಡುವರು.

deepa.JPG
ಈ ಹಬ್ಬಗಳ ಸಮೂಹದಲ್ಲಿ ಉಪಯೋಗಿಸುವ ಸಗಣಿಯಲ್ಲಿ ಕ್ರಿಮಿನಾಶಕ ಅಂಶವಿದೆ. ಅಂದು ಸಿಡಿಸುವ ಪಟಾಕಿ ಸುಡುಮದ್ದುಗಳಿಂದ ಹುಳು ಹುಪ್ಪಟೆಗಳು ನಾಶವಾಗಿ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗುವುದು.

ಎಲ್ಲ ಓದುಗರಿಗೂ ಮತ್ತು ಅವರುಗಳ ಬಂಧು ಬಾಂಧವರಿಗೂ ದೀಪಾವಳಿಯ ಶುಭಾಶಯಗಳು.

ಸಕಲಂ ಸನ್ಮಂಗಳಾನಿ ಭವತು.

ವಿಭಾಗಗಳು
ಆಚಾರ-ವಿಚಾರ - Rituals

ದತ್ತಾತ್ರೇಯ ತವಶರಣಂ

ಗೆಳೆಯ ಶ್ರೀಯುತ ನಾರಾಯಣ ಶಾಸ್ತ್ರಿಗಳು ದತ್ತ ಭಜನೆಯನ್ನು ಬರೆದು ಕಳುಹಿದ್ದಾರೆ. ಅದನ್ನು ನನ್ನ ಬ್ಲಾಗಿನಲ್ಲಿ ಏರಿಸಿ, ಜೊತೆಗೆ ನನಗೆ ತಿಳಿದ ಒಂದೆರಡು ಮಾತುಗಳನ್ನು ಬರೆಯಲು ತಿಳಿಸಿದ್ದಾರೆ.

ಮೊದಲಿಗೆ ಅವರ ಬರಹವನ್ನು ನಿಮ್ಮ ಮುಂದಿರಿಸುವೆ.

ದತ್ತಾತ್ರೇಯ ತವಶರಣಂ


ದತ್ತಾತ್ರೇಯ ತವಶರಣಂ | ದತ್ತ ನಾಥ ತವಶರಣಂ ||

ತ್ರಿಗುಣಾತ್ಮಕ ತ್ರಿಗುಣಾತೀತ | ತ್ರಿಭುವನ ಪಾಲಕ ತವಶರಣಂ ||

ಶಾಶ್ವತಮೂರ್ತೇ ತವಶರಣಂ | ಶ್ಯಾಮಸುಂದರ ತವಶರಣಂ ||

ಶೇಷಾಭರಣ ಶೇಷಭೂಷಣ | ಶೇಷಶಾಯಿಯೇ ತವಶರಣಂ ||

ಷಡ್ಭುಜಮೂರ್ತೇ ತವಶರಣಂ | ಷಡ್ಭುಜಯತಿವರ ತವಶರಣಂ |

ದಂಡಕಮಂಡಲ ಗದಾ ಪದ್ಮ | ಶಂಖ ಚಕ್ರ ಧರ ತವಶರಣಂ ||

ಕರುಣಾನಿಧೇ ತವಶರಣಂ | ಕರುಣಾಸಾಗರ ತವಶರಣಂ ||

ಕೃಷ್ಣಾಸಂಗಮ ತರುವರವಾಸ | ಭಕ್ತವತ್ಸಲ ತವಶರಣಂ ||

ಶ್ರೀ ಗುರುನಾಥ ತವಶರಣಂ | ಸದ್ಗುರುನಾಥ ತವಶರಣಂ ||

ಶ್ರೀಪಾದ ಶ್ರೀ ವಲ್ಲಭ ಗುರುವರ | ನೃಸಿಂಹ ಸರಸ್ವತಿ ತವಶರಣಂ ||

ಕೃಪಾಮೂರ್ತೇ ತವಶರಣಂ | ಕೃಪಾಸಾಗರ ತವಶರಣಂ ||

ಕೃಪಾಕಟಾಕ್ಷ ಕೃಪಾವಲೋಕನ | ಕೃಪಾನಿಧೇ ತವಶರಣಂ ||

ಕಾಲಾಂತಕ ತವಶರಣಂ | ಕಾಲನಾಶಕ ತವಶರಣಂ ||

ಪೂರ್ಣಾನಂದ ಪೂರ್ಣಪರೇಶ | ಪುರಾಣಪುರುಷ ತವಶರಣಂ ||

ಜಗದೀಶ್ವರ ತವಶರಣಂ | ಜಗನ್ನಾಥ ತವಶರಣಂ ||

ಜಗತ್ಪಾಲಕ ಜಗದಾಧೀಶ | ಜಗದೋದ್ಧಾರಕ ತವಶರಣಂ ||

ಅಖಿಲಾಂತಕ ತವಶರಣಂ | ಅಖಿಲೈಶ್ವರ್ಯ ತವಶರಣಂ ||

ಭಕ್ತಜನಪ್ರಿಯ ಭವಭಯನಾಶಕ | ಪ್ರಸನ್ನವದನ ತವಶರಣಂ ||

ದಿಗಂಬರ ತವಶರಣಂ | ದೀನದಯಾಘನ ತವಶರಣಂ ||

ದೀನನಾಥ ದೀನದಯಾಲೊ | ದೀನೋದ್ಧಾರಕ ತವಶರಣಂ ||

ತಪೋಮೂರ್ತೇ ತವಶರಣಂ | ತೇಜೋರಾಶೇ ತವಶರಣಂ ||

ಬ್ರಹ್ಮಾನಂದ ಬ್ರಹ್ಮಸನಾತನ | ಬ್ರಹ್ಮಮೋಹನ ತವಶರಣಂ ||

ವಿಶ್ವಾತ್ಮಕ ತವಶರಣಂ | ವಿಶ್ವರಕ್ಷಕ ತವಶರಣಂ ||

ವಿಶ್ವಾಂಬರ ವಿಶ್ವಜೀವನ | ವಿಶ್ವಪರಾತ್ಪರ ತವಶರಣಂ ||

ವಿಘ್ನಾಂತಕ ತವಶರಣಂ | ವಿಘ್ನನಾಶಕ ತವಶರಣಂ ||

ಪ್ರಣವಾತೀತ ಪ್ರೇಮವರ್ಧನ | ಪ್ರಕಾಶಪುರುಷ ತವಶರಣಂ ||

ನಿಜಾನಂದ ತವಶರಣಂ | ನಿಜಪದದಾಯಕ ತವಶರಣಂ ||

ನಿತ್ಯ ನಿರಂಜನ ನಿರಾಕಾರ | ನಿರಾಧಾರ ತವಶರಣಂ ||

ಚಿದ್ಘನಮೂರ್ತೇ ತವಶರಣಂ | ಚಿದಾಕಾರ ತವಶರಣಂ ||

ಚಿದಾತ್ಮರೂಪ ಚಿದಾನಂದ | ಚಿತ್ಸುಖಕಂದ ತವಶರಣಂ ||

ಅನಾದಿಮೂರ್ತೇ ತವಶರಣಂ | ಅಖಿಲವತಾರ ತವಶರಣಂ ||

ಅನಂತಕೋಟಿ ಬ್ರಹ್ಮಾಂಡನಾಯಕ | ಅಘಟಿತಘಟನಾ ತವಶರಣಂ ||

ಭಕ್ತೋದ್ಧಾರ ತವಶರಣಂ | ಭಕ್ತರಕ್ಷಕ ತವಶರಣಂ ||

ಭಕ್ತಾನುಗ್ರಹ ಭಕ್ತಜನಪ್ರಿಯ | ಪತಿತೋದ್ಧಾರಕ ತವಶರಣಂ ||

ಮಾರ್ಗಶೀರ್ಷ ಮಾಸದ ಹುಣ್ಣಿಮೆಯ ದಿನ ದತ್ತ ಜಯಂತಿ. ಅದಕ್ಕೆ ಹತ್ತು ದಿನಗಳ ಮೊದಲು ವ್ರತದ ಆಚರಣೆ ಪ್ರಾರಂಭವಾಗುವುದು. ಈ ಸಮಯದಲ್ಲಿ ‘ಗುರುಚರಿತ್ರೆ’ ಎಂಬ ಗ್ರಂಥದ ಪಾರಾಯಣೆ ಮಾಡುವರು. ದಿನಕ್ಕೆ ಇಂತಿಷ್ಟೇ ಅಧ್ಯಾಯವನ್ನು ಓದಬೇಕೆಂಬ ನಿಯಮವಿದೆ. ದಿನ ಪೂರ್ತಿ ಏನನ್ನೂ ತಿನ್ನಬಾರದು. ಪಾರಾಯಣೆ ಮತ್ತು ದೇವರ ನಾಮ ಸ್ಮರಣೆ ಮಾಡುತ್ತಿರಬೇಕು (ಓಂ ದ್ರಾಂ ಮೋಂ ಗುರು ದತ್ತಾಯ ನಮ:). ರಾತ್ರಿ ಎರಡು ಬಾಳೆಹಣ್ಣು ಮತ್ತು ಒಂದು ಲೋಟ ಹಾಲು ತೆಗೆದುಕೊಳ್ಳಬಹುದಷ್ಟೆ. ಮಲಗಲು ಹಾಸುಗೆ ಬಳಸಬಾರದು. ಅದರ ಬದಲಿಗೆ ಚಾಪೆಯ ಮೇಲೆ ಮಲಗಬೇಕು. ಹತ್ತನೆಯ ದಿನ ಪಾರಾಯಣ ಮಾಡಿ ನೆಂಟರಿಷ್ಟರಿಗೆ ಮತ್ತು ಬಡವರಿಗೆ ಅನ್ನ ಸಂತರ್ಪಣೆಯನ್ನು ಮಾಡಬೇಕು.
ಇದೇ ಸಮಯದಲ್ಲಿ ದತ್ತ ಪಾದುಕೆ ಇರುವ ಗಾಣಗಾಪುರ ಕ್ಷೇತ್ರ ದರ್ಶನವನ್ನೂ ಮಾಡುವುದು ಪದ್ಧತಿಯಲ್ಲಿದೆ. ಗುಲ್ಬರ್ಗಾ ಜಿಲ್ಲೆಯಲ್ಲಿರುವ ಗಾಣಗಾಪುರ ಕ್ಷೇತ್ರ ಬಹಳ ಮಹಿಮೆಯಿಂದ ಕೂಡಿದ್ದೆಂದು ಹೇಳುವರು. ಗುರುದತ್ತ ಸ್ವರೂಪ ಶ್ರೀ ನರಸಿಂಹ ಸರಸ್ವತಿಗಳ ಪಾದುಕೆಯನ್ನು ಇಲ್ಲಿ ಪೂಜಿಸುವರು. ಅದಲ್ಲದೇ ಭಕ್ತಾದಿಗಳು ಪ್ರತಿ ನಿತ್ಯವೂ ಶ್ರೀ ರುದ್ರಾಭಿಷೇಕವನ್ನೂ ಮಾಡುವರು. ಇನ್ನೂ ಹೆಚ್ಚಿನ ವಿಷಯವನ್ನು ಮುಂದೊಂದು ಬಾರಿ ಬರೆಯುವೆ.

ವಿಭಾಗಗಳು
ಆಚಾರ-ವಿಚಾರ - Rituals

ಸಿತಲಾ ಸಪ್ತಮಿ

ಈ ಲೇಖನ ಇಲ್ಲಿ ಪ್ರಕಟವಾಗಿದೆ

ಈ ಹೆಸರು ಕೇಳಿರುವಿರಾ? ಇದೊಂದು ಉತ್ಸವದ ದಿನ ಎಂದರೆ ಅಚ್ಚರಿಯಾ? ಈ ಆಚರಣೆಯು ಗುಜರಾತ ಮತ್ತು ಸಿಂಧ್ ಪ್ರಾಂತ್ಯಗಳಲ್ಲಿ ಹೆಚ್ಚಿನದಾಗಿ ಪ್ರಚಲಿತವಾಗಿದೆಯಂತೆ.

ನಿನ್ನೆಯ ದಿನ ಸಂಜೆ ೪ ಘಂಟೆಗೇ ನಮ್ಮಲ್ಲಿಯ ಮ್ಯಾನೇಜರ್ ಶಹಾ ಬೇಗ ಮನೆಗೆ ಹೋಗಬೇಕು ಎಂದು ನನ್ನ ಅನುಮತಿ ಕೇಳಿದ. ಅಲ್ಲಪ್ಪ, ಇವತ್ತು ಶುಕ್ರವಾರ – ನಾಳೆ ನಾಡದ್ದು ರಜೆಯಾದ್ದರಿಂದ, ಎಲ್ಲ ಕೆಲಸವನ್ನೂ ಇಂದೇ ಮುಗಿಸಬೇಕು. ಹಾಗೆ ಬೇಗ ಹೋಗಲು ಇವತ್ಯಾವ ಹಬ್ಬವಿದೆ. ಗೋಕುಲಾಷ್ಟಮಿ ನಾಡದ್ದು ಎಂದೆ. ಅದಕ್ಕವನು, ನಹಿಂ ಸಾಬ್, ಕಲ್ ಸಿತಲಾ ಸಪ್ತಮಿ, ಘರ್ ಮೆ ಚೂಲ್ಹಾ ನಹೀಂ ಜಲಾನ ಹೈ. ಕಲ್ ಕಾ ಖಾನಾ ಆಜ್ ಹೀ ಪಕಾನೇಕ ಹೈ – ಉಸ್ ಲಿಯೆ ಜಲ್ದಿ ಘರ್ ಜಾಕೆ ಮೈ ಮದದ್ ಕರನಾ ಹೈ, ಎಂದಿದ್ದ (ಇಲ್ಲ ಸಾಹೇಬ್ರ, ನಾಳೆ ಸಿತಲಾ ಸಪ್ತಮೀ, ಮನೆಯಲ್ಲಿ ಒಲೆ ಹಚ್ಚುವಂತಿಲ್ಲ, ನಾಳೆಯ ಊಟದ ತಯಾರಿ ಇಂದೇ ಮಾಡಬೇಕು – ಆದ್ದರಿಂದ ಬೇಗ ಮನೆಗೆ ಹೋಗಿ, ಸಹಾಯಿಸಬೇಕು). ಇದ್ಯಾವುದಪ್ಪ, ನಾನು ಕೇಳಿರದ ಹೊಸ ಹಬ್ಬ ಎಂದು ಅದರ ಬಗ್ಗೆ ಸ್ವಲ್ಪ ಬೆಳಕು ಚೆಲ್ಲಲು ಅವನಿಗೆ ಕೇಳಿದೆ. ಅದಕ್ಕವನು, ನನಗೆ ಅದರ ಬಗ್ಗೆ ಹೆಚ್ಚಿನದಾಗಿ ಗೊತ್ತಿಲ್ಲ. ಆದರೆ, ಹಿಂದೆ ಸಿಡುಬು ರೋಗ ತಗುಲಿದಾಗ, ಅದನ್ನು ಗುಣಪಡಿಸಲು ಸಿತಲಾದೇವಿ ಅರ್ಥಾತ್ ಮಾರಮ್ಮನನ್ನು ಒಲಿಸಿಕೊಳ್ಳಲು ಮಾಡುತ್ತಿದ್ದ ವ್ರತವಿದು ಎಂದು ಬೇಗ ಹೊರಟು ಹೋದ. ಹೋದವನು ಸುಮ್ಮನೆ ಹೋದನಾ! ನನ್ನ ತಲೆಯಲ್ಲಿ ಸಿತಲಾದೇವಿಯ ಹುಳ ಬಿಟ್ಟು ಹೋಗಿದ್ದ. ಸಂಜೆ ಮನೆಗೆ ಬರುವವರೆವಿಗೂ ನನ್ನ ಎಲ್ಲ ಸ್ನೇಹಿತರನ್ನೂ (ಬೇರೆ ಬೇರೆ ಪ್ರದೇಶಗಳಿಂದ ಬಂದಿರುವವರು) ಕೇಳಿ, ಅದರ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಅದು ಹೀಗಿದೆ:

ಸ್ವಾತಂತ್ರ್ಯಾ ಪೂರ್ವದ ದಿನಗಳಲ್ಲಿ ಜನಗಳು ಸಿಡುಬು ರೋಗ ತಗುಲಿ ಸಾಯುತ್ತಿದ್ದುದು ಸಾಮಾನ್ಯ ಎಂಬುದನ್ನು ಬಲ್ಲೆವು. ಅದಕ್ಕೆ ಲಸಿಕೆ ಲಭ್ಯವಾಗುವರೆವಿಗೂ, ಅದರ ಬಗ್ಗೆ ಮೂಢ ನಂಬಿಕೆ ಇರುವ ಜನಗಳು, ಅದು ಮಾರಿಯ ಕೋಪ ಎಂದೇ ಪರಿಗಣಿಸಿದ್ದರು. ಅದೂ ಅಲ್ಲದೇ ಈ ಸಾಂಕ್ರಾಮಿಕ ರೋಗ ತಗುಲಿದವರನ್ನು ಊರಿನಿಂದ ಹೊರಗೆ ಇಡುತ್ತಿದ್ದರು. ಹಾಗಾಗಿ ಮಾರಿಯ ದೇಗುಲವನ್ನು ಊರ ಹೊರಗೆ ಕಾಣಬಹುದು. ಈಕೆಯನ್ನು ಗ್ರಾಮದೇವತೆಯೆಂದೂ ಆರಾಧಿಸುವರು. ಮರಗಳ ಕೆಳಗೆ ಅಥವಾ ಸ್ಮಶಾನದ ಹತ್ತಿರ ಈ ದೇಗುಲವನ್ನು ಕಾಣುವುದು ಸಾಮಾನ್ಯ. ಗುಜರಾತ ಮತ್ತು ಸಿಂಧ್ ಪ್ರಾಂತ್ಯದಲ್ಲಿ ಈ ದೇವಿಯ ಆರಾಧನೆ ಹೆಚ್ಚು. ಈ ಮಾರಮ್ಮ ದೇವಿಯನ್ನು ಒಲಿಸಿಕೊಂಡು, ರೋಗ ನಿವಾರಣೆ ಮಾಡಿಕೊಳ್ಳಲು ಶ್ರಾವಣ ಮಾಸದ ಸಪ್ತಮಿಯಂದು ಸಿತಲಾ ಸಪ್ತಮೀ ಎಂದು ಆಚರಿಸಲು ಆರಂಭಿಸಿದರು. ಸಿತಲಾ ಶೀತಲಾ ದೇವಿ ಎಂದರೆ ತಂಪಾಗಿರಿಸುವ ದೇವತೆ ಎಂದರ್ಥ. ಬಂಗಾಲ ಅಸ್ಸಾಮ ಪ್ರಾಂತದಲ್ಲಿ ಶೀತಲದೇವಿಯೆಂದೂ, ಮಹಾರಾಷ್ಟ್ರ ಗುಜರಾತ ಸಿಂಧ ಪ್ರಾಂತಗಳಲ್ಲಿ ಸಿತಲೆಯೆಂದೂ ಮತ್ತು ತಮಿಳುನಾಡಿನಲ್ಲಿ ಮಾರಮ್ಮನೆಂದೂ ಆರಾಧಿಸುವ ಶಕ್ತಿದೇವತೆ ಇವಳು. ಜನಗಳ ನಂಬಿಕೆಯಂತೆ ಈ ದೇವಿಯು ವಿಧವೆಯರು ಮತ್ತು ಮಕ್ಕಳಿರುವ ತಾಯಂದಿರ ಪ್ರಾರ್ಥನೆಯನ್ನು ಸ್ವೀಕರಿಸಿ ಅವರ ಮನದಿಂಗಿತವನ್ನು ಶೀಘ್ರವಾಗಿ ಪೂರೈಸುವಳಂತೆ. ಈಕೆಯ ಪ್ರತಿಮೆಯನ್ನು ಕಲ್ಲಿನ ರೂಪದಲ್ಲೂ ಮತ್ತು ಬೇವಿನ ವೃಕ್ಷದ ರೂಪದಲ್ಲೂ ಆರಾಧಿಸುವರು. ಬೇವು ತನುವನ್ನು ತಂಪಾಗಿರಿಸುವ ಶಕ್ತಿಯನ್ನು ಹೊಂದಿದೆ.

ಇಂದಿನ ವಿಶೇಷತೆ ಏನೆಂದರೆ, ಮನೆಯಲ್ಲಿ ಉರಿ ಹಚ್ಚಬಾರದು, ಅಡುಗೆ ಮಾಡಬಾರದು, ಬಿಸಿ ಪದಾರ್ಥಗಳನ್ನು ಸೇವಿಸಬಾರದು. ಹಿಂದಿನ ದಿನ ಎಂದರೆ ಷಷ್ಠಿಯಂದು ಅಡುಗೆ ಮಾಡಿ, ಸಪ್ತಮಿಯಂದು ಅದನ್ನೇ ಸೇವಿಸಬೇಕು. ತಣ್ಣನೆಯ ಆಹಾರವನ್ನು ಸೇವಿಸುವುದರಿಂದ ತನುವೂ ತಣ್ಣಗಿರುವುದು, ಬಿಸಿ ಏರುವ ಜ್ವರವೂ ಕಡಿಮೆ ಆಗುವುದು ಎಂಬ ನಂಬಿಕೆ.

ಕತ್ತೆಯು ಸಿತಲಾ ದೇವಿಯ ವಾಹನವಂತೆ. ಆ ದೇವಿಯ ಆರಾಧನೆಯಿಂದ ಕುರುಡರಿಗೆ ದೃಷ್ಟಿಯನ್ನೂ, ಅಂಗವೈಕಲ್ಯರಿಗೆ ಸುಂದರ ದೇಹವನ್ನೂ, ಬಡವರಿಗೆ ಸಿರಿ ಸಂಪತ್ತನ್ನೂ ಮತ್ತು ಬಂಜೆಗೆ ಮಕ್ಕಳನ್ನೂ ದಯಪಾಲಿಸುವಳೆಂದು ನಂಬುವರು. ಈ ದೇವಿಗೆ ಕೋಳಿ, ಕುರಿಯ ರಕ್ತವನ್ನೂ ಅರ್ಪಿಸುವುದು ವಾಡಿಕೆಯಲ್ಲಿದೆ. ಕೆಂಪು ಸೀರೆಯನ್ನುಟ್ಟು ಕೈಗಳಲ್ಲಿ ಪೊರಕೆಯನ್ನೂ, ಬೀಸಣಿಕೆಯನ್ನೂ, ತ್ರಿಶೂಲವನ್ನೂ ಮತ್ತು ಕಪಾಲವನ್ನೂ ಹಿಡಿದಿರುವ ಚಿತ್ರದಂತೆ ರೂಪಿಸುವರು. ಈ ದೇವತೆಯ ಒಂದು ಚಿತ್ರ ಹೀಗಿದೆ.

ಸಿಡುಬಿನ ಪಿಡುಗು ಈಗ ಕಡಿಮೆಯಾಗಿದ್ದರೂ ಸಿತಲಾ ದೇವಿಯ ಆರಾಧನೆ ಮಾತ್ರ ಕಡಿಮೆ ಆಗಿಲ್ಲ. ವಿವಿಧ ಭಾಷೆ, ಜೀವನ ಸ್ವರೂಪವನ್ನು ಹೊಂದಿರುವ ಪ್ರಾಂತ್ಯಾರು ಜನಗಳನ್ನು ಒಂದೆಡೆ ಸೇರಿಸುವ ರಾಷ್ಟ್ರೀಯ ದೇವತೆಯನ್ನು ಆರಾಧಿಸುವ ಸ್ವರೂಪದಲ್ಲಿ ಒಗ್ಗಟ್ಟನ್ನು ಮೂಡಿಸುವ ಪ್ರಯತ್ನ ಇರುವುದು ಒಳ್ಳೆಯದೇ ಅಲ್ಲವೇ?

ವಿಭಾಗಗಳು
ಆಚಾರ-ವಿಚಾರ - Rituals

ಶ್ರೀ ರುದ್ರ ನಮಕ ಚಮಕ

ಓಂ ನಮೋ ಭಗವತೇ ರುದ್ರಾಯ
shiva.jpg
ಓಂ ನಮಸ್ತೇ ರುದ್ರ ಮನ್ಯವ ಉತೋತ ಇಷವೇ ನಮಃ| ನಮಸ್ತೇ ಅಸ್ತು ಧನ್ವನೇ ಬಾಹುಭ್ಯಾಮುತ ತೇ ನಮಃ| ಯಾ ತ ಇಷುಃ ಶಿವತಮಾ ಶಿವಂ ಬಭೂವ ತೇ ಧನುಃ| ಶಿವ ಶರವ್ಯಾ ಯಾ ತವ ತಯಾ ನೋ ರುದ್ರ ಮೃಡಯ|  ಯಾ ತೇ ರುದ್ರ ಶಿವ ತನೂರಘೋರಾ ಪಾಪಕಾಶಿನೀ| ತಯಾ ನಸ್ತನುವಾ ಶಂತಮಯಾ ಗಿರಿಶಂತಾಭಿಚಾಕಶೀಹಿ||

ಯಾಮಿಷುಂ ಗಿರಿಶಂತ ಹಸ್ತೇ ಬಿಭರ್‍ಷ್ಯಸ್ತವೇ| ಶಿವಾಂ ಗಿರಿತ್ರ ತಾಂ ಕುರು ಮಾ ಹಿಗ್‍ಂಸೀಃ ಪುರುಷಂ ಜಗತ್| ಶಿವೇನ ವಚಸಾ ತ್ವಾ ಗಿರಿಶಾಚ್ಛಾವದಾಮಸಿ| ಯಥಾ ನಃ ಸರ್ವಮಿಜ್ಜಗದಯಕ್ಷ್ಮಗ್‍ಂ ಸುಮನಾ ಅಸತ್| ಅಧ್ಯವೋಚದಧಿವಕ್ತಾ ಪ್ರಥಮೋ ದೈವ್ಯೋ ಭಿಷಕ್| ಅಹೀಗ್‍ಶ್ಚ ಸರ್ವಾನ್‍ಜಂಭಯಂಥ್ಸರ್ವಾಶ್ಚ ಯಾತುಧಾನ್ಯಃ||

 

ಅಸೌ ಯಸ್ತಾಮ್ರೋ ಅರುಣ ಉತ ಬಭ್ರುಃ ಸುಮಂಗಲಃ| ಯೇ ಚೇ ಮಾಗ್‍ಂ ರುದ್ರಾ ಅಭಿತೋ ದಿಕ್ಷು ಶ್ರಿತಾ ಸ್ಸಹಸ್ರಶೋವೈಷಾಗ್‍ಂ ಹೇಡ ಈಮಹೇ| ಅಸೌ ಯೋವಸರ್ಪತಿ ನೀಲಗ್ರೀವೋ ವಿಲೋಹಿತಃ| ಉತೈನಂ ಗೋಪಾ ಅದೃಶನ್ನದೃಶನ್ನುದಹಾರ್ಯಃ| ಉತೈನಂ ವಿಶ್ವಾ ಭೂತಾನಿ ಸ ದೃಷ್ಟೋ ಮೃಡಯಾತಿ ನಃ|

ನಮೋ ಅಸ್ತು ನೀಲಗ್ರೀವಾಯ ಸಹಸ್ರಾಕ್ಷಾಯ ಮೀಢುಷೇ| ಅಥೋ ಯೇ ಅಸ್ಯ ಸತ್ವಾನೋಹಂ ತೇಭ್ಯೋಕರನ್ನಮಃ|| ಪ್ರಮುಂಚ ಧನ್ವನಸ್ತ್ವ-ಮುಭಯೋರಾರ್ತ್ನಿಯೋರ್ಜ್ಯಾಮ್| ಯಾಶ್ಚ ತೇ ಹಸ್ತ ಇಷವಃ ಪರಾ ತಾ ಭಗವೋ ವಪ|

ಅವತತ್ಯ ಧನುಸ್ತ್ವಗ್‍ಂ ಸಹಸ್ರಾಕ್ಷ ಶತೇಷುಧೇ| ನಿಶೀರ್ಯ ಶಲ್ಯಾನಾಂ ಮುಖಾ ಶಿವೋ ನಃ ಸುಮನಾ ಭವ| ವಿಜ್ಯಂ ಧನುಃ ಕಪರ್ದಿನೋ ವಿಶಲ್ಯೋ ಬಾಣವಾಗ್‍ಂ ಉತ| ಅನೇಶನ್ನಸ್ಯೇಷವ ಆಭುರಸ್ಯ ನಿಷಂಗಥಿಃ||

ಯಾ ತೇ ಹೇತಿರ್ಮೀಢುಷ್ಟಮ ಹಸ್ತೇ ಬಭೂವ ತೇ ಧನುಃ| ತಯಾಸ್ಮಾನ್, ವಿಶ್ವತಸ್ತ್ವಮಯಕ್ಷ್ಮಯಾ ಪರಿಬ್ಭುಜ| ನಮಸ್ತೇ ಅಸ್ತ್ವಾಯುಧಾಯಾನಾತತಾಯ ಧೃಷ್ಣವೇ| ಉಭಾಭ್ಯಾಮುತ ತೇ ನಮೋ ಬಾಹುಭ್ಯಾಂ ತವ ಧನ್ವನೇ| ಪರಿ ತೇ ಧನ್ವನೋ ಹೇತಿರಸ್ಮಾನ್ವೃಣಕ್ತು ವಿಶ್ವತಃ| ಅಥೋ ಯ ಇಷುಧಿಸ್ತವಾರೇ ಅಸ್ಮನ್ನಿಧೇಹಿ ತಮ್||

ಶಂಭವೇ ನಮಃ| ನಮಸ್ತೇ ಅಸ್ತು ಭಗವನ್ವಿಶ್ವೇಶ್ವರಾಯ ಮಹಾದೇವಾಯ ತ್ರ್ಯಂಬಕಾಯ ತ್ರಿಪುರಾಂತಕಾಯ ತ್ರಿಕಾಗ್ನಿಕಾಲಾಯ ಕಾಲಾಗ್ನಿರುದ್ರಾಯ ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ ಶ್ರೀ ಮನ್ಮಹಾದೇವಾಯ ನಮಃ||

ನಮೋ ಹಿರಣ್ಯಬಾಹವೇ ಸೇನಾನ್ಯೇ ದಿಶಾಂ ಚ ಪತಯೇ ನಮೋ ನಮೋ ವೃಕ್ಷೇಭ್ಯೋ ಹರಿಕೇಶೇಭ್ಯಃ ಪಶೂನಾಂ ಪತಯೇ ನಮೋ ನಮಃ ಸಸ್ಪಿಂಜರಾಯ ತ್ವಿಷೀಮತೇ ಪಥೀನಾಂ ಪತಯೇ ನಮೋ ನಮೋ ಬಭ್ಲುಶಾಯ ವಿವ್ಯಾಧಿನೇನ್ನಾನಾಂ ಪತಯೇ ನಮೋ ನಮೋ ಹರಿಕೇಶಾಯೋಪವೀತಿನೇ ಪುಷ್ಟಾನಾಂ ನಮೋ ನಮೋ ಭವಸ್ಯ ಹೇತ್ಯೈ ಜಗತಾಂ ಪತಯೇ ನಮೋ ನಮೋ ರುದ್ರಾಯಾತತಾವಿನೇ ಕ್ಷೇತ್ರಾಣಾಂ ಪತಯೇ ನಮೋ ನಮಃ

ಸೂತಾಯ ಹಂತ್ಯಾಯ ವನಾನಾಂ ಪತಯೇ ನಮೋ ನಮೋ ರೋಹಿತಾಯ ಸ್ಥಪತಯೇ ವೃಕ್ಷಾಣಾಂ ಪತಯೇ ನಮೋ ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಪತಯೇ ನಮೋ ನಮೋ ಭುವಂತಯೇ ವಾರಿವಸ್ಕೃತಾಯೌಷಧೀನಾಂ ಪತಯೇ ನಮೋ ನಮ ಉಚ್ಚೈರ್ಘೋಷಾಯಾಕ್ರಂದಯತೇ ಪತ್ತೀನಾಂ ಪತಯೇ ನಮೋ ನಮಃ ಕೃತ್ಸ್ನ ವೀತಾಯ ಧಾವತೇ ಸತ್ವನಾಂ ಪತಯೇ ನಮಃ||

ನಮಃ ಸಹಮಾನಾಯ ನಿವ್ಯಾಧಿನ ಆವ್ಯಾಧಿನೀನಾಂ ಪತಯೇ ನಮೋ ನಮಃ ಕಕುಭಾಯ ನಿಷಂಗಿಣೇ ಸ್ತೇನಾನಾಂ ಪತಯೇ ಮನೋ ನಮೋ ನಿಷಂಗಿಣ ಇಷುಧಿಮತೇ ತಸ್ಕರಾಣಾಂ ಪತಯೇ ನಮೋ ನಮೋ ವಂಚತೇ ಪರಿವಂಚತೇ ಸ್ತಾಯೂನಾಂ ಪತಯೇ ನಮೋ ನಮೋ ನಿಚೇರವೇ ಪರಿಚರಾಯಾರಣ್ಯಾನಾಂ ಪತಯೇ ನಮೋ ನಮಃ ಸೃಕಾವಿಭ್ಯೋ ಜಿಘಾಗ್‍ಂಸದ್ಭ್ಯೋ ಮುಷ್ಣತಾಂ ಪತಯೇ ನಮೋ ನಮೋಸಿಮದ್ಭ್ಯೋ ನಕ್ತಂಚರದ್ಭ್ಯಃ ಪ್ರಕೃನ್ತಾನಾಂ ಪತಯೇ ನಮೋ ನಮ ಉಷ್ಣೀಷಿಣೇ ಗಿರಿಚರಾಯ ಕುಲುಂಚಾನಾಂ ಪತಯೇ ನಮೋ ನಮ ಇಷುಮದ್ಭ್ಯೋ ಧನ್ವಾವಿಭ್ಹ್ಯಶ್ಚ ಮೋ ನಮೋ ನಮ ಆತನ್ವಾನ್ನೇಭ್ಯಃ ಪ್ರತಿದಧಾನೇಭ್ಯಶ್ಚ ವೋ ನಮೋ ನಮಃ ಆಯಚ್ಛದ್ಭ್ಯೋ ವಿಸೃಜದ್ಭ್ಯಶ್ಚ ವೋ ನಮೋ ನಮೋಸ್ಯದ್ಭ್ಯೋ ವಿಧ್ಯದ್ಭ್ಯಶ್ಚ ವೋ ನಮೋ ನಮ ಆಸೀನೇಭ್ಯಃ ಶಯಾನೇಭ್ಯಶ್ಚ ವೋ ನಮೋ ನಮಃ ಸ್ವಪದ್ಭ್ಯೋ ಜಾಗ್ರದ್ಭ್ಯಶ್ಚ ವೋ ನಮೋ ನಮಸ್ತಿಷ್ಠದ್ಭ್ಯೋ ಧಾವದ್ಭ್ಯಶ್ಚ ವೋ ನಮೋ ನಮಃ ಸಭಾಭ್ಯಃ ಸಭಾಪತಿಭ್ಯಶ್ಚ ವೋ ನಮೋ ನಮೋ ಅಶ್ವೇಭ್ಯೋಶ್ವಪತಿಭ್ಯಶ್ಚ ವೋ ನಮಃ||

ನಮಃ ಸಹಮಾನಾಯ ನಿವ್ಯಾಧಿನ ಆವ್ಯಾಧಿನೀನಾಣ್ ಪತಯೇ ನಮೋ ನಮಃ ಕಕುಭಾಯ ನಿಷಂಗಿಣೇ ಸ್ತೇನಾನಾಂ ಪರಯೇ ನಮೋ ನಮೋ ನಿಷಂಗಿಣ ಇಷುಧಿಮತೇ ತಸ್ಕರಾಣಾಂ ಪತಯೇ ನಮೋ ನಮೋ ವಂಚತೇ ಪರಿವಂಚತೇ ಸ್ತಾಯೂನಾಂ ಪತಯೇ ನಮೋ ನಮೋ ನಿಚೇರವೇ ಪರಿಚರಾಯಾರಣ್ಯಾನಾಂ ಪತಯೇ ನಮೋ ನಮಃ ಸೃಕಾವಿಭ್ಯೋ ಜಿಘಾಗ್‍ಂಸದ್ಭ್ಯೋ ಮುಷ್ಣತಾಂ ಪತಯೇ ನಮೋ ನಮೋಸಿಮದ್ಭ್ಯೋ ನಕ್ತಂಚರದ್ಭ್ಯಃ ಪ್ರಕೃನ್ತಾನಾಂ ಪತಯೇ ನಮೋ ನಮಃ  ಉಷ್ಣೀಷಿಣೇ ಗಿರಿಚರಾಯ ಕುಲುಂಚಾನಾಂ ಪತಯೇ ನಮೋ ನಮ ಇಷುಮದ್ಭ್ಯೋ ಧನ್ವಾವಿಭ್ಯಶ್ಚ ವೋ ನಮೋ ನಮ ಆತನ್ವಾನೇಭ್ಯಃ ಪ್ರತಿದಧಾನೇಭ್ಯಶ್ಚ ವೋ ನಮೋ ನಮ ಆಯಚ್ಛದ್ಭ್ಯೋ ವಿಸೃಜದ್ಭ್ಯಶ್ಚ ವೋ ನಮೋ ನಮೋಸ್ಯದ್ಭ್ಯೋ ವಿಧ್ಯದ್ಭ್ಯಶ್ಚ ವೋ ನಮೋ ನಮಃ  ಆಸೀನೇಭ್ಯಃ ಶಯಾನೇಭ್ಯಶ್ಚ ವೋ ನಮೋ ನಮಃ ಸ್ವಪದ್ಭ್ಯೋ ಜಾಗ್ರದ್ಭ್ಯಶ್ಚ ವೋ ನಮೋ ನಮಸ್ತಿಷ್ಠಭ್ಯೋ ಧಾವದ್ಭ್ಯಶ್ಚ ವೋ ನಮೋ ನಮಃ ಸಭಾಭ್ಯಃ ಸಭಾಪತಿಭ್ಯಶ್ಚ ವೋ ನಮೋ ನಮೋ ಅಶ್ವೇಭ್ಯೋಶ್ವಪತಿಭ್ಯಶ್ಚ ವೋ ನಮಃ||

ನಮ ಆವ್ಯಾಧಿನೀಭ್ಯೋ ವಿವಿಧ್ಯನ್ತೀಭ್ಯಶ್ಚ ವೋ ನಮೋ ನಮ ಉಗಣಾಭ್ಯಸ್ತೃಗ್‍ಂಹತೀಭ್ಯಶ್ಚ ವೋ ನಮೋ ನಮೋ ಗೃಥ್ಸೇಭ್ಯೋ ಗೃಥ್ಸಪತಿಭ್ಯಶ್ಚ ವೋ ನಮೋ ನಮೋ ವ್ರಾತೇಭ್ಯೋ ವ್ರಾತಪತಿಭ್ಯಶ್ಚ ವೋ ನಮೋ ನಮೋ ಗಣೇಭ್ಯೋ ಗಣಪತಿಭ್ಯಶ್ಚ ವೋ ನಮೋ ನಮೋ ವಿರೂಪೇಭ್ಯೋ ವಿಶ್ವರೂಪೇಭ್ಯಶ್ಚ ವೋ ನಮಃ  ನಮೋ ಮಹದ್ಭ್ಯಃ, ಕ್ಷುಲ್ಲಕೇಭ್ಯಶ್ಚ ವೋ ನಮೋ ನಮೋ ರಥಿಭ್ಯೋರಥೇಭ್ಯಶ್ಚ ವೋ ನಮೋ ನಮೋ ರಥೇಭ್ಯೋ ರಥಪತಿಭ್ಯಶ್ಚ ವೋ ನಮೋ ನಮಃ ಸೇನಾಭ್ಯಃ ಸೇನಾನಿಭ್ಯಶ್ಚ ವೋ ನಮೋ ನಮಃ, ಕ್ಷತೃಭ್ಯಃ ಸಂಗ್ರಹೀತೃಭ್ಯಶ್ಚ ವೋ ನಮೋ ನಮಸ್ತಕ್ಷಭ್ಯೋ ರಥಕಾರೇಭ್ಯಶ್ಚ ವೋ ನಮೋ ನಮಃ ಕುಲಾಲೇಭ್ಯಃ ಕರ್ಮಾರೇಭ್ಯಶ್ಚ ವೋ ನಮಃ  ನಮಃ ಪುಂಜಿಷ್ಟೇಭ್ಯೋ ನಿಷಾದೇಭ್ಯಶ್ಚ ವೋ ನಮೋ ನಮ ಇಷುಕೃದ್ಭ್ಯೋ ಧನ್ವಕೃದ್ಭ್ಯಶ್ಚ ವೋ ನಮೋ ನಮೋ ಮೃಗಯುಭ್ಯಃ ಶ್ವನಿಭ್ಯಶ್ಚ ವೋ ನಮೋ ನಮಃ ಶ್ವಭ್ಯಃ ಶ್ವಪತಿಭ್ಯಶ್ಚ ವೋ ನಮಃ||

 

ನಮೋ ಭವಾಯ ಚ ರುದ್ರಾಯ ಚ ನಮಃ ಶರ್ವಾಯ ಚ ಪಶುಪತಯೇ ಚ ನಮೋ ನೀಲಗ್ರೀವಾಯ ಚ ಶಿತಿಕಂಠಾಯ ಚ ನಮಃ ಕಪರ್ದಿನೇ ಚ ವ್ಯುಪ್ತಕೇಶಾಯ ಚ ನಮಃ ಸಹಸ್ರಾಕ್ಷಾಯ ಚ ಶತಧನ್ವನೇ ಚ  ನಮೋ ಗಿರಿಶಾಯ ಚ ಶಿಪಿವಿಷ್ಟಾಯ ಚ ನಮೋ ಮೀಢುಷ್ಟಮಾಯ ಚೇಷುಮತೇ ಚ ನಮೋ ಹ್ರಸ್ವಾಯ ಚ ವಾಮನಾಯ ಚ ನಮೋ ಬೃಹತೇ ಚ ವರ್ಷೀಯಸೇ ಚ ನಮೋ ವೃದ್ಧಾಯ ಚ ಸಂವೃದ್ಧ್ವನೇ ಚ ನಮೋ ಅಗ್ರಿಯಾಯ ಚ ಪ್ರಥಮಾಯ ಚ ನಮ ಆಶವೇ ಚಾಜಿರಾಯ ಚ ನಮಃ ಶೀಘ್ರಿಯಾಯ ಚ ಶೀಭ್ಯಾಯ ಚ ನಮ ಊರ್ಮ್ಯಾಯ ಚಾವಸ್ವನ್ಯಾಯ ಚ ನಮಃ ಸ್ರೋತಸ್ಯಾಯ ಚ ದ್ವೀಪ್ಯಾಯ ಚ||

 

ನಮೋ ಜ್ಯೇಷ್ಠಾಯ ಚ ಕನಿಷ್ಠಾಯ ಚ ನಮಃ ಪೂರ್ವಜಾಯ ಚಾಪರಜಾಯ ಚ ನಮೋ ಮಧ್ಯಮಾಯ ಚಾಪಗಲ್ಭಾಯ ಚ ನಮೋ ಜಘನ್ಯಾಯ ಚ ಬುಧ್ನಿಯಾಯ ಚ ನಮಃ ಸೋಭ್ಯಾಯ ಚ ಪ್ರತಿಸರ್ಯಾಯ ಚ ನಮೋ ಯಾಮ್ಯಾಯ ಚ ಕ್ಷೇಮ್ಯಾಯ ಚ  ನಮ ಉರ್ವರ್ಯಾಯ ಚ ಖಲ್ಯಾಯ ಚ ನಮಃ ಶ್ಲೋಕ್ಯಾಯ ಚಾವಸಾನ್ಯಾಯ ಚ ನಮೋ ವನ್ಯಾಯ ಚ ಕಕ್ಷ್ಯಾಯ ಚ ನಮಃ ಶ್ರವಾಯ ಚ ಪ್ರತಿಶ್ರವಾಯ ಚ ನಮ ಆಶುಷೇಣಾಯ ಚಾಶುರಥಾಯ ಚ ನಮಃ ಶೂರಾಯ ಚಾವಭಿಂದತೇ ಚ ನಮೋ ವರ್ಮಿಣೇ ಚ ವರೂಥಿನೇ ಚ ನಮೋ ಬಿಲ್ಮಿನೇ ಚ ಕವಚಿನೇ ಚ ನಮಃ ಶ್ರುತಾಯ ಚ ಶ್ರುತಸೇನಾಯ ಚ||

 

ನಮೋ ದುಂದುಭ್ಯಾಯ ಚಾಹನನ್ಯಾಯ ಚ ನಮೋ ಧೃಷ್ಣವೇ ಚ ಪ್ರಮೃಶಾಯ ಚ ನಮೋ ದೂತಾಯ ಚ ಪ್ರಹಿತಾಯ ಚ ನಮೋ ನಿಷಂಗಿಣ ಚೇಷುಧಿಮತೇ ಚ ನಮಸ್ತೀಕ್ಷ್ಣೇಷವೇ ಚಾಯುಧಿನೇ ಚ ನಮಃ ಸ್ವಾಯುಧಾಯ ಚ ಸುಧನ್ವನೇ ಚ ನಮಃ ಸ್ರುತ್ಯಾಯ ಚ ಪಥ್ಯಾಯ ಚ ನಮಃ ಕಾಟ್ಯಾಯ ಚ ನೀಪ್ಯಾಯ ಚ  ನಮಃ ಸೂದ್ಯಾಯ ಚ ಸರಸ್ಯಾಯ ಚ ನಮೋ ನಾದ್ಯಾಯ ಚ ವೈಶಂತಾಯ ಚ ನಮಃ ಕೂಪ್ಯಾಯ ಚಾವಟ್ಯಾಯ ಚ ನಮೋ ವರ್ಷ್ಯಾಯ ಚಾವರ್ಷ್ಯಾಯ ಚ ನಮೋ ಮೇಘ್ಯಾಯ ಚ ವಿದ್ಯುತ್ಯಾಯ ಚ ನಮ ಈಧ್ರಿಯಾಯ ಚಾತಪ್ಯಾಯ ಚ ನಮೋ ವಾತ್ಯಾಯ ಚ ರೇಷ್ಮಿಯಾಯ ಚ ನಮೋ ವಾಸ್ತವ್ಯಾಯ ಚ ವಾಸ್ತುಪಾಯ ಚ||

ನಮಃ ಸೋಮಾಯ ಚ ರುದ್ರಾಯ ಚ ನಮಸ್ತಾಮ್ರಾಯ ಚಾರುಣಾಯ ಚ ನಮಃ ಶಂಗಾಯ ಚ ಪಶುಪತಯೇ ಚ ನಮ ಉಗ್ರಾಯ ಚ ಭೀಮಾಯ ಚ ನಮೋ ಅಗ್ರೇವಧಾಯ ಚ ದೂರೇವಧಾಯ ಚ ನಮೋ ಹನ್ತ್ರೇ ಚ ಹನೀಯಸೇ ಚ ನಮೋ ವೃಕ್ಷೇಭ್ಯೋ ಹರಿಕೇಶೇಭ್ಯೋ ನಮಸ್ತಾರಾಯ ನಮಃ ಶಂಭವೇ ಚ ಮಯೋ ಭವೇ ಚ ನಮಃ ಶಂಕರಾಯ ಚ ಮಯಸ್ಕರಾಯ ಚ ನಮಃ ಶಿವಾಯ ಚ ಶಿವತರಾಯ ಚ ನಮಸ್ತೀರ್ಥ್ಯಾಯ ಚ ಕೂಲ್ಯಾಯ ಚ  ನಮಃ ಪಾರ್ಯಾಯ ಚಾವಾರ್ಯಾಯ ಚ ನಮಃ ಪ್ರತರಣಾಯ ಚೋತ್ತರಣಾಯ ಚ ನಮ ಆತಾರ್ಯಾಯ ಚಾಲಾದ್ಯಾಯ ಚ ನಮಃ ಶಷ್ಪ್ಯಾಯ ಚ ಫೇನ್ಯಾಯ ಚ ನಮಃ ಸಿಕತ್ಯಾಯ ಚ ಪ್ರವಾಹ್ಯಾಯ ಚ||

ನಮ ಇರಿಣ್ಯಾಯ ಚ ಪ್ರಪಥ್ಯಾಯ ಚ ನಮಃ ಕಿಗ್‍ಂಶಿಲಾಯ ಚ ಕ್ಷಯಣಾಯ ಚ ನಮಃ ಕಪರ್ದಿನೇ ಚ ಪುಲಸ್ತಯೇ ಚ ನಮೋ ಗೋಷ್ಠ್ಯಾಯ ಚ ಗೃಹ್ಯಾಯ ಚ ನಮಸ್ತಲ್ಪ್ಯಾಯ ಚ ಗೇಹ್ಯಾಯ ಚ ನಮಃ ಕಾಟ್ಯಾಯ ಚ ಗಹ್ವರೇಷ್ಠಾಯ ಚ  ನಮೋ ಹೃದಯ್ಯಾಯ ಚ ನಿವೇಷ್ಪ್ಯಾಯ ಚ ನಮಃ ಪಾಗ್‍ಂಸವ್ಯಾಯ ಚ ರಜಸ್ಯಾಯ ಚ ನಮಃ ಶುಷ್ಕ್ಯಾಯ ಚ ಹರಿತ್ಯಾಯ ಚ ನಮೋ ಲೋಪ್ಯಾಯ ಚೋಲಪ್ಯಾಯ ಚ ನಮ ಊರ್ವ್ಯಾಯ ಚ ಸೂರ್ಮ್ಯಾಯ ಚ ನಮಃ ಪರ್ಣ್ಯಾಯ ಚ ಪರ್ಣಶದ್ಯಾಯ ಚ 

ನಮೋಪಗುರಮಾಣಾಯ ಚಾಭಿಘ್ನತೇ ಚ ನಮ ಆಖ್ಖಿದತೇ ಚ ಪ್ರಖ್ಖಿದತೇ ಚ ನಮೋ ವಃ ಕಿರಿಕೇಭ್ಯೋ ದೇವಾನಾಗ್‍ಂ ಹೃದಯೇಭ್ಯೋ ನಮೋ ವಿಕ್ಷೀಣಕೇಭ್ಯೋ ನಮೋ ವಿಚಿನ್ವತ್ಕೇಭ್ಯೋ ನಮ ಆನಿರ್‍ಹತೇಭ್ಯೋ ನಮ ಆಮೀವತ್ಕೇಭ್ಯಃ||

 

ದ್ರಾಪೇ ಅಂಧಸಸ್ಪತೇ ದರಿದ್ರನ್ನೀಲಲೋಹಿತ| ಏಷಾಂ ಪುರುಷಾಣಾಮೇಷಾಂ ಪಶೂನಾಂ ಮಾ ಭೇರ್ಮಾರೋ ಮೋ ಏಷಾಂ ಕಿಂಚನಾಮಮತ್| ಯಾ ತೇ ರುದ್ರ ಶಿವಾ ತನೂಃ ಶಿವಾ ವಿಶ್ವಾಹಭೇಷಜೀ| ಶಿವಾ ರುದ್ರಸ್ಯ ಭೇಷಜೀ ತಯಾ ನೋ ಮೃಡ ಜೀವಸೇ|  ಇಮಾಗ್‍ಂ ರುದ್ರಾಯ ತವಸೇ ಕಪರ್ದಿನೇ ಕ್ಷಯದ್ವೀರಾಯ ಪ್ರಭರಾಮಹೇ ಮತಿಮ್| ಯಥಾ ನಃ ಶಮಸ್ದ್‍ದ್ವಿಪದೇ ಚತುಷ್ಪದೇ ವಿಶ್ವಂ ಪುಷ್ಟಂ ಗ್ರಾಮೇ ಅಸ್ಮಿನ್ನನಾತುರಮ್| ಮೃಡಾ ನೋ ರುದ್ರೋತನೋ ಮಯಸ್ಕೃಧಿ ಕ್ಷಯದ್ವೀರಾಯ ನಮಸಾ ವಿಧೇಮತೇ| ಯಚ್ಛಂ ಚ ಯೋಶ್ಚ ಮನುರಾಯಜೇ ಪಿತಾ ತದಶ್ಯಾಮ ತವ ರುದ್ರ ಪ್ರಣೀತೌ| 

ಮಾ ನೋ ಮಹಾನ್ತಮುತ ಮ ನೋ ಅರ್ಭಕಂ ಮಾ ನ ಉಕ್ಷಂತಮುತ ಮಾ ನ ಉಕ್ಷಿತಮ್| ಮಾ ನೋ ವಧೀಃ ಪಿತರಂ ಮೋತ ಮಾತರಂ ಪ್ರಿಯಾ ಮಾ ನಸ್ತನುವೋ ರುದ್ರ ರೀರಿಷಃ| ಮಾ ನ ಸ್ತೋಕೇ ತನಯೇ ಮಾ ನ ಆಯುಷಿ ಮಾನೋ ಗೋಷು ಮಾ ನೋ ಅಶ್ವೇಷು ರೀರಿಷಃ| ವೀರಾನ್ಮಾನೋ ರುದ್ರ ಭಾಮಿತೋವಧೀರ್ ಹವಿಷ್ಮನ್ತೋ ನಮಸಾ ವಿಧೇಮ ತೇ|

ಆರಾತ್ತೇ ಗೋಘ್ನ ಉತ ಪೂರುಷಘ್ನೇ ಕ್ಷಯದ್ವೀರಾಯ ಸುಮ್ನಮಸ್ಮೇ ತೇ ಅಸ್ತು| ರಕ್ಷಾ ಚ ನೋ ಅಧಿ ಚ ದೇವ ಬ್ರೂಹ್ಯಧಾ ಚ ನಃ ಶರ್ಮ ಯಚ್ಛ ದ್ವಬರ್‍ಹಾಃ| ಸ್ತುಹಿ ಶ್ರುತಂ ಗರ್ತಸದಂ ಯುವಾನಂ ಮೃಗನ್ನ ಭೀಮಮುಪಹತ್ನುಮುಗ್ರಮ್| ಮೃಡಾ ಜರಿತ್ರೇ ರುದ್ರ ಸ್ತವಾನೋ ಅನ್ಯಂತೇ ಅಸ್ಮನ್ನಿವಪನ್ತು ಸೇನಾಃ|  ಪರಿಣೋ ರುದ್ರಸ್ಯ ಹೇತಿರ್ವೃಣಕ್ತು ಪರಿ ತ್ವೇಷಸ್ಯ ದುರ್ಮತಿರಘಾಯೋಃ| ಅವಸ್ಥಿರಾ ಮಘವದ್ಭ್ಯಸ್ತನುಷ್ವ ಮೀಢ್ವಸ್ತೋಕಾಯ ತನಯಾಯ ಮೃಡಯ| ಮೀಢುಷ್ಟಮ ಶಿವತಮ ಶಿವೋ ನಃ ಸುಮನಾ ಭವ| ಪರಮೇ ವೃಕ್ಷ ಆಯುಧನ್ನಿಧಾಯ ಕೃತ್ತಿಂ ವಸಾನ ಆಚರ ಪಿನಾಕಂ ಬಿಭ್ರದಾಗಹಿ|  ವಿಕಿರಿದ ವಿಲೋಹಿತ ನಮಸ್ತೇ ಅಸ್ತು ಭಗವಃ| ಯಾಸ್ತೇ ಸಹಸ್ರಗ್‍ಂ ಹೇತಯೋನ್ಯಮಸ್ಮನ್ನಿವಪನ್ತು ತಾಃ| ಸಹಸ್ರಾಣಿ ಸಹಸ್ರಧಾ ಬಾಹುವೋಸ್ತವ ಹೇತಯಃ| ತಾಸಾ ಮೀಶಾನೋ ಭಗವಃ ಪರಾಚೀನಾ ಮುಖಾ ಕೃಧಿ||

 

ಸಹಸ್ರಾಣಿ ಸಹಸ್ರಶೋ ಯೇ ರುದ್ರಾ ಅಧಿ ಭೂಮ್ಯಾಮ್| ತೇಷಾಗ್‍ಂ ಸಹಸ್ರಯೋಜನೇವಧನ್ವಾನಿ ತನ್ಮಸಿ| ಅಸ್ಮಿನ್ಮಹತ್ಯರ್ಣವೇನ್ತರಿಕ್ಷೇ ಭವಾ ಅಧಿ| ನೀಲಗ್ರೀವಾ ಶಿತಿಕಂಠಾಃ ಶರ್ವಾ ಅಧಃ, ಕ್ಷಮಾಚರಾಃ|  ನೀಲಗ್ರೀವಾಃ ಶಿತಿಕಂಠಾ ದಿವಗ್‍ಂ ರುದ್ರಾ ಉಪಶ್ರಿತಾಃ| ಯೇ ವೃಕ್ಷೇಷು ಸಸ್ಪಿಂಜರಾ ನೀಲಗ್ರೀವಾ ವಿಲೋಹಿತಾಃ| ಯೇ ಭೂತಾನಾಮಧಿಪತಯೋ ವಿಶಿಖಾಸಃ ಕಪರ್ದಿನಃ||

ಯೇ ಅನ್ನೇಷು ವಿವಿಧ್ಯನ್ತಿ ಪಾತ್ರೇಷು ಪಿಬತೋ ಜನಾನ್| ಯೇ ಪಥಾಂ ಪಥಿರಕ್ಷಯ ಐಲಬೃದಾ ಯವ್ಯುಧಃ| ಯೇ ತೀರ್ಥಾನಿ ಪ್ರಚರನ್ತಿ ಸೃಕಾವನ್ತೋ ನಿಷಂಗಿಣಃ| ಯ ಏತಾವನ್ತಶ್ಚ ಭೂಯಾಗ್‍ಂಸಶ್ಚ ದಿಶೋ ರುದ್ರಾ ವಿತಸ್ತಿರೇ| ತೇಷಾಗ್‍ಂ ಸಹಸ್ರಯೋಜನೇವ ಧನ್ವಾನಿ ತನ್ಮಸಿ|  ನಮೋ ರುದ್ರೇಭ್ಯೋ ಯೇ ಪೃಥಿವ್ಯಾಂ ಯೇನ್ತರಿಕ್ಷೇ ಯೇ ದಿವಿ ಯೇಷಾಮನ್ನಂ ವಾತೋ ವರ್‍ಷಮಿಷವಸ್ತೇಭ್ಯೋ ದಶ ಪ್ರಾಚೀರ್ದಶ ದಕ್ಷಿಣಾ ದಶ ಪ್ರತೀಚೀರ್ದಶೋದೀಚೀರ್ದಶೋರ್ಧ್ವಾಸ್ತೇಭ್ಯೋ ನಮಸ್ತೇ ನೋ ಮೃಡಯಂತು ತೇ ಯಂ ದ್ವಿಷ್ಮೋ ಯಶ್ಚ ನೋ ದ್ವೇಷ್ಟಿ ತಂ ವೋ ಜಂಭೇ ದಧಾಮಿ||

 

ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಮ್| ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್| ಯೋ ರುದ್ರೌ ಅಗ್ನೌ ಯೋ ಅಪ್ಸು ಯ ಓಷಧೀಷು ಯೋ ರುದ್ರೋ ವಿಶ್ವಾ ಭುವನಾ ವಿವೇಶ ತಸ್ಮೈ ರುದ್ರಾಯ ನಮೋ ಅಸ್ತು||

ತಮುಷ್ಟುಹಿ ಯಃ ಸ್ವಿಷುಃ ಸುಧನ್ವಾ ಯೋ ವಿಶ್ವಸ್ಯ ಕ್ಷಯತಿ ಭೇಷಜಸ್ಯ| ಯಕ್ಷ್ವಾಮಹೇ ಸೌಮನಸಾಯ ರುದ್ರಂ ನಮೋಭಿರ್ದೇವಮಸುರಂದುವಸ್ಯ| ಅಯಂ ಮೇ ಹಸ್ತೋ ಭಗವಾನಯಂ ಮೇ ಭಗವತ್ತರಃ| ಅಯಂ ಮೇ ವಿಶ್ವಭೇಷಜೋಯಗ್‍ಂ ಶಿವಾಭಿಮರ್ಶನಃ|  ಯೇ ತೇ ಸಹಸ್ರಮಯುತಂ ಪಾಶಾ ಮೃತ್ಯೋ ಮರ್ತ್ಯಾಯ ಹನ್ತವೇ| ಮೃತ್ಯವೇ ಸ್ವಾಹಾ ಮೃತ್ಯವೇ ಸ್ವಾಹಾ| ಓಂ ನಮೋ ಭಗವತೇ ರುದ್ರಾಯ ವಿಷ್ಣವೇ ಮೃತ್ಯುರ್ಮೇ ಪಾಹಿ|| 

ಪ್ರಾಣಾನಾಂ ಗ್ರಂಥಿರಸಿ ರುದ್ರೋ ಮಾ ವಿಶಾಂತಕಃ| ತೇನಾನ್ನೇನಾಪ್ಯಾಯಸ್ವ| ಸದಾಶಿವೋಮ್| ಓಂ ಶಾಂತಿಃ ಶಾಂತಿಃ ಶಾಂತಿಃ||

 

 

 

 sivasfamily.jpg

 

Oh! Rudra deva! My salutations to your anger and also to your arrows. My salutations to your bow and to your hands. Oh! Rudra! By the favuor of your arrow, bow, and quiver, which have shed their anger and turned auspicious, please render us happiness.   Lord Rudra, you who dwell on Mount Kailas and who confer happiness, by that form of yours which is not terrible, which will not injure us, and which is highly auspicious, behold and illuminate us. My Lord who dwells on Mount Kailas and confers gladness to all! You, who fulfills your vow of protecting all who serve you and take refuge in you; that arrow of yours which you hold ready to let fly, withhold it and make it tranquil and auspicious. Lord of Mount Kailash of the Vedas! we pray to attain you by our auspicious words. We ask that for all our days, this entire world will be free from ills and discord, and that we may live in amity and concord. Let him intercede on my behalf and speak in my favor, even Rudra, that foremost one, held high in honor by the gods, the physician. Let him annihilate the enemies of mine like scorpions, snakes, and tigers, and the unseen enemies like the raakshasas, spirits and demons.  

This Sun who is copper-red when he arises, then golden-yellow, this highly auspicious and beneficent one is truly Rudra. These other Rudras who are quartered round about in all directions of this earth, may I ward off their anger by my praise. The black-throated Rudra who has assumed the form of the sun that glows red when rising. Him the cowherds, the women carrying water, and all the creatures behold. He, who is seen by all, let him send happiness to us.

Let my salutations be to the blue-throated one, who has a thousand eyes. I also bow to his followers. Bhagavan Rudra, loosen the string from both ends of your bow. Remove out of sight the arrows from your hands.

 

You having a thousand eyes, and bearing a hundred quivers, after loosening your bow, kindly blunt the edges of your shafts. Assume your peaceful and auspicious shiva form and become well-intentioned towards us. Let the bow of Kapardin, Rudra of the matted locks, be without its string. Let there be no arrows in his quiver. Let his arrows lose their capacity to strike and pierce. Let his sword cover contain little power.

You, showerer of blessings, with your weapons and the bow in your hand, protect us completely. Let there be salutations to your sturdy and potent weapons, and also to both your hands and your bow. Let the arrow of your bow spare us in all ways. And place your quiver of arrows far away from us.

Let my salutations be to that great God who is the Lord of the universe; the great God who has three eyes and who destroys Tripura, the three demons cities. To that God who is the time (kaala) when the three sacred fires are lit; who is Rudra the fire that consumes the universe; whose throat is blue; who has conquered death; the Lord of all; the ever auspicious one. Salutations to that glorious and great God.

Salutations to Lord Rudra with the golden arms, the leader of hosts, to the Lord of the four directions. Salutations to the trees tufted with green leaves; to the Lord of the cattle. Salutations to him who is light yellow-red tinged and radiant; to the Lord of the pathways. Salutations to him who rides on the bull, to him who has the power to pierce all things, to the Lord of food. Salutations to him who is always black-haired, who wears the yajnopavita; to him the Lord of the sleek. Salutations to him, the instrument that destroys Ignorance; to the Lord of all the worlds. Salutations to him who protects the world by the might of his drawn bow, to Rudra the destroyer of all miseries; to the Lord of the fields and sacred places.

Salutations to the charioteer, he who cannot be overcome and slain. Salutations to the Lord of the forests. Salutations to the counselor of assemblies, the chief of traders, to the Lord of dense impenetrable clumps and clusters of thickets. Salutations to him who has created the world and spread it broad, the creator of riches and lover of those who are devoted to him; to the Lord of all vegetation. Salutations to him of the fearsome war cry, who causes his enemies to weep. To the leader of the foot-soldiers. Salutations to him who surrounds his enemies completely, and cuts off their retreat by running swiftly after the retreating stragglers; to the protector of the good who have taken refuge under him.  Salutations to him who cannot only withstand the shock of the onset of his enemies, but also overpower them, who can effortlessly pierce his enemies; the Lord of those who can fight on all sides, to him who stands prominent, the wielder of the sword; to the prince of thieves. Salutations to him who holds a dart in his hand to fit in his bow, who has a quiver on his back; to the Lord of those who steals openly, to him who worming himself into the confidence of others cheats them occasionally and he who cheats them systematically; to him pretending to be an acquaintance steals and misappropriates articles. Salutations to him who moves about guardedly ever with intention to steal; to him who moves amidst crowds and thronged places for pick-pocketing; to the Lord of forest thieves.

Salutations to him who is in the form of those who protect themselves in armor, who want to kill others; to the Lord of those who want to steal crops and wealth.
Salutations to him who is in the form of swordsmen who wander about at night; to the Lord of those who kill and seize others possessions. Salutations to him who wears a turban, who wanders about the mountains; to the leader of the landlords. Salutations to you who bear darts, who carry bows. Salutations to you who string your bows and you who fit arrows in them.

Salutations to you who pull the bow strings and let fly the shafts. Salutations to you who loosen the arrows and pierce the persons you aim at. Salutations to you Rudras who are seated and who are reclining. To you Rudras who are in the form of those who are asleep and awake. To you Rudras who are in the form of those who stand and those who run. To you Rudras who are in the form of those who sit as members of assemblies and those who preside over them. To you Rudras who are in the form of horses and those who command them.

Salutations to him who cannot only withstand the shock of the onset of his enemies, but overpower them. He who can effortlessly pierce his enemies; the Lord of those who can fight on all sides. Salutations to him who stands prominent, the wielder of the sword; to the prince of thieves. Salutations to him who holds a dart in his hand to fit in his bow, who has a quiver on his back; to the Lord of those who steals openly.

Salutations to him who worming himself into the confidence of others cheats them occasionally, and he who cheats them systematically; to him pretending to be an acquaintance steals and misappropriates articles. Salutations to him who moves about guardedly ever with intention to steal; to him who moves amidst crowds and thronged places for pick-pocketing; to the Lord of forest thieves. Salutations to him who is in the form of those who protect themselves in armor, who want to kill others; to the Lord of those who want to steal crops and wealth. Salutations to him who is in the form of swordsmen who wander about at night; to the Lord of those who kill and seize others possessions.

Salutations to him who wears a turban, who wanders about the mountains; to the leader of the landlords. Salutations to you who bear darts, who carry bows. Salutations to you who string your bows and you who fit arrows in them. Salutations to you who pull the bow strings and let fly the shafts. Salutations to you who loosen the arrows and pierce the persons you aim at.

Salutations to you Rudras who are seated and who are reclining. Salutations to you Rudras who are in the form of those who are asleep and awake, to you Rudras who are in the form of those who stand and those who run. Salutations to you Rudras who are in the form of those who sit as members of assemblies and those who preside over them, To you Rudras who are in the form of horses and those who command them.

Salutations to you who can hit and pierce from all sides, and you who can pierce in diverse and manifold ways. Salutations to you who are in the form of the superior female Gods and the fierce vengeful and powerful Goddesses. Salutations to you the covetous and greedy, and the leaders of such men. Salutations to you of diverse crowds and races, and the leaders of them. Salutations to you Ganas and their lords.
Salutations to you who assume grotesque and monstrous forms and other diverse shapes.

Salutations to you, the great ones and the small ones. Salutations to you who ride the chariots and you who ride on no conveyance, but walk on foot. Salutations to you who are in the form of chariots and those who own them. Salutations to you in the form of armies and the leaders of such armies. Salutations to you who are in the form of those who teach the chariot driving to others, and those who drive the vehicles themselves. Salutations to you who are in the form of carpenters and fashioners of chariots.

Salutations to you who are in the form of those who mould clay and make mud vessels, and artisans working on the metals. Salutations to you who are in the form of fowlers who net flocks of birds and fishermen who net shoals of fish. Salutations to you who are in the form of makers of arrows and bows. Salutations to you who are in the form of hunters and that of the leaders of the hounds.

Salutations to him who is the source of all things and who is the destroyer of all ills. Salutations to the destroyer and to the protector of all beings in bondage. Salutations to him whose throat is black and also white. Salutations to him of the matted locks, and to him who is clean-shaven. Salutations to him who has a Thousand eyes and a hundred bows.

Salutations to him who dwells on the mount and who is in the form of Vishnu, to him who showers blessings very much and who bears arrows, to him who assumes a small size, and who is in the form of a dwarf, to the great and majestic one, who is full of all excellence, to the ancient one who is loudly praised by the scriptures. Salutations to him who was before all things and who is foremost, to him who pervades all and moves swiftly, to him who is in fast moving things and in headlong cascades, to him who is in great waves and in the still waters. Salutations to him who is in the floods and in the islands

Salutations to him who is senior and also junior. Salutations to him who was born before all and who will be born after all, to him who appears in the middle, and who appears undeveloped, to him who is born from the back side and from the under. Salutations to him who is born in the mixed world of good and bad and in things that move. Salutations to him who is in the worlds of Yama and in the worlds of safety.

Salutations to him who is in the form of the bountiful fields and the threshing floors, to him who is praised by the Vedic Mantras and who is expounded in the Vedantic Upanishads, to him who is in the form of trees in the forests and of creepers in the shaded areas. Salutations to him who is sound and the echo of the sound, to him whose armies move swiftly and who rides on a swift chariot, to the warrior, he who pierces his enemies. Salutations to him who is clad in armor himself, and who has provided for the safety of his charioteer, to him who wears a helmet and breast-plate, to him who is praised in the Vedas and whose army is also praised.

Salutations to him who is the kettle drum and who is also the drum stick, to him who never turns his back in fight, but is at the same time prudent, to him who is in the form of the messenger and the representative sent for special purposes, to him who has a sword and a quiver of arrows. Salutations to him having keen shafts and all weapons, to him bearing a beautiful and powerful weapon and bow, to him who is in the narrow footpaths and the broad highways, to him who is in the narrow flow of waters and in their descent from higher to lower levels.

Salutations to him who is in the marshy and muddy places and in the lakes, to him who is in the flowing waters of rivers and in the still waters of mountain tarns, to him who is in the wells and in the pits, to him who is born in the rivers and famine land, to him who is in the clouds and in the lightning. to him who is in the glittering white autumn clouds and who is in the rains and mixed with sunshine, to him who is in the rains accompanied by winds and in the rains accompanied by hail, to him who is household wealth and the guardian deity of the household.

Salutations to him who is with his consort Uma. Salutations to him who is red and rosy-red also. Salutations to him who brings happiness and who is the Lord of all creatures. Salutations to him who is fierce and strikes terror at sight into his enemies. Salutations to him who kills in front and from afar. Salutations to him who is in the form of everyone who slays, and who kills all at the time of praLaya.

Salutations to the stately trees with green tufts of leaves. Salutations to him who is part of aum. Salutations to him who is the source of happiness here and hereafter. Salutations to him who is inherently of the nature of conferring happiness directly in this world and the world hereafter. Salutations to him the auspicious one, who is more auspicious than all others. Salutations to him who is ever present in holy places and on the banks of the rivers.

Salutations to him who stands in the far away and on this shore. Salutations to him who ferries men over the sins and evils of samsaara (the Illusions of the world), and who by the grant of knowledge ferries them over samsaara altogether. Salutations to him who is born again and again in samsaara and who tastes the fruits of Karmas in the form of Jeeva. Salutations to him who is in the form of tender grass and foam. Salutations to him who is in the form of the sands and flowing water.

Salutations to him who abides in saline tracts and in trodden pathways. Salutations to him who is in the rocky uninhabitable and rugged tracts and in habitable places. Salutations to him who binds his matted locks and wears them majestically like a crown and to him who ever stands before his devotees. Salutations to him who is in the cow pens and in the homesteads. Salutations to him who reclines on couches and who takes his ease in stately store yard buildings. Salutations to him who is in the thorny impenetrable forest places and in accessible mountain caves

Salutations to him who is in deep waters and in the dew drops. Salutations to him who is in visible and invisible dust. Salutations to him who is in dry things and green things. Salutations to him who exists in hard places which do not sustain even grass and in coarse and other grasses. Salutations to him who is in the earth and in the fair waves. Salutations to him who is in the green leaves and the dried ones.

Salutations to the soldiers of Rudra who have their weapons uplifted and who strike from the front, to them who afflict slightly and also grievously. to you who shower wealth and who dwell in the hearts of the Gods, to you who are not liable to decay, to you who search and examine the good and bad that each one does, to them who have rooted out sin utterly, to them who have assumed a gross form and stand in the material shape of the universe (and who abides in the hearts of the Gods).

You who makes sinners lead contemptible lives, Lord and dispenser of food. You who chooses to remain poor amidst your riches. You dark in the neck and red elsewhere. Frighten not these our near and dear persons or these cattle. Let not even one among them perish or get ill. Oh Lord Rudra! By that form, which is peaceful and auspicious, more highly auspicious since it is a panacea for human ills for all days, most highly auspicious since by the grant of knowledge and illumination, it utterly uproots ignorance and the entire misery of samsaara, by that gracious form of your make us lead a full and happy life.

May we foster and cherish this attitude of mind towards Rudra, even, the strong one with the matted locks, opposing whom his enemy warriors are defeated and meet their doom. May we adopt a mental inclination which results in Rudra maintaining friendship with our human relations and our wealth of cattle; sleek and content. Lord Rudra! Confer on us happiness in this world, and in the next. You who has destroyed our sins, we shall serve and worship you by our salutations. That freedom from sorrow which Manu, our progenitor, sought for and the happiness which he obtained, we shall taste it, if you are inclined and gracious to us.

Lord Rudra! Afflict not the elders in our midst, the tender babe, the procreating youth, the child in the womb, the father, mother, nor our bodies which are dear to us. Lord Rudra! Getting angry at our transgressions hurts not only our children, our sons in particular, but also our cattle and horses, and our warriors. Making offerings into the sacred fire, we shall serve and calm you by our salutations.

Oh Deva! let that terrible form of yours, that which afflicts our cattle, our sons and grandsons, and wastes your enemy warriors, be far away from us. Let that form which confers happiness be near to us. Protect us. Recommend us to the other Gods and bespeak in our favour. You who increases the happiness of both worlds. Please confer happiness upon us. I praise you the famous one, seated in the heart, the ever-youthful, terrible like the lion, fierce for the purpose of destruction. Lord Rudra, having been praised by us, let your armies strike at others than us.

Let the weapon of Rudra give us wide berth. Let the fixed displeasure of Rudra blazing with just anger based on our sins, and keen to punish, depart from us. You the showerer of blessings! Your purpose and your shaft are ever unerring; loosen them in regard to us; we approached you with sacrifices and prayers. Make our sons and their sons happy. Supreme showerer of blessings. Supreme auspicious one! Be auspicious and beneficent, and bear goodwill to us. Place your threatening and hurtful weapons on some tall and distant tree. Approach us wearing your elephant hide garment. Come bearing your Pinaka bow.

O! Showerer of wealth! You white One! Lord! Bhagavan! Salutations to you. Let your thousands of weapons not destroy us, but rather destroy our enemies. In your arms exist thousands of kinds of weapons in thousands of numbers. But Bhagavan, you art Lord and master of them. Turn their hurtful faces away from us.

Those Rudras who live on the face of the earth in thousands of varieties, we shall cause the strings of their bows to be loosened, and the bows themselves to be deposited thousands of yojanas far away from us. Those Rudras who dwell in the sublime ocean and the space between sky and earth, we shall cause the strings of their bows to be loosened and the bows themselves to be deposited thousands of yojanas far away from us. The Rudra Ganas, blue throated, where the Kalakoota poison rested; and white throated in other portions; those Rudras who dwell in the nether regions (paataala); we shall cause the strings of their bows to be loosened, and the bows themselves to be deposited thousands of yojanas far away from us.

 

Blue throated where the poison rested and elsewhere white throated Rudras who dwell in the heaven, we shall cause the strings of their bows to be loosened, and the bows themselves to be deposited thousands of yojanas far away from us. Those Rudras of the color of tender grass who are black throated, those who are red in color, who live in trees, we shall cause the strings of their bows to be loosened, and the bows themselves to be deposited thousands of yojanas far away from us.

 

Those Rudras who stand in the food and in the liquids, and pierce the persons who eat the food and drink the liquids, who are the protectors of the pathways, the givers of food, who fight with one enemies, who haunt the sacred places wearing short daggers and long swords, who have entered the quarters and occupied them, we shall cause the strings of their bows to be loosened, and the bows themselves to be deposited thousands of yojanas far away from us. Those Rudras who are on this earth, to whom food turns into shafts, I bow to them with my speech. With my ten fingers joined, I bow to them with my body facing the east, the south, the west, the north, and upwards, I bow to them with my mind. May they render me happy. Oh Rudras, to whom we bow! I consign him whom we hate and he who hates us, into your yawning mouths.

Those Rudras who dwell in the middle region between the heaven and the earth, for whom the wind furnishes the shaft, salutations to them. With the ten fingers joined, I bow to them in the east, the south, the west, the north and upwards. Salutations to them. May then render me happy. They whom we hate, and they who hate us, I consign them into their yawning mouths. Those Rudras who dwell in heaven, to whom rain serves as a shaft, salutations to them. With the ten fingers joined, I bow to them in the east, the south, the west, the north and upwards. Salutations to them. May then render me happy. He whom we hate, and he who hates us, I consign them into your yawning mouths.

He who has divine fragrance, who makes men powerful and full of plenty, we worship, the three-eyed Rudra. Like a ripe berry from its stalk, release me from death, and let me not turn away from immortality and enlightenment. That Rudra who has even entered into and pervaded fire, the water, vegetation, and all the worlds, let my salutations be to that Rudra.

He who holds a beautiful and powerful shaft and a strong bow, who is the source and repository of all medicines, praise Him alone. To gain the favour and goodwill of that supreme and effulgent God Rudra, let us worship Him, honor and adore Him by salutations. Due to its contact with the Linga image, this right hand of mine is fortunate. Indeed this hand of mine is a panacea for all human beings for all ills.

Oh Death in the form of Rudra. Those countless nooses of yours by which you destroy all mortal creatures, we shall loosen them by the efficiency of our worship. I offer this sacred food offering in sacrifice to Rudra the Destroyer. Salutation to the omnipresent god Rudra. Protect me from death.

Kamadhenu, the divine cow discovered the hymns by which the gods are invoked. Manu was the sacrificer. Brihaspathi repeated the shaasthra mantras which gladden. May the vishva devaas praised in the hymns and Mother Earth not cause me any suffering. Let me think sweet thoughts; let me perform sweet actions which bear sweet fruits; let me bear sweet offerings, let my speech and praise be sweet; let me utter words which sound sweet to the Gods; let me utter sweet words to men who would lend their ears. Let the Gods illumine me and render my speech sweet. Let the PitRus, the forefathers feel glad and approve of me.

shivaparvati.jpg

ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ಗಣಪತಿ ಪೂಜೆ (ಕೆಲವು ಮಾಹಿತಿಗಳು)


ashtavinayaka.jpg

ಗಣಾನಾಂ ತ್ವಾ ಗಣಪತಿಂ ಹವಾಮಹೇ, ಕವಿಂ ಕವೀನಾಂ ಉಪಮಶ್ರಮವಸ್ತಮಂ|

ಜ್ಯೇಷ್ಠ ರಾಜಂ ಬ್ರಹ್ಮಣಾಂ ಬ್ರಹ್ಮಣಸ್ಪತ ಆನ:ಶೃಣ್ವನ್ ಊತಿಭಿ: ಸೀದ ಸಾಧನಂ||

(ಯಜುರ್ವೇದ ಸಂಹಿತೆ)

ತ್ವಮೇವ ಕೇವಲಂ ಕರ್ತಾಸಿ

ತ್ವಮೇವ ಕೇವಲಂ ಧರ್ತಾಸಿ

ತ್ವಮೇವ ಕೇವಲಂ ಹರ್ತಾಸಿ

ತ್ವಮೇವ ಸರ್ವಂ ಖಲ್ವಿದಂ ಬ್ರಹ್ಮಾಸಿ

ತ್ವಂ ಸಾಕ್ಷಾದಾತ್ಮಾಸಿ ಆತ್ಮಂ

ತ್ವಂ ಬ್ರಹ್ಮಾ ವಿಷ್ಣುಸ್ತ್ವಂ ರುದ್ರಸ್ತ್ವಂ ಇಂದ್ರಸ್ತ್ವಂ ಅಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮಭೂರ್ಭುವಸ್ಸುವರೋಮ್.

ಗಣೇಶಾಥರ್ವಶೀರ್ಷದಲ್ಲಿ ಹೀಗೆ ಆತನನ್ನು ವರ್ಣಿಸಿದೆ.

ಗಣೇಶನು ಶಿವನ ಗಣಗಳ ಅಧಿಪತಿ. ಸ್ವರ್ಣಗೌರಿಯ ಪ್ರೀತಿಯ ಪುತ್ರ. ವಿಘ್ನ ವಿನಾಶಕ ವಿನಾಯಕ.

ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗುದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು. ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು.

ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಇದರ ಬಗೆಗಿನ ಕಥೆ ಎಲ್ಲರಿಗೂ ತಿಳಿದಿರುವುದೇ.

ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ.

ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.

ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.

ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ. ನಮ್ಮ ಕಾಲೋನಿಯಲ್ಲಿಯೂ ಗಣಪತಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು.

ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್

ಗಣಪತಿ ಆರತಿ

ಮಹಾರಾಷ್ಟ್ರದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮಂಗಳಾರತಿಯ ಸಮಯದಲ್ಲಿ

ಹಾಡುವ ಸುಂದರ ಭಜನೆ – ಕರ್ತೃ ಯಾರೆಂದು ತಿಳಿಯದು

ಸುಖಕರ್ತಾ ದು:ಖಹರ್ತಾ ವಾರ್ತಾ ವಿಘ್ನಾಚೀ

ನುರವೀ ಪುರವೀ ಪ್ರೇಮ ಕೃಪಾ ಜಯಾಚೀ

ಸರ್ವಾಂಗೀ ಸುಂದರ ಉಟಿ ಶೆಂಟೂರಾಚೀ

ಕಂಠೀ ಝಳಕೇ ಮಾಲ ಮುಕ್ತಾ ಫಳಾಚೀ

ಜಯದೇವ ಜಯದೇವ ಜಯ ಮಂಗಲಮೂರ್ತೀ

ದರ್ಶನಮಾತ್ರೇ ಮನಕಾಮನಾ ಪೂರ್ತೀ

ಜಯದೇವ ಜಯದೇವ ಜಯ ಮಂಗಲ ಮೂರ್ತೀ

ದರ್ಶನಮಾತ್ರೇ ಮನಕಾಮನಾ ಪೂರ್ತೀ

ರತ್ನಖಚಿತ ಫರಾ ತುಜ ಗೌರಿಕುಮರಾ

ಚಂದನಾಚೀ ಉಟೀ ಕುಂಕುಮಕೇಶರಾ

ಹಿರೆಜಡಿತ ಮುಕುಟ ಶೋಭತೊ ಬರಾ

ಋಣಝುಣಗೀ ನೂಪುರೇ ಚರಣೀ ಘಾಗರಿಯಾ

ಜಯದೇವ ಜಯದೇವ

ಜಯದೇವ ಜಯದೇವ ಜಯ ಮಂಗಲಮೂರ್ತೀ

ದರ್ಶನಮಾತ್ರೇ ಮನಕಾಮನಾ ಪೂರ್ತೀ

ಜಯದೇವ ಜಯದೇವ

ಲಂಬೋದರ ಪೀತಾಂಬರ ಫಣಿವರಬಂಧನಾ

ಸರಲ ಸೋಂಡ ವಕ್ರತುಂಡ ತ್ರಿನಯನಾ

ದಾಸ ರಾಮಾಚಾ ವಾಟ ಪಾಹೆ ಸದನಾ

ಸಂಕಟೀ ಪಾವಾವೇಂ, ನಿರ್ವಾಣೀಂ ರಕ್ಷಾವೇಂ ಸುರವರ ವಂದನಾ

ಜಯದೇವ ಜಯದೇವ

ಜಯದೇವ ಜಯದೇವ ಜಯ ಮಂಗಲಮೂರ್ತೀ

ದರ್ಶನಮಾತ್ರೇ ಮನಕಾಮನಾ ಪೂರ್ತೀ

ಜಯದೇವ ಜಯದೇವ

ಜಯದೇವ ಜಯದೇವ

ಜಯದೇವ ಜಯದೇವ ಜಯ ಮಂಗಲಮೂರ್ತೀ

ದರ್ಶನಮಾತ್ರೇ ಮನಕಾಮನಾ ಪೂರ್ತೀ

ಜಯದೇವ ಜಯದೇವ

ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ಜೀವನ ಬೇವು ಬೆಲ್ಲ

http://thatskannada.oneindia.in/chowchow/festivals/ugadi/140307concept1.html

ಜೀವನವೆಲ್ಲಾ ಬೇವು ಬೆಲ್ಲ

ಅರಿತು ಬಾಳುವನೇ ಕಲಿಗಳ ಮಲ್ಲ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

ಹೊಸ ವರುಷದಿ ಹೊಸ ಹರುಷವ ಹೊಸತು ಹೊಸತು ತರುತಿದೆ

ಪ್ರತಿ ವರುಷ ಯುಗಾದಿ ಹಬ್ಬದ ದಿನ ರೇಡಿಯೋ ಮತ್ತು ಟಿವಿಗಳಲ್ಲಿ ಈ ಹಾಡು ಪ್ರಸಾರವಾಗುತ್ತದೆ. ಎಷ್ಟೇ ಬಾರಿ ಕೇಳಿದರೂ ತೃಪ್ತಿಯಾಗದೇ ಮತ್ತೆ ಮತ್ತೆ ಕೇಳಬೇಕೆನಿಸುವ ಸಾಹಿತ್ಯ. ದ.ರಾ.ಬೇಂದ್ರೆಯವರು ಬರೆದ ಈ ಗೀತೆಯನ್ನು ಕುಲವಧು ಚಲನಚಿತ್ರಕ್ಕೆ ಅಳವಡಿಸಿಕೊಂಡಿದ್ದಾರೆ. ಹಾಡಿರುವವರು ಎಸ್. ಜಾನಕಿ.

ಮಾರ್ಗಶೀರ್ಷ ಮಾಸದ ಹೋಳಿ ಹುಣ್ಣಿಮೆಯಾದ ೧೫ ದಿನಗಳಿಗೆ ಬರುವುದು ಯುಗಾದಿ. ಯುಗ ಎಂದರೆ ಅದೊಂದು ಕಾಲಗಣನೆ. ತ್ರೇತಾಯುಗ, ಕೃತಯುಗ, ದ್ವಾಪರಯುಗ, ಕಲಿಯುಗಗಳಿಗೆ ಯುಇಗವೆಂದರೆ ೫೦೦೦ಕ್ಕೂ ಹೆಚ್ಚಿನ ವರುಷಗಳಂತೆ. ಆದರೆ ಇಲ್ಲಿ ಹಾಗಲ್ಲ. ಕಾಲದ ಒಂದು ಭಾಗ ಮತ್ತೆ ಪ್ರಾರಂಭವಾಗುತ್ತಿದೆ ಎಂಬುದರ ಸೂಚನೆಯಷ್ಟೆ. ವಸಂತ ಋತುವಿನಿಂದ ಪ್ರಾರಂಭಗೊಂಡ ಕಾಲಗಣನೆ ಶಿಶಿರದಲ್ಲಿ ಮುಕ್ತಾಯಗೊಂಡು ಮತ್ತೆ ವಸಂತ ಪ್ರಾರಂಭವಾಗುತ್ತಿರುವುದರ ಸೂಚನೆ. ಇಂತಹ ಯುಗದ ಅಂದರೆ ವರುಷದ ಮೊದಲನೆಯ ದಿನವನ್ನು ಯುಗಾದಿ ಎಂದು ಗುರುತಿಸಿ ಹಬ್ಬವನ್ನಾಗಿ ಆಚರಿಸುವರು. ಈ ದಿವಸದಲ್ಲಿ ಒಳ್ಳೆಯ ಅಥವಾ ಕೆಟ್ಟ ಘಟನೆ ಯಾವುದೇ ಆದರೂ ಮುಂದೆ ಇಡೀ ಒಂದು ವರ್ಷದಲ್ಲಿ ಅದರ ಪರಂಪರೆ ಮುಂದುವರಿಯುತ್ತದೆ ಎಂಬುದು ಕೆಲವರ ಅಭಿಪ್ರಾಯ. ಈ ದಿನದಂದು ಯಾವ ವಾರ ಇರುತ್ತದೆಯೋ ಅದನ್ನೇ ವರ್ಷದ ಅಧಿಪತಿ ಎಂದು ಕರೆಯುವರು. ಉದಾಹರಣೆಗೆ – ಈ ವರ್ಷದ ಯುಗಾದಿ ಹಬ್ಬವು ಸೋಮವಾರ ಬರುವುದರಿಂದ ಇಡೀ ವರ್ಷಕ್ಕ ಸೋಮನೇ (ಚಂದ್ರ) ಅಧಿಪತಿ ಎನುವರು.

ಚಾಂದ್ರಮಾನ ಪಂಚಾಂಗ ರೀತ್ಯಾ ಚೈತ್ರ ಮಾಸದ ಶುದ್ಧ ಪಾಡ್ಯದ ದಿನದಂದು ಬ್ರಹ್ಮ ಈ ಲೋಕವನ್ನು ಸೃಷ್ಟಿಸಿದ ಎಂಬ ಪ್ರತೀತಿ ಇದೆ. ಇಂದೇ ಸೂರ್ಯನು ತನ್ನ ಮೊದಲ ಕಿರಣವನ್ನು ಭೂಮಿಯ ಮೇಲೆ ಹರಿಸಿದ ಎಂಬ ಮಾತೂ ಇದೆ. ಇವೆಲ್ಲವೂ ಇಂದು ನಂಬಲಶಕ್ಯ. ಆದರೂ ಮುಂದಿನ ಪೀಳಿಗೆಗೆ ಇದರ ಬಗ್ಗೆ ಸ್ವಲ್ಪವಾದರೂ ತಿಳಿದಿರಲಿ ಎಂದು ಹೇಳಬೇಕಿದೆ. ಇಂದಿನ ದಿನದಿಂದ ವಸಂತ ಮಾಸ ಪ್ರಾರಂಭವಾಗಿ ತರು ಲತೆಗಳು ಚಿಗುರುತ್ತವೆ. ಹೊಸ ಹೊಸ ಹೂಗಳು ಕಂಪನ್ನು ಬೀರುತ್ತವೆ. ಹಳೆಯ ತರಗೆಲೆಗಳು ಉದುರಿ ಗಿಡ ಮರಗಳು ಮತ್ತೆ ಮರಳಿ ಹೊಸ ಚೈತನ್ಯ ಪಡೆಯುತ್ತವೆ. ಜೀವನದಲ್ಲಿ ಒಂದು ವರುಷಗಳಲ್ಲಿ ಕಂಡ ಸುಖ ದು:ಖಗಳನ್ನು ಮರೆತು ಹೊಸ ಬಾಳನ್ನು ನೋಟ್‍ಬುಕ್ಕಿನ ಹೊಸ ಪುಟದಂತೆ ಪ್ರಾರಂಭಿಸುವ ಸೂಚನೆಯ ಈ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ.

ಇಂದಿನ ದಿನ ಶ್ರೀರಾಮನು ರಾವಣನನ್ನು ಜಯಿಸಿ ಮರಳಿ ಅಯೋಧ್ಯೆಗೆ ಬಂದು ರಾಜ್ಯಭಾರ ಮಾಡಿದನೆಂದು ಪ್ರತೀತಿ. ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್‌ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ಗುಡಿಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ. ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಅಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು. ತಮಿಳುನಾಡಿನಲ್ಲಿ ಯುಗಾದಿ ಪರ್ವವನ್ನು ಚಿತ್ರವಿಷು ಎಂದು ಕರೆಯುವರು. ಆದರೆ ಅಲ್ಲಿ ಸೌರಮಾನ ಲೆಕ್ಕದ ಪಂಚಾಂಗವನ್ನು ಕಾಲಗಣನೆಗೆ ಉಪಯೋಗಿಸುವರು. ಆದ್ದರಿಂದ ಅಲ್ಲಿನ ಯುಗಾದಿ ಹಬ್ಬ ಬೇರೆಯೇ ದಿನ ಬರುವುದು.

ಅಂದು ಬೆಳಗ್ಗೆ ಎಳ್ಳೆಣ್ಣೆಯಿಂದ ಅಭ್ಯಂಗ ಸ್ನಾನವನ್ನು ಮಾಡುವರು. ನಂತರ ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು. ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.

ಅಂದು ವಿಷ್ಣುವು ಮತ್ಸ್ಯಾವತಾರವನ್ನು ತಳೆದ ದಿನ ಮತ್ತು ಶ್ರೀರಾಮನು ವನವಾಸದಿಂದ ಮರಳಿದ ದಿನ. ಅಂದು ಯವಿಷ್ಠಎಂಬ ಅಗ್ನಿಯನ್ನು ಆವಾಹನೆ ಮಾಡಬೇಕು. ಗುರುಗಳಿಗೂ ಮತ್ತು ಅವರ ಕುಟುಂಬದವರಿಗೆ ವಸ್ತ್ರ ಅಲಂಕಾರ ಸಾಮಗ್ರಿಗಳನ್ನು ದಾನ ಮಾಡಬೇಕು. ಯೋಗ್ಯರಾದ ಜೋಯಿಸರಿಂದ ಹೊಸ ವರ್ಷದ ನಾಯಕರು ಮತ್ತು ಅವರ ಫಲಗಳನ್ನು ಪಂಚಾಂಗದ ಮೂಲಕ ತಿಳಿದು, ಅವರಿಗೆ ದಾನ ಮಾಡಬೇಕು. ಅಂದಿನ ದಾನದಲ್ಲಿನ ವಿಶೇಷ ವಸ್ತುಗಳೆಂದರೆ ಪಂಚಾಂಗ ಮತ್ತು ನೀರಿನ ಪಾತ್ರೆ. ಅದಲ್ಲದೇ ಬಡಬಗ್ಗರಿಗೆ ಯಥೋಚಿತವಾದ ದಾನವನ್ನು ಮಾಡಬೇಕು.

(ಪ್ರಾಪ್ತೇ ನೂತನ ಸಂವತ್ಸರೇ ಪ್ರತಿಗೃಹ್ಯಂ ಕುರ್ಯಾದ್ವಜಾರೋಪಣಂ

ಸ್ನಾನ ಮಂಗಲಮಾಚರೇದ್ ದ್ವಿಜವರೈಃ ಸಾಕಂ ಸುಪೂಜ್ಯೋತ್ಸವೈಃ|

ದೇವಾನಾಂ ಗುರುಯೋಷಿತಾಂ ಚ ಶಿಸವೋಲಂಕಾರವಸ್ತ್ರಾದಿಭಿಃ

ಸಂಪೂಜ್ಯಾ ಗಣಕಃ ಫಲಂ ಚ ಶೃಣುಯಾತ್ತಸ್ಮಾಚ್ಚ ಲಾಭಪ್ರದಂ||)

ಈ ಹಬ್ಬ ಬರುವುದು ವಸಂತ ಋತುವಿನಲ್ಲಿ. ವಸಂತ ಎಲ್ಲ ದೇವತೆಗಳಿಗೂ ಮತ್ತಿತರಿಗೂ ಪ್ರಿಯವಾದ ಋತು. ಆ ಸಮಯದಲ್ಲಿ ನಿಸರ್ಗವು ಹೊಸ ಚಿಗುರು ಮತ್ತು ಹೂಗಳಿಂದ ನಳನಳಿಸುವುದು. ಈ ಋತುವಿನ ಸಮಶೀತೋಷ್ಣವಾದ ವಾತಾವರಣವು ದೇವತಾಪೂಜೆಗೆ ಮತ್ತು ಇನ್ನೆಲ್ಲಾ ಶುಭಕಾರ್ಯಗಳಿಗೆ ಹಿತಕರವಾಗಿದೆ. ಬ್ರಹ್ಮಪುರಾಣದಲ್ಲಿ ಹೀಗಿ ಹೇಳಿದೆ

ಅಹಮಗ್ನಿರ್ಮಹಾತೇಜಾಃ ಸೋಮಶ್ಚೈಷಾ ಮಮಾಂಬಿಕಾ|

ಅಹಮಗ್ನಿಶ್ಚ ಸೋಮಶ್ಚ ಪ್ರಕೃತ್ಯಾ ಪುರುಷಃ ಸ್ವಯಂ||”

ಈ ಶೈತ್ಯ ಉಷ್ಣತೆಗಳ ಸಂಗಮ ಕಾಲವನ್ನು ಸೃಷ್ಟಿಕರ್ತನು ಸೃಷ್ಟಿಯನ್ನು ಪ್ರಾರಂಭಿಸಿದ ದಿನ ಎಂದು ಭಾವಿಸಿರುವುದು ಸರ್ವಥಾ ಉಚಿತವಾಗಿದೆ. ಈ ಶಿವಶಕ್ತಿಗಳು ಹೊರಮುಖವಾಗಿ ಸೇರಿದರೆ ಸೃಷ್ಟಿ, ಒಳಮುಖವಾಗಿ ಸೇರಿದರೆ ಸಮಾಧ್. ಅಂತಹ ಸಮಾಧಿಯೋಗಕ್ಕೂ ಅದಕ್ಕನುಗುಣವಾದ ಲೋಕಯಾತ್ರೆಯ ಸಂವಿಧಾನಕ್ಕೂ ಸ್ಫೂರ್ತಿ ನೀಡುವ ಸಂಧಿಸಮಯ ಇದು. ತನ್ನ ಸೃಷ್ಟಿರಹಸ್ಯವಾದ ವೇದವಿದ್ಯೆಯನ್ನು ಸೃಷ್ಟಿಯ ಆದಿಯಲ್ಲಿ ಉಪದೇಶ ಮಾಡಿದ ಭಗವಂತನ ಮತ್ಸ್ಯಾವತಾರದ ಜಯಂತಿ ಎನಿಸುಕೊಳ್ಳುವ ಸುದಿವಸವಿದು.

ಅಂದಿನ ಹಬ್ಬದಾಚರಣೆಯ ಕ್ರಮ ಹೀಗಿದೆ :

1. ಮೊದಲು ಅಭ್ಯಂಜನ – ತೈಲ ಉಪಯೋಗದಿಂದ ಭೌತಿಕವಾಗಿ ತಲೆಯಿಂದ ಪಾದದವರೆವಿಗೆ ಸ್ನಾನ ಮಾಡುವುದರಿಂದ ಆಯಾಸ, ವಾತದ ದೋಷಗಳ ನಿವಾರಣೆಯಾಗುವುದು. ಪ್ರಸನ್ನತೆ, ಪುಷ್ಟಿ, ಆಯುರ್ವರ್ಧನೆ, ಸುಖ ನಿದ್ರೆಗಳು ಲಭಿಸುವುವು. ಅಲ್ಲದೇ ಚರ್ಮದ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಯೂ ಆಗುವುದು.

2. ಗೃಹಾಲಂಕಾರ – ತಳಿರು ತೋರಣಗಳು, ಪತಾಕೆಗಳೂ ಮತ್ತು ರಂಗವಲ್ಲಿಯ ಸಹಾಯದಿಂದ ಮನೆಯ ಒಳಗೆ ಮತ್ತು ಹೊರಗೆ ಸಿಂಗಾರ

3. ಸಂಕಲ್ಪ – ಇಷ್ಟ ದೇವತಾ ಪೂಜೆ

4. ಹೋಮ – ಈ ಹಬ್ಬದಲ್ಲಿ ಹೋಮ ಮಾಡುವ ಅಗ್ನಿಗೆ ಯವಿಷ್ಠಎಂದು ಹೆಸರಿಸಿರುವರು. ಯವಿಷ್ಠಎಂದರೆ ಅತ್ಯಂತ ಕಿರಿಯವನು ಎಂದರ್ಥ. ಸೃಷ್ಟಿಯ ಪ್ರಾರಂಭದಲ್ಲಿ ಶಕ್ತಿಯು ಅತ್ಯಂತ ಸೂಕ್ಷ್ಮವೆಂದು ಉಪಾಸನೆ ಮಾಡಲ್ಪಡುತ್ತದೆ. ಅದರ ಪ್ರತೀಕವಾಗಿರುವ ಅಗ್ನಿಗೆ ಅತ್ಯಂತ ಕಿರಿಯವರು ಎಂದು ಸೂಚಿಸುವರು.

5. ಪಂಚಾಂಗ ಶ್ರವಣ

6. ದಾನ

7. ವಿಶೇಷ ನೈವೇದ್ಯ – ಸಾಮಾನ್ಯವಾಗಿ ಬೇವು ಬೆಲ್ಲವನ್ನು ವಿಶೇಷವಾಗಿ ನೈವೇದ್ಯ ಮಾಡುವುದರ ಜೊತೆಗೆ ಹೋಳಿಗೆ ಅಥವಾ ಒಬ್ಬಟ್ಟನ್ನೂ ನೈವೇದ್ಯ ಮಾಡುವರು. ಕೆಲವು ಕಡೆ ಬೇವಿನೊಡನೆ ಕಲ್ಲು ಸಕ್ಕರೆ ಮತ್ತು ಮೆಣಸನ್ನೂ ಸೇರಿಸಿ, ಆ ಮಿಶ್ರಣವನ್ನು ನೈವೇದ್ಯ ಮಾಡಿ ಸೇವಿಸುವರು.

ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು. ಅಂದಿನ ವಿಶೆಷ ತಿನಿಸು – ಒಬ್ಬಟ್ಟು ಅಥವಾ ಹೋಳಿಗೆ. ತೆಂಗಿನಕಾಯಿ ಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣಲ್ಲಿ ಮಾಡುವರು. ಇದನ್ನೇ ಮರಾಠಿಯಲ್ಲಿ ಪೂರಣಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು. ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು.

ಇನ್ನೊಂದು ವಿಶೇಷವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಎಲ್ಲರ ಬಾಳಲ್ಲೂ ಸುಖ-ದುಃಖ, ಒಳ್ಳೆಯದು-ಕೆಟ್ಟದ್ದು, ಕರ್ಮ-ಫಲ ಇದ್ದೇ ಇರುವುದು. ಇದೊಂದು ಬ್ಯಾಲೆನ್ಸ್ ಶೀಟು ಇದ್ದ ಹಾಗೆ. ಎಷ್ಟು ಸ್ವೀಕರಿಸುವರೋ ಅಷ್ಟನ್ನೇ ಮರಳಿ ಕೊಡಬೇಕು, ಬರುವಾಗ ಏನೂ ತರದೆ ಬಂದಂತೆ ಕೊನೆಯಲ್ಲಿ ಹೋಗುವುದು. ಅದಕ್ಕೇ ಇಂದಿನ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ಬೇವಿನಲ್ಲಿ ಇರುವ ಶಕ್ತಿ ನಿಜವಾಗಿಯೂ ಬೆಲ್ಲದಲ್ಲಿಲ್ಲ. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿ ಅಥವಾ ಶಾಖವನ್ನು ಉಂಟು ಮಾಡಿದರೆ, ಅದೇ ನಾಲಗೆಗೆ ಕಹಿಯಾದ ಬೇವು ಆ ಉರಿಯನ್ನು ಶಮಿಸುವುದು.

ಬೇವು ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:

ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|

ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ||

ಅದರರ್ಥ ಹೀಗಿದೆ – ನೂರು ವರುಷಗಳ ಆಯುಷ್ಯೆ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.

ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ಮಹಾ ಶಿವರಾತ್ರಿ

                                          linga.jpg

ಓಂ ನಮ: ಶಿವಾಯ

 

ಮಹಾ ಶಿವರಾತ್ರಿಯ ಬಗ್ಗೆ ನನಗೆ ತಿಳಿದ ಕೆಲವು ವಿಷಯಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ.

 

ವೇದ ಮಂತ್ರ : 

 

ಕೃಷ್ಣ ಯಜುರ್ವೇದ ತೈತ್ತಿರೀಯ ಸಂಹಿತೆಯ ವೈಶ್ವದೇವ ಕಾಂಡದಲ್ಲಿ ಉಕ್ತವಾಗಿರುವ ಶ್ರೀ ರುದ್ರ ಪ್ರಶ್ನದ  ಚಮಕದ ಮೂರನೆಯ ಅನುವಾಕ

 

ಓಂ ನಮೋ ಭಗವತೇ ರುದ್ರಾಯ

 

ಶಂ ಚ ಮೇ ಮಯಶ್ಚ ಮೇ ಪ್ರಿಯಂ ಚ ಮೇನುಕಾಮಶ್ಚ ಮೇ ಕಾಮಶ್ಚ ಮೇ ಸೌಮನಸಶ್ಚ ಮೇ ಭದ್ರಂ ಚ ಮೇ ಶ್ರೇಯಶ್ಚ ಮೇ ವಸ್ಯಶ್ಚ ಮೇ ಯಶಶ್ಚ ಮೇ ಭಗಶ್ಚ ಮೇ ದ್ರವಿಣಂ ಚ ಮೇ ಯಂತಾ ಚ ಮೇ ಧರ್ತಾ ಚ ಮೇ ಕ್ಷೇಮಶ್ಚ ಮೇ ಧೃತಿಶ್ಚ ಮೇ ವಿಶ್ವಂಚ ಮೇ ವಿಶ್ವಂ ಚ ಮೇ ಮಹಶ್ಚ ಮೇ ಸಂವಿಚ್ಚ ಮೇ ಜ್ಞಾತ್ರಂ ಚ ಮೇ ಸೂಶ್ಚ ಮೇ ಪ್ರಸೂಶ್ಚ ಮೇ ಸೀರಂ ಚ ಮೇ ಲಯಶ್ಚ ಮ ಋತಂ ಚ ಮೇಮೃತಂ ಚ ಮೇಯಕ್ಷ್ಮಂಚ ಮೇನಾಮಯಚ್ಚ ಮೇ ಜೀವಾತುಶ್ಚ ಮೇ ದೀರ್ಘಾಯುತ್ವಂ ಚ ಮೇನಮಿತ್ರಂ ಚ ಮೇಭಯಂಅ ಚ ಮೇ ಸುಗಂ ಚ ಮೇ ಶಯನಂ ಚ ಮೇ ಸೂಷಾ ಚ ಮೇ ಸುದಿನಂ ಚ ಮೇ||

 

ನಮಕದ ಮೊದಲನೆಯ ಅನುವಾಕದ ಒಂದು ಸಣ್ಣ ಭಾಗ

 

ಓಂ ನಮಸ್ತೇ ರುದ್ರ ಮನ್ಯವ ಉತೋತ ಇಷವೇ ನಮ:|  ನಮಸ್ತೇ ಅಸ್ತು ಧನ್ವನೇ ಬಾಹುಭ್ಯಾ ಮುತ ತೇ ನಮ:|  ಯಾ ತ ಇಷು: ಶಿವತಮಾ ಶಿವಂ ಬಭೂವ ತೇ ಧನು:|  ಶಿವಾ ಶರ್ವ್ಯಾ ಯಾ ತವ ತಯಾ ನೋ ರುದ್ರ ಮೃಡಯ|  ಯಾ ತೇ ರುದ್ರ ಶಿವಾ ತನೂರಘೋರಾ: ಪಾಪಕಶಿನೀ|  ತಯಾ ನಸ್ತನುವಾ ಶಂತಮಯಾ ಗಿರಿಶಂತಾಭಿಚಾಕಶೀಹಿ||

 

ಶಿವರಾತ್ರಿಯ ಅರ್ಥ

 

ಶಿವ ಅಂದ್ರೆ ಕಲ್ಯಾಣ ಎಂದು ಅರ್ಥ.  ಲೋಕ ಕಲ್ಯಾಣಕ್ಕಾಗಿ ಮತ್ತು ಕುಟುಂಬದ ಕಲ್ಯಾಣಕ್ಕಾಗಿ ರಾತ್ರಿ ಇಡೀ ಆ ಪರಶಿವನ ಧ್ಯಾನ ಮಾಡುವುದು.  ಇದು ಮಾಘ ಮಾಸದ ಬಹುಳ ಚತುರ್ದಶಿಯಂದು ಬರುವುದು.    ಇದರ ಬಗ್ಗೆ ಒಂದು ಸಣ್ಣ ಕಥೆ ಇದೆ.  ಶಿವಪುರಾಣದಲ್ಲಿ ಹೇಳಿರುವಂತೆ, ಒಮ್ಮೆ ಬ್ರಹ್ಮ ಮತ್ತು ವಿಷ್ಣು ಅವರುಗಳಲ್ಲಿ ಯಾರು ಶ್ರೇಷ್ಠರು ಎಂಬ ಬಗ್ಗೆ ಜಗಳವಾಯಿತು.  ಇವರಿಬ್ಬರ ಜಗಳದಿಂದ ಬೇಸತ್ತ ಇತರ ದೇವರುಗಳು, ಮಧ್ಯಸ್ಥಿಕೆ ವಹಿಸಲು ಶಿವನನ್ನು ಕೇಳಿಕೊಂಡರು.  ಆಗ ಶಿವನು ಉದ್ದನೆಯ ಬೆಂಕಿಯ ಕಂಬದಂತೆ ಇವರಿಬ್ಬರ ಮಧ್ಯೆ ನಿಂತನು.  ಬೆಂಕಿಯ ತೀಕ್ಷಣತೆಯನ್ನು ಕಂಡು ಇವರಿಬ್ಬರೂ ಇದರ ಮೂಲವನ್ನು ಹುಡುಕಲು ಹೊರಟರು.  ಬ್ರಹ್ಮನು ಹಂಸದ ರೂಪವಾಗಿ ಆಕಾಶಕ್ಕೂ, ವಿಷ್ಣುವು ವರಾಹ ರೂಪದಲ್ಲಿ ಭೂಮಿಯೊಳಗೂ ಹೊರಟರು.  ಸಾವಿರಾರು ಮೈಲುಗಳನ್ನು ಕ್ರಮಿಸಿದರೂ ಇದರ ಮೂಲ ತಿಳಿಯದಾಯಿತು.  ಇವರಿಬ್ಬರ ಪರದಾಟವನ್ನು ಕಂಡು ಶಿವನು ಮುಗುಳ್ನಕ್ಕನು.  ಆತನ ನಗುವಿನಿಂದ ಅಲ್ಲಿಯೇ ಇದ್ದ ಕೇತಕಿ ಪುಷ್ಪವು ಕೆಳಗಿಳಿದು ಬೀಳಹತ್ತಿತು.  ಅಲ್ಲಿಯೇ ಬರುತ್ತಿದ್ದ  ಬ್ರಹ್ಮನಿಗೆ ಇದು ಗೋಚರವಾಯಿತು.  ಆತನು ಆ ಪುಷ್ಪವನ್ನು ಎಲ್ಲಿಂದ ಬಂದೆಯೆಂದು ಕೇಳಲು, ಅದು ಈ ಬೆಂಕಿಯ ಕಂಬದ ಮೇಲ್ಭಾಗದಿಂದ ಕೆಳಗಿಳಿದು ಬರುತ್ತಿದ್ದೇನೆಂದು ತಿಳಿಸಿತು.  ಅಲ್ಲಿಯವರೆವಿಗೆ ಬೆಂಕಿಯ ಮೂಲವನ್ನು ತಿಳಿಯದ ಬ್ರಹ್ಮನು ಪುಷ್ಪವನ್ನೇ ಸಾಕ್ಷಿಯನ್ನಾಗಿ ತೆಗೆದುಕೊಂಡನು.  ಆಗ ಕುಪಿತಗೊಂಡ ಶಿವನು ತನ್ನ ಮೂಲ ಸ್ವರೂಪವನ್ನು ತೋರಿದನು.  ಮತ್ತು ಬ್ರಹ್ಮನನ್ನು ಯಾರೂ ಪೂಜಿಸಬಾರದೆಂದೂ, ಕಪಟತನ ತೋರಿದ ಕೇತಕಿ ಪುಷ್ಪವನ್ನು ಯಾರೂ ಪೂಜೆಗೆ ಬಳಸಬಾರದೆಂದೂ ಶಾಪವನ್ನಿತ್ತನು.  ಅಂದು ಅಂದರೆ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ೧೪ನೆಯ ದಿನ, ಶಿವನು ಲಿಂಗರೂಪವನ್ನು ಧರಿಸಿದನು.  ಅವನನ್ನು ತೃಪ್ತಿಗೊಳಿಸಿ, ಸಂಪತ್ತು, ಸುಖ ಮತ್ತು ಸಮೃದ್ಧಿಯನ್ನು ಹೊಂದಲು ಪೂಜಿಸುವರು.  

                  sivasfamily.jpg

ವೈಜ್ಞಾನಿಕವಾಗಿ ಶಿವರಾತ್ರಿಯ ಆಚರಣೆ

 

ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ಈ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ.  ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಬಹು ಮುಖ್ಯ.  ಈ ಸಮಯದಲ್ಲಿ ಛಳಿಗಾಲವು ಮುಗಿದು ಬೇಸಗೆಕಾಲವು ಪ್ರಾರಂಭಗೊಳ್ಳುವುದು.  ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು  ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು.  ಈ ವ್ಯತ್ಯಯದ ಸಮಯದಲ್ಲಿ ನಮ್ಮ ದೇಹದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ (ನೆಗಡಿ, ಕೆಮ್ಮು, ಶೀತ ಮತ್ತಿತರೆ) ಬರುವುದು.  ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ.  ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ.  ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ.  ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು.  ಬಿಲ್ವವನ್ನು ಮೂಸಿ ಎಸೆಯುವುದು ಸರಿಯಾದ ವಿಧಾನ.  ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ.   ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.  

 

ಪೂಜಿಸುವ ದೇಗುಲವನ್ನು ವಾಸ್ತುವಿನ ಪ್ರಕಾರ ಕಟ್ಟಿರುತ್ತಾರೆ.  ಈ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆಯುವರು.  ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತ ಮುತ್ತಲಿಗೆಲ್ಲಾ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ.  ಈ ಹಿಂದೆ ನಾನು ಬರೆದ ಪೂಜಾವಿಧಾನದಂತೆ ಷೋಡಶಾಂಗ ಪೂಜೆ ಮಾಡುವುದು ವಾಡಿಕೆ. 

 

ವೇದೋಕ್ತ ಪೂಜೆ ಮತ್ತು ಆಚರಣೆ

 

ಬಿಲ್ವದ ಎಲೆ ಹೃದಯವನ್ನು ಹೋಲುತ್ತದೆ ಮತ್ತು ಲಿಂಗ ಪರಮಾತ್ಮನ ಪ್ರತೀಕ.  ಆದ್ದರಿಂದ ಇವೆರಡರ ಜೊತೆಗೂಡಿಕೆ ಆತ್ಮ ಪರಮಾತ್ಮಗಳ ಮಿಲನ.    ರಾತ್ರಿಯು ಅಜ್ಞಾನದ ಸಂಕೇತ ಮತ್ತು ಆ ವೇಳೆಯಲ್ಲಿ ನಿದ್ರೆ ಮಾಡದೇ ಎಚ್ಚರವಾಗಿರುವುದು ತಿಳುವಳಿಕೆಯ ಕಡೆಗೆ ಹೋಗುತ್ತಿರುವ ಸಂಕೇತ.  ಹೀಗೆ ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದು ಮೋಕ್ಷದ ಕಡೆಗೆ ಹೊಗುವುದು ಎಂದು ತತ್ವಗಳು ತಿಳಿಸುತ್ತವೆ. 

 

ಉಪವಾಸ ಮಾಡುವುದು ಎಂದರೆ, ದೇವರಿಗೆ ಹತ್ತಿರವಾಗಿರುವುದು/ದೇವರ ಬಗ್ಗೆ ಚಿಂತಿಸುತ್ತಿರುವುದು ಎಂದು ಅರ್ಥ. ಹೀಗೆ ಆತನ ಧ್ಯಾನದಲ್ಲಿ ಇರುವಾಗ ಊಟ/ತಿಂಡಿಯ ಕಡೆ ಗಮನ ಹೋಗುವುದಿಲ್ಲ.

 

ಜಾಗರಣೆ ಎಂದರೆ, ಜಾಗೃತರಾಗಿರೋದು ಎಂದು. ರಾತ್ರಿಯಲ್ಲಿ ಜಾಗರಣೆ ಮಾಡುವುದರ ಅರ್ಥವೇನು? ರಾತ್ರಿ ಎನ್ನುವುದು ತಮೋ ಗುಣದ ಪ್ರತೀಕ. ಆಲಸ್ಯ, ನಿದ್ರೆ, ಅಹಂಕಾರ, ಅಜ್ಞಾನಗಳ ದ್ಯೋತಕ ನಿಶೆ. ಆ ಸಮಯದಲ್ಲಿ ಜಾಗೃತರಾಗಿರಬೆಕು ಎಂದರೆ, ಅವುಗಳಿಂದ ಜಾಗೃತರಾಗಿರಬೇಕು ಎಂಬರ್ಥ. ಹಾಗೆ ಜಾಗೃತರಾಗಿರುವುದಕ್ಕೆ ನಮಗೆ ಸಹಾಯವನ್ನು ಮಾಡುವವನು ದೇವರು. ಆ ದೇವರನ್ನು ಸ್ಮರಿಸುತ್ತ ಈ ತಮೋ ಗುಣಗಳಿಂದ ಜಾಗೃತರಾಗಿರಬೇಕು ಎನ್ನುವುದರ ಪ್ರತೀಕ ಶಿವರಾತ್ರಿಯ ಜಾಗರಣೆ.

 

ಆ ದಿನ ಬೆಳಗ್ಗೆ ಬೇಗ ಎದ್ದು ಅಭ್ಯಂಜನ ಮಾಡಿ ಶಿವನಿಗೆ ಅಭಿಷೇಕ ಮಾಡುವುದು ರೂಢಿ.  ಇಲ್ಲಿ ದಿನವನ್ನು ಮೂರು ಭಾಗಗಳನ್ನಾಗಿ ಮಾಡಿ ರುದ್ರಾಭಿಷೇಕಯುಕ್ತ ಪೂಜೆಯನ್ನು ಮಾಡುವುದು ವಾಡಿಕೆ.  ರುದ್ರ ನಮಕ ಚಮಕಗಳನ್ನು ಉಚ್ಚರಿಸುವುದರಿಂದ ಉಸಿರಾಟಕ್ಕೂ ಹೆಚ್ಚಿನ ಶಕ್ತಿ ಬರುವುದು ಮತ್ತು ಬಾಯಿಯಿಂದ ಹೊರ ಹೊಮ್ಮುವ ತರಂಗಗಳಿಂದ ಸುತ್ತ ಮುತ್ತಲಿನ ಪರಿಸರ ಶಕ್ತಿಯುತವಾಗುವುದು. 

 

ಮೊದಲಿಗೆ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕವನ್ನೂ ಮಾಡುವರು.  ಇದಕ್ಕೆಂದೇ ಮಹಾನ್ಯಾಸವೆಂಬ ಪ್ರಕಾರವಿದೆ.  ನಂತರ ನೀರಿನ ಅಭಿಷೇಕವನ್ನು ನಿರಂತರವಾಗಿ ಮಾಡುವರು.  ಅಭಿಷೇಕ್ಕಾಗಿಯೇ ಪ್ರತ್ಯೇಕವಾದ  ಪಾತ್ರೆ ಇರುವುದು.  ಅದರ ತಳಭಾಗದಲ್ಲಿ ರಂದ್ರವಿದ್ದು ಅದನ್ನು ಲಿಂಗದ ಮೇಲೆ ತೂಗು ಬಿಟ್ಟಿರುವರು.  ಅದರೊಳಗೆ ನೀರು ತುಂಬಿಸಿದರೆ, ಸಣ್ಣದಾಗಿ ನೀರು ಲಿಂಗದ ಮೇಲೆ ಬೀಳುವುದು.  ಕೃಷ್ಣ ಯಜುರ್ವೇದದ ಪ್ರಕಾರವಾದ ರುದ್ರ ನಮಕ ಮತ್ತು ಚಮಕಗಳನ್ನು ಅಭಿಷೇಕದ ಸಂದರ್ಭದಲ್ಲಿ ಪಠಿಸುತ್ತಾರೆ.  ಹನ್ನೊಂದು ಬಾರಿ ನಮಕ ಚಮಕಗಳನ್ನು ಹನ್ನೊಂದು ಜನ ಋತ್ವಿಕರು ಪಠಣ ಮಾಡುವುದಕ್ಕೆ ಏಕಾದಶವಾರ ರುದ್ರಾಭಿಷೇಕ ಎಂದು ಕರೆಯುವರು.  ಮೊದಲಿಗೆ ಚಮಕದ ಮೂರನೆಯ ಭಾಗವನ್ನು ಉಚ್ಚರಿಸಿ, ನಂತರ ಒಂದು ನಮಕದ ಭಾಗವನ್ನೂ ನಂತರ ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು.  ತದನಂತರ ಎರಡನೆಯ ನಮಕದ ಭಾಗವನ್ನೂ ಮತ್ತು ಹನ್ನೊಂದು ಚಮಕ ಭಾಗಗಳನ್ನೂ ಪಠಿಸುವರು.  ಹೀಗೆ ನಮಕಗಳ ಹನ್ನೊಂದೂ ಭಾಗವನ್ನು ಪಠಿಸಿ ಅಭಿಷೇಕ ಮಾಡುವರು.  ಇದಕ್ಕೆ ಒಂದು ರುದ್ರವೆಂದು ಕರೆಯುವರು.      ಬೆಳಗ್ಗೆ, ಸಂಜೆ ಮತ್ತು ರಾತ್ರೆ  ಹೀಗೆ ೨೪ ಘಂಟೆಗಳು ಭಗವನ್ನಾಮಸ್ಮರಣೆ ಮಾಡುತ್ತಾ ಜಾಗರಣೆ ಮಾಡುವುದು ಪರಿಪಾಠ.  ಅಂದು ಊಟ ಮಾಡದೆ ಅಲ್ಪಾಹಾರ ಸೇವನೆ ಮಾಡುವರು.

 

೧೨ ಜ್ಯೋತಿರ್ಲಿಂಗಗಳು 

                            jyotirlinga.jpg

ನಮ್ಮ ದೇಶದಲ್ಲಿ ಒಟ್ಟು ೧೨ ಜ್ಯೋತಿರ್ಲಿಂಗಗಳನ್ನು ಪ್ರತಿಷ್ಠಾಪಿಸಲಾಗಿದೆ.  ಆ ಕ್ಷೇತ್ರಗಳು ಪುಣ್ಯ ಕ್ಷೇತ್ರಗಳೆಂದು ಪ್ರಸಿದ್ಧವಾಗಿ ಶಿವರಾತ್ರಿಯಂದು ವಿಶೇಷ ಪೂಜೆಯನ್ನು ಅಲ್ಲಿ ನಡೆಸುವರು.  ಆ ಸ್ಥಳಗಳು  ಯಾವುವೆಂದರೆ:

                      jyotirlinga-map.jpg

ಗುಜರಾತಿನ ಕಾಠಿಯಾವಾಡದಲ್ಲಿರುವ ಸೋಮನಾಥ

ಆಂಧ್ರಪ್ರದೇಶದ ಶ್ರಿ ಶೈಲದಲ್ಲಿರುವ ಮಲ್ಲಿಕಾರ್ಜುನ

ಮಧ್ಯಪ್ರದೇಶದ ಉಜ್ಜೈನಿಯಲ್ಲಿರುವ ಮಹಾಕಾಳೇಶ್ವರ

ಮಹಾರಾಷ್ಟ್ರದ ಪಾರ್ಲಿ ವೈಜನಾಥ

ಮಹಾರಾಷ್ಟ್ರದ ಭೀಮಾಶಂಕರ

ಮಹಾರಾಷ್ಟ್ರದ ನಾಗನಾಥ

ಮಹಾರಾಷ್ಟ್ರದ ನಾಶಿಕದ ತ್ರ್ಯಂಬಕೇಶ್ವರ

ತಮಿಳುನಾಡಿನ ರಾಮೇಶ್ವರ

ಉತ್ತರಪ್ರದೇಶದ ಘೃಶ್ನೇಶ್ವರ

ಉತ್ತರಪ್ರದೇಶದ ಕಾಶಿ ವಿಶ್ವೇಶ್ವರ

ಉತ್ತರಪ್ರದೇಶದ ಓಂಕಾರನಾಥ

ಉತ್ತರಪ್ರದೇಶದ ಕೇದಾರನಾಥ

 

ಇದೆಲ್ಲವೂ ಲೌಕಿಕವಾಗಿ ಕಣ್ಣಿಗೆ ಕಾಣುವಂತೆ ಮಾಡುವ ಪೂಜೆಗಳಾದರೆ, ಅಧ್ಯಾತ್ಮಿಕವಾಗಿ ಈ ದೇಹವೇ ಒಂದು ದೇವಾಲಯ ಎಂದು ತಿಳಿದು ಆ ಪರ ಶಿವನನ್ನು ನಮ್ಮೊಳಗೇ ಕಾಣುವ ಪ್ರಯತ್ನ ಮಾಡೋಣ.  ನಮ್ಮ ಹೃದಯವನ್ನೇ ಆತ್ಮಲಿಂಗವನ್ನಾಗಿ ಮಾಡಿ, ಲೋಕೋದ್ಧಾರಕ್ಕಾಗಿ ಒಳ್ಳೆಯ ಚಿಂತನೆಗೆಳೆಂಬ ನೀರ ಹನಿಗಳಿಂದ ಅಭಿಷೇಕ ಮಾಡೋಣ.    ಎಲ್ಲರಿಗೂ ಈ ಲೋಕಕ್ಕೂ ಕಲ್ಯಾಣವಾಗಲೆಂದು ಬಯಸೋಣ.

                        shiva.jpg
 

ಓಂ ನಮ: ಶಿವಾಯ

ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ರಥ ಸಪ್ತಮಿ

ನಮಸ್ತೆ

ಶುಭೋದಯ – ಇಂದು ರಥ ಸಪ್ತಮಿ, ಮಾರ್ಗಶೀರ್ಷ ಶುಕ್ಲ ಪಕ್ಷದ ಏಳನೆಯ ದಿನ, ರಥ ಸಪ್ತಮಿ.

surya.jpg

ಈ ವ್ರತಾಚರಣೆಯ ಬಗ್ಗೆ ಒಂದೆರಡು ಮಾತುಗಳನ್ನು ಕಳೆದವರ್ಷ ತಿಳಿಸಿದ್ದೆ. ಅದು ಇಲ್ಲಿದೆ

ಮತ್ತೆ ಇಲ್ಲಿ ಕೆಳಗೆ ಅದರ ಒಕ್ಕಣಿಕೆಯನ್ನು ನೀಡುತ್ತಿರುವೆ.

ಓಂ ಭದ್ರಂ ಕರ್ಣೇಭಿಶೃಣುಯಾಮ ದೇವಾ:|

ಭದ್ರಂ ಪಶ್ಯೇಮಾಕ್ಷಭಿರ್ಯಜತ್ರಾ:|

ಸ್ಥಿರೈರಂಗೈಸ್ತುಷ್ಟುವಾಗ್ಂ‍ಸಸ್ತನೂಭಿ:|

ವ್ಯಶೇಮ ದೇವಹಿತಂ ಯದಾಯು:|

ಸ್ವಸ್ತಿ ನ ಇಂದ್ರೋ ವೃದ್ಧಶ್ರವಾ:|

ಸ್ವಸ್ತಿ ನ: ಪೂಷಾ ವಿಶ್ವವೇದಾ:|

ಸ್ವಸ್ತಿನಸ್ತಾರ್ಕ್ಷ್ಯೋ ಅರಿಷ್ಟನೇಮಿ:|

ಸ್ವಸ್ತಿನೋ ಬೃಹಸ್ಪತಿರ್ದಧಾತು|

ಓಂ ಶಾಂತಿ: ಶಾಂತಿ: ಶಾಂತಿ:||

ಇಂದು ರಥ ಸಪ್ತಮಿ. ಮಾರ್ಗಶೀರ್ಷ ಮಾಸ ಶುಕ್ಲಪಕ್ಷದ ಏಳನೆಯದಿನ. ಜಗತ್ತಿನ ಮುಂದುವರಿಕೆಗೆ ಚಾಲಕನಾದ ಶ್ರೀ ಸೂರ್ಯ ಭಗವಾನನು ಸಿಂಹ ರಾಶಿಯಿಂದ ಮಕರ ರಾಶಿಗೆ ತನ್ನ ರಥವನ್ನೇರಿ ಹೋಗುತ್ತಾನೆ. ಅಂದರೆ ಇಂದಿಗೆ ಛಳಿಗಾಲವು ಮುಗಿದು ಬೇಸಗೆಯ ಕಾಲವು ಪ್ರಾರಂಭವಾಗುವುದು. ಸೂರ್ಯನು ತನ್ನ ಏಳು ಕುದುರೆಗಳ ರಥವನ್ನೇರುವನು. ಅವನ ರಥದ ಸಾರಥಿ ಅರುಣ. ಇಂದು ವೇದ ಮಂತ್ರಗಳ ಭಾಗವಾದ ಕೃಷ್ಣ ಯಜುರ್ವೇದ ತೈತ್ತಿರೀಯಾರಣ್ಯಕದಲ್ಲಿ ಪ್ರಸ್ತಾಪಿಸಿರುವ ಅರುಣಪ್ರಶ್ನ ರೀತ್ಯಾ ಸೂರ್ಯ ನಮಸ್ಕಾರಗಳನ್ನು ಮಾಡುವುದು ಪದ್ಧತಿ.

surya1.jpg

ಸೂರ್ಯನ ರಥಕ್ಕೆ ಏಳು ಕುದುರೆಗಳು. ಅವುಗಳ ಹೆಸರುಗಳು ಗಾಯತ್ರಿ, ಬೃಹತೀ, ಉಷ್ಣಿಕ್, ಜಗತೀ, ತ್ರಿಷ್ಟುಪ್, ಅನುಷ್ಟುಪ್ ಮತ್ತು ಪಂಕ್ತಿ.

ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದ ಇತ್ಯಾದಿಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರೂಢಿಯಲ್ಲಿದೆ. ಸೂರ್ಯನ ೧೦೮ ಹೆಸರುಗಳನ್ನು ಉಚ್ಚರಿಸಿ ನಮಸ್ಕಾರಗಳನ್ನು ಮಾಡುವರು. ಮನೆಯ ಒಂದು ಕೋಣೆಯಲ್ಲಿ ಪೂರ್ಣವಾಗಿ ಒಂದು ಸುತ್ತು ಪ್ರದಕ್ಷಿಣೆ ಹಾಕುತ್ತಾ ಅರುಣ ಪ್ರಶ್ನದ ಮಂತ್ರ ಪಠಿಸಿ ನಮಸ್ಕಾರ ಮಾಡುವರು. ಹೀಗೆ ೧೦೮ ನಮಸ್ಕಾರಗಳನ್ನು ಮಾಡುವರು. ೧೦೮ ಆಗದಿದ್ದವರು ೧೨ ನಾಮಗಳನ್ನು ಜಪಿಸಿ ನಮಸ್ಕಾರ ಮಾಡುವರು. ಅವಾವುದೆಂದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ. ಈ ಹನ್ನೆರಡು ಹೆಸರುಗಳು ಹನ್ನೆರಡು ತಿಂಗಳುಗಳ ಸೂಚಕ. ಇದೇ ತರಹ ಸೂರ್ಯನಿಗೆ ಇನ್ನೂ ಹನ್ನೆರಡು ಹೆಸರುಗಳಿವೆ. ಅವುಗಳು ಯಾವುವೆಂದರೆ, ಆದಿತ್ಯ, ಸವಿತಾ, ಸೂರ್ಯ, ಮಿಹಿರ, ಅರ್ಕ, ಪ್ರಭಾಕರ, ಮಾರ್ತಾಂಡ, ಭಾಸ್ಕರ, ಭಾನು, ಚಿತ್ರಭಾನು, ದಿವಾಕರ ಮತ್ತು ರವಿ. ೧೨ ಜನ ಋತ್ವಿಕರನ್ನು ಮನೆಗೆ ಕರೆಯಿಸಿ ನಮಸ್ಕಾರ ಮಾಡಿಸುವುದೂ ರೂಢಿಯಲ್ಲಿದೆ. ಆ ಹನ್ನೆರಡು ಜನ ಋತ್ವಿಕರ ಅರುಣ ಪ್ರಶ್ನ್ಯ ರೀತ್ಯಾ ಒಂದು ನಮಸ್ಕಾರವನ್ನು ೧೨ ಎಂದು ಲೆಕ್ಕಕ್ಕೆ ತೆಗೆದುಕೊಳ್ಳುವರು. ಆ ಸಂದರ್ಭದಲ್ಲಿ ಸೂರ್ಯನಿಗೆ ಪ್ರಿಯವಾದ ರವೆಯ ಪಾಯಸವನ್ನು ನೈವೇದ್ಯಕ್ಕಿರಿಸಿ, ಅದನ್ನು ಪ್ರಸಾದವಾಗಿ ಋತ್ವಿಕರಿಗೆ ಕೊಡುವರು ಮತ್ತು ಇತರರೂ ಸೇವಿಸುವರು.

konark.jpg

ಒರಿಸ್ಸಾ ರಾಜ್ಯದಲ್ಲಿನ ಕೊನಾರ್ಕದ ಸೂರ್ಯನ ದೇವಸ್ಥಾನ, ಗಯಾದ ದಕ್ಷಿಣಾರ್ಕ ದೇವಸ್ಥಾನ, ರಾಜಸ್ಥಾನದ ರಾನಕ್ಪುರ, ಗುಜರಾತ್ ರಾಜ್ಯದ ಮೊಧೆರಾ, ಮಧ್ಯಪ್ರದೇಶದ ಉನಾವು (ಚರ್ಮ ರೋಗಗಳ ನಿವಾರಣೆಗಾಗಿ ಜನರು ಇಲ್ಲಿಗೆ ಹೋಗುವರು), ಅಸ್ಸಾಮಿನ ಗೋಲ್ಪರ, ಆಂಧ್ರಪ್ರದೇಶದ ಅರಸವಲ್ಲಿ, ತಮಿಳುನಾಡಿನ ಕುಂಭಕೋಣಂನ ಸೂರ್ಯನ ದೇವಸ್ಥಾನ ಇವುಗಳು ಭಾರತದಲ್ಲಿರುವ ಪ್ರಮುಖ ದೇವಸ್ಥಾನಗಳು.

ಪುರಾಣಗಳ ಪ್ರಕಾರ ಸೂರ್ಯನಿಗೆ ಇಬ್ಬರು ಪತ್ನಿಯರು – ಸಂಜನಾ ಮತ್ತು ಛಾಯಾ. ಅವನ ಮಕ್ಕಳಲ್ಲಿ ಪ್ರಮುಖರೆಂದರೆ, ಮನು, ಯಮ, ಯಮುನಾ, ಕರ್ಣ, ಸುಗ್ರೀವ ಇತ್ಯಾದಿ. ಶ್ರೀ ರಾಮನು ಸೂರ್ಯನ ವಂಶಸ್ತನು.

ವಿಭಾಗಗಳು
ಆಚಾರ-ವಿಚಾರ - Rituals ಲೇಖನಗಳು

ಎಳ್ಳು ಬೆಲ್ಲವ ತಿಂದು ಒಳ್ಳೆಯ ಮಾತನಾಡು

ಈ ಲೇಖನವು ಇಲ್ಲಿ ಪ್ರಕಟವಾಗಿದೆ

(ವಿ.ಸೂ : ಚಿತ್ರಗಳನ್ನು ಒದಗಿಸಿದ ಕುಮಾರಿ ಯಾಮಿನಿ ಅವರಿಗೆ ಆಭಾರಿಯಾಗಿರುವೆ)

ಎಳ್ಳು ಬೆಲ್ಲವ ತಿಂದು ಒಳ್ಳೆಯ ಮಾತಾಡು ಎಂಬುದೊಂದು ನಾಣ್ನುಡಿ.

images.jpg

ಉತ್ತರಾಯಣದಲ್ಲಿ ಪ್ರಾರಂಭವಾಗುವ ಈ ಹಬ್ಬದ ಸಮಯದಲ್ಲಿ ಶುಭಕಾರ್ಯಗಳನ್ನು ಮಾಡುವುದು ಶ್ರೇಯಸ್ಕರ. ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವುದನ್ನು ಸಂಕ್ರಾಂತಿಯೆಂದು ಕರೆವರು. ಹೀಗೆ ವರುಷದಲ್ಲಿ ಹನ್ನೆರಡು ಸಂಕ್ರಾಂತಿಗಳು ಬಂದರೂ ಮಕರ ಸಂಕ್ರಾಂತಿಯು ಅತ್ಯಂತ ಪವಿತ್ರವಾದದ್ದು. ಈ ಸಮಯದಲ್ಲಿ ಸೂರ್ಯನು ದಕ್ಷಿಣ ದಿಕ್ಕಿನಿಂದ ಉತ್ತರದಿಕ್ಕಿಗೆ ಪ್ರಯಾಣ ಮಾಡುವುದರಿಂದ ಉತ್ತರಾಯಣ ಪುಣ್ಯಕಾಲವೆಂದು ಕರೆವರು. ಅಯನ ಎಂದರೆ ಮಾರ್ಗ. ಉತ್ತರಾಯಣ ಎಂದರೆ ಉತ್ತರದ ಮಾರ್ಗ. ಈ ಸಮಯದಲ್ಲಿ ಸೂರ್ಯನು ಉತ್ತರ ದಿಕ್ಕಿಗೆ ಪ್ರಯಾಣ ಮಾಡುವನು. ಹಾಗಾಗಿ ಈ ಕಾಲ ವಿಶೇಷವನ್ನು ಉತ್ತರಾಯಣವೆಂದು ಕರೆವರು. ಉತ್ತರ ಎಂಬ ಪದಕ್ಕೆ ಶ್ರೇಷ್ಠ ಎಂಬ ಅರ್ಥವೂ ಇದೆ. ಈ ರೀತಿಯಾಗಿ ಇದನ್ನು ಶ್ರೇಷ್ಠವಾದ ಮಾರ್ಗವೆಂದೂ ಅರ್ಥೈಸಬಹುದು. ಮಾಗಿಯ ಛಳಿ ಕಳೆಯುವ ಸಮಯಕ್ಕೆ ಸರಿಯಾಗಿ ಬೆಳೆ ಕೈಗೆ ಬರುವ ಸಮಯ ಬರುವುದು. ಹಳ್ಳಿಗಳಲ್ಲಿ ಅದನ್ನೇ ಸುಗ್ಗಿ ಹಬ್ಬವೆಂದು ಆಚರಿಸುವರು. ಉತ್ತಮ ಬೆಳೆಯಿಂದಾಗಿ ಜನಜೀವನ ಉತ್ತಮ ಮಟ್ಟಕ್ಕೇರುವುದು. ಹೀಗಾಗಿ ಅದನ್ನು ಸಂಕ್ರಾಂತಿ ಎಂದು ಕರೆಯುವರು. ಈ ಹಬ್ಬವನ್ನು ಮಕರ ಸಂಕ್ರಾಂತಿ, ಮಕರ ಸಂಕ್ರಮಣ, ಉತ್ತರಾಯಣ ಪುಣ್ಯಕಾಲವೆಂದೂ ಗುರುತಿಸುವರು. ಈ ದಿನದಂದು ಖಿಚಡಿಯನ್ನು ಮಾಡುವುದರಿಂದ ಖಿಚಡಿ ಸಂಕ್ರಾಂತಿಯೆಂದೂ ಕರೆಯುವರು. ಖಿಚಡಿ ಎಂಬುದು ತುಪ್ಪ, ಹೆಸರು ಬೇಳೆ, ಅಕ್ಕಿ, ಮೆಣಸು ಮತ್ತಿತರೇ ಸಂಬಾರ ಪದಾರ್ಥಗಳನ್ನು ಉಪಯೋಗಿಸಿ ಮಾಡುವ ಹುಗ್ಗಿ. ತಮಿಳುನಾಡಿನಲ್ಲಿ ಮನೆಮನೆಗಳಲ್ಲಿ ಹಾಲನ್ನು ಉಕ್ಕಿಸುವುದರಿಂದ ಪೊಂಗಲ್ ಎಂದು ಕರೆವರು. ಹೊಸ ಬೆಳೆಯಾದ ಭತ್ತ, ಕಬ್ಬು, ಎಳ್ಳು ಇತ್ಯಾದಿಗಳನ್ನು ಹೊಲಗಳಿಂದ ಮನೆಗೆ ತರುಲಾಗುವುದರಿಂದ ಅವುಗಳನ್ನು ದಾನ ಮಾಡಿ, ನಂತರ ಸೇವಿಸುವರು. ಕರ್ನಾಟಕದಲ್ಲಿ ಎಳ್ಳು ಬೆಲ್ಲವನ್ನು ಸೇವಿಸಿದರೆ, ಮಹಾರಾಷ್ಟ್ರದಲ್ಲಿ ಎಳ್ಳಿನ ಉಂಡೆಯನ್ನು ದಾನ ಮಾಡಿ ಸೇವಿಸುವರು. ಅಲ್ಲಿ ಇದನ್ನು ತಿಲ್‌ಗೋಳ ಎಂದು ಕರೆವರು. ವಿಶೇಷವಾಗಿ ರಾಜಸ್ಥಾನ, ಗುಜರಾತ ಮತ್ತು ಮಹಾರಾಷ್ಟ್ರಗಳಲ್ಲಿ ಗಾಳಿಯ ಪಟವನ್ನು ಹಾರಿಬಿಡುವರು. ಈ ಸಮಯದಲ್ಲಿ ಗಂಗಾನದಿಯಲ್ಲಿ ಮಿಂದು ಸೂರ್ಯದೇವನನ್ನು ಪೂಜಿಸುವುದು ವಾಡಿಕೆಯಲ್ಲಿದೆ.

                             images3.jpg

ಈ ಹಬ್ಬವನ್ನು ಸಾಮಾನ್ಯವಾಗಿ ಆಂಗ್ಲ ಪಂಚಾಂಗದ ಜನವರಿ ತಿಂಗಳಿನ 14 ಅಥವಾ 15ನೆಯ ತಾರೀಖಿನಂದು ಆಚರಿಸುವರು. ಚಾಂದ್ರಮಾನ ಪಂಚಾಂಗ ರೀತ್ಯಾ ಒಂದು ವರ್ಷಕ್ಕೆ 354 ದಿನಗಳಾದರೆ, ಸೌರಮಾನ ಪಂಚಾಂಗದಂತೆ ಒಂದು ವರ್ಷಕ್ಕೆ 365 ¼ ದಿನಗಳಾಗಿರುವುವು. ಇದರಿಂದಾಗ 3ವರ್ಷಗಳಿಗೊಮ್ಮೆ ಅಧಿಕ ಮಾಸವನ್ನು ಚಾಂದ್ರಮಾನ ಪಂಚಾಂಗ ಕೊಡುವುದು.

                                                                         images2.jpg

ಈ ದಿನದಂದು ಶ್ರದ್ಧೆ, ಭಕ್ತಿಗಳಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ ಮತ್ತು ಶ್ರಾದ್ಧಗಳಿಗೆ ವಿಶೇಷ ಫಲವಿದೆಯೆಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅಂದು ಗಂಗಾದಿ ಪುಣ್ಯ ನದಿಗಳಲ್ಲಿ ಸ್ನಾನ ಮಾಡುವುದರಿಂದ, ಅದು ಬರಿಯ ಮಲಾಪಕರ್ಷಣ ಸ್ನಾನವಲ್ಲದೇ (ಶರೀರದ ಕೊಳೆಯನ್ನು ತೊಳೆಯುವುದು), ಮಾನಸಿಕ ದೋಷಗಳನ್ನು ತೊಳೆದಂತಾಗುವುದೆಂದು ಶಾಸ್ತ್ರಗಳಲ್ಲಿ ಹೇಳಲ್ಪಟ್ಟಿದೆ.

cagrn6zt.jpg

ಕರ್ನಾಟಕದಲ್ಲಿ ಬಿಳಿ ಎಳ್ಳು, ಕಡಲೆಕಾಯಿಬೀಜ, ಹುರಿಗಡಲೆ, ಕುಸರಿಕಾಳು, ಸಣ್ಣದಾಗಿ ಕತ್ತರಿಸಿದ ಕೊಬ್ಬರಿ, ಬೆಲ್ಲ ಮತ್ತು ಇತರೆ ವಸ್ತುಗಳನ್ನು ಮಿಶ್ರಣ ಮಾಡಿ ಎಳ್ಳು ಎಂದು ಕರೆವರು. ಅದರೊಂದಿಗೆ ಹಾಲು ಮತ್ತು ಸಕ್ಕರೆ ಪಾಕದಲ್ಲಿ ಅಚ್ಚಿನಲ್ಲಿ ವಿಧ ವಿಧವಾದ ಆಕಾರಗಳಲ್ಲಿ ಸಕ್ಕರೆ ಅಚ್ಚುಗಳನ್ನೂ ಮಾಡುವರು. ಇದರೊಂದಿಗೆ ಕತ್ತರಿಸಿದ ಕಬ್ಬು, ಬಾಳೆಹಣ್ಣು, ಎಲಚಿಹಣ್ಣು ಮತ್ತು ಯಥಾಶಕ್ತಿ ಉಡುಗೊರೆಯಾಗಿ ಬೆಳ್ಳಿ ಅಥವಾ ಸ್ಟೀಲಿನ ಹರಿವಾಣ ಅಥವಾ ಪಾತ್ರೆಗಳನ್ನು ಮನೆ ಮನೆಗಳಿಗೆ ಹೋಗಿ ಕೊಡುವರು. ಇದನ್ನು ಬೀರುವುದು ಎಂದು ಕರೆವರು. ಸಾಮಾನ್ಯವಾಗಿ ಮನೆಯ ಹೆಣ್ಣುಮಕ್ಕಳು ಎಳ್ಳು ಬೀರಿದರೆ, ಹೆಣ್ಣುಮಕ್ಕಳಿಲ್ಲದ ಮನೆಗಳಲ್ಲಿ ಗಂಡು ಮಕ್ಕಳನ್ನು ಎಳ್ಳು ಬೀರಲು ಕಳುಹಿಸುವುದೂ ವಾಡಿಕೆಯಲ್ಲಿದೆ. ಇದಲ್ಲದೇ ಮದುವೆಯಾಗಿ ಗಂಡನ ಮನೆಗೆ ಹೋದ ಹೆಣ್ಣುಮಕ್ಕಳು 5 ವರ್ಷಗಳವರೆವಿಗೆ ನೆಂಟರಿಷ್ಟರಿಗೆ ಎಳ್ಳನ್ನು ಬೀರುವರು. ಇದರಲ್ಲಿನ ವಿಶೇಷತೆ ಎಂದರೆ, ಮೊದಲ ವರ್ಷ ೫ ಬಾಳೆಯಹಣ್ಣುಗಳನ್ನು ದಾನ ಮಾಡಿದರೆ, ಎರಡನೆಯ ವರ್ಷ 10, ಮೂರನೆಯ ವರ್ಷ 15, ನಾಲ್ಕನೆಯ ವರ್ಷ 20 ಮತ್ತು ಐದನೆಯ ವರ್ಷ 25 ಬಾಳೆಯಹಣ್ಣುಗಳನ್ನು ದಾನ ಮಾಡುವರು (ಬೀರುವರು). ಅಂದಿನ ಸಂಜೆ ಚಿಕ್ಕ ಮಕ್ಕಳಿಗೆ ಆರತಿಯನ್ನು ಎತ್ತಿ ಎಲಚಿಹಣ್ಣುಗಳನ್ನು ತಲೆಯ ಸುರಿಯುವುದೂ ಪದ್ಧತಿಯಲ್ಲಿದೆ. ಹಳ್ಳಿಗಳಲ್ಲಿ ಎತ್ತು ಹಸು ಕರುಗಳಿಗೆ ಸ್ನಾನ ಮಾಡಿಸಿ, ಬಣ್ಣಗಳಿಂದ ಅಲಂಕರಿಸಿ, ಪೂಜಿಸಿ ತೆಂಗಿನಕಾಯಿ, ಬೆಲ್ಲ, ಹುಲ್ಲು ಮತ್ತು ಧಾನ್ಯಗಳನ್ನು ತಿನ್ನಿಸುವರು. ಸಂಜೆಯ ವೇಳೆಯಲ್ಲಿ ಉರಿಯುತ್ತಿರುವ ಬೆಂಕಿಯ ಮೇಲೆ ಹಾರಿಸುವರು. ಇದನ್ನು ಕಿಚ್ಚು ಹಾಯಿಸುವುದು ಎಂದು ಕರೆವರು. ಇದರಿಂದ ಅವುಗಳಲ್ಲಿ ತುಂಬಿ ಭಯ ಭೀತಿಗಳು ಪರಿಹಾರವಾಗುವುದು ಎಂಬ ಪ್ರತೀತಿ ಇದೆ. ತಮಿಳುನಾಡಿನಲ್ಲಿ ಇದಕ್ಕೆಂದೇ ಒಂದು ಪ್ರತ್ಯೇಕ ದಿನವನ್ನು ಆಚರಿಸುವರು. ಅದಕ್ಕೆ ಮಾಟ್ಟು ಪೊಂಗಲ್ ಎಂದು ಕರೆವರು. ಅಲ್ಲಿ ಮೂರುದಿನಗಳ ಹಬ್ಬವನ್ನಾಗಿ ಆಚರಿಸುವರು. ಭೋಗಿ, ಪೊಂಗಲ್ ಮತ್ತು ಕನೂ ಹಬ್ಬಗಳೆಂದು ಆಚರಿಸುವರು. ಸಂಕ್ರಾಂತಿಯ ನಂತರದ ದಿನದಂದು ಕನೂಹಬ್ಬವನ್ನು ಆಚರಿಸುವರು. ಸಂಕ್ರಾಂತಿ ಹಬ್ಬದಂದು ಮಾಡಿದ ಅಡುಗೆಯ ಉಳಿದ ಭಾಗವನ್ನು (ತಂಗಳು). ಕೆಂಪು, ಹಳದಿ ಮುಂತಾದ ಬೇರೆ ಬೇರೆ ಬಣ್ಣದ ಅನ್ನದ ಜೊತೆ, ಹಣ್ಣುಗಳು, ಕಬ್ಬಿನ ಚೂರು ಸೇರಿಸಿ, ಮನೆಯ ಹೊರಗೆ ಎಲೆಗಳ ಮೇಲೆ ಇರಿಸಿ ಭೂತಗಳಿಗೆ ಸಮರ್ಪಿಸುವರು. ಬೆಳಗಿನ ಕಾಲದಲ್ಲಿ ಇದನ್ನು ಸಮರ್ಪಿಸಿ ನಂತರ ಸ್ನಾನ ಮಾಡುವರು.

                                               images1.jpg

ಕೇರಳದ ಮಕರ ವಿಳಕ್ಕು ಬಗ್ಗೆ ತಿಳಿಯದವರು ಯಾರಿದ್ದಾರೆ? ಪ್ರತಿ ವರ್ಷವೂ ಟೆಲಿವಿಷನ್‍ಗಳಲ್ಲಿ ದೂರದ ಬೆಟ್ಟದಲ್ಲಿ ಸಂಜೆಯ ನಿಖರವಾದ ಸಮಯದಲ್ಲಿ ದೀಪ ಬೆಳಗುವುದನ್ನು ತೋರಿಸುವರು. ಇದನ್ನು ಎಲ್ಲರೂ ನೋಡಿರಬೇಕು ಅಲ್ಲವೇ? ಇಡೀ ದೇಶವಲ್ಲದೇ ವಿದೇಶಗಳಿಂದ ಕೂಡಾ ಲಕ್ಷಾಂತರ ಜನಗಳು ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಶಬರಿಮಲೈಗೆ ಹೋಗುವರು. ಹಾಗೆ ಹೋಗುವವರಲ್ಲಿ ಬಹಳಷ್ಟು ಜನರು ವ್ರತವನ್ನು ಪಾಲಿಸುವರು. ಈ ಸಮಯದಲ್ಲಿ ಅವರಲ್ಲಿ ಸಂಯಮತೆ, ಭ್ರಾತೃತ್ವ, ಮಾನವೀಯತೆ ಇತ್ಯಾದಿ ಗುಣಗಳನ್ನು ಕಂಡುಬರುವುದು ಸಂತೋಷದಾಯಕ ಸಂಗತಿ. ವ್ರತದ ಪ್ರಕಾರ ಪ್ರತಿ ದಿನ ಬೆಳಗ್ಗೆ ತಣ್ಣೀರಿನಲ್ಲಿ ಮಿಂದು ದೇವರ ಪೂಜೆಯನ್ನು ಮುಗಿಸಿ, ಅಲ್ಲಲ್ಲಿ ಆಯೋಜಿಸುವ ಭಜನೆಗಳಲ್ಲಿ ಪಾಲ್ಗೊಳ್ಳುವರು. ಅಲ್ಲಿ ನಡೆಯುವ ಮಂಡಲ ಪೂಜೆಯಲ್ಲಿ ಭಾಗವಹಿಸುವರು. ಕಪ್ಪು ಬಟ್ಟೆಯನ್ನು ಧರಿಸಿ, ಬರಿಗಾಲಿನಲ್ಲಿ ನಡೆಯುವ, ಸದಾ ದೇವರ ಧ್ಯಾನವನ್ನು ಮಾಡುತ್ತಿರುವ ಜನಗಳನ್ನು ಕಂಡಿರುವೆವು. ವ್ರತಾಚರಣೆಗೆ ಮೊದಲು ಗುರುವಿನಿಂದ ದೀಕ್ಷೆಯನ್ನು ಪಡೆಯಬೇಕು. ವ್ರತ ಪಾಲಿಸುವವರು ಹೆಂಗಸರು ಮಾಡಿದ ಅಡುಗೆಯನ್ನು ಊಟ ಮಾಡಬಾರದು. ಯಾವ ದುಶ್ಚಟಗಳಿಗೂ ಮೊರೆ ಹೋಗಬಾರದು. ನಿಖರವಾದ ದಿನದಲ್ಲಿ ಗುಂಪು ಗುಂಪಾಗಿ ಶಬರಿಮಲೈಗೆ ಹೋಗುವರು. ಹೋಗುವಾಗ ತೆಂಗಿನಕಾಯಿ ಮತ್ತು ತುಪ್ಪವನ್ನು ದೇವರಿಗೆ ಅರ್ಪಿಸಲು ತೆಗೆದುಕೊಂಡು ಹೋಗುವರು. ಇದನ್ನು ಕಪ್ಪು ಬಟ್ಟೆಯಲ್ಲಿ ಕಟ್ಟಿ ಇರುಮುಡಿ ಎಂದು ಕರೆದು ತಲೆಯ ಮೇಲಿಟ್ಟುಕೊಂಡು ಹೋಗುವರು. ಅಲ್ಲಿ ಹರಿಹರ ಪುತ್ರ ಶ್ರೀ ಅಯ್ಯಪ್ಪನ ದರ್ಶನಕ್ಕಾಗಿ ದೇಗುಲದ ೧೮ ಮೆಟ್ಟಿಲುಗಳನ್ನು ಏರಿ ಹೋಗುವರು. ಈ ೧೮ ಮೆಟ್ಟಿಲುಗಳು ಪಂಚೇಂದ್ರಿಯಗಳು, ಅಷ್ಟ ಲಕ್ಷಣಗಳು (ಕಾಮ ಕ್ರೋಧ ಮದ ಮೋಹ ಇತ್ಯಾದಿ), ತ್ರಿಗುಣ (ಸತ್ವ, ತಮಸ್ಸು, ರಜಸ್ಸು), ವಿದ್ಯೆ ಮತ್ತು ಅವಿದ್ಯೆಗಳ ಸಂಕೇತ. ಇವೆಲ್ಲವನ್ನೂ ಮೆಟ್ಟಿ ಮೇಲೇರಿ ದೇವರ ದರ್ಶನವನ್ನು ಮಾಡಬೇಕು. ನಂತರ ಸಂಜೆಯ ಸಮಯದಲ್ಲಿ ಮಕರವಿಳಕ್ಕು ದೀಪ ದರ್ಶನವನ್ನು ಮಾಡುವರು. ಕಟ್ಟುನಿಟ್ಟಾಗಿ ೧೬ ವರ್ಷಗಳ ಕಾಲ ವ್ರತವನ್ನು ಮಾಡಿದ ನಂತರ ಗುರುವಿನ ಸ್ಥಾನವನ್ನು ಪಡೆಯುವರು. ಈ ರೀತಿ ವರ್ಷದಲ್ಲಿ ವ್ರತಾಚರಣೆಯನ್ನು ಮಾಡುವವನು ಜೀವನದ ಮರ್ಮವನ್ನು ಅರಿಯುವನು ಎಂಬುದರಲ್ಲಿ ಸಂದೇಹವಿಲ್ಲ.

                                                                                          images4.jpg

ಸಂಕ್ರಾಂತಿಯ ಹಬ್ಬದ ದಿವಸ ರಾತ್ರಿಯ ವೇಳೆಯಲ್ಲಿ ದೇವರ ಪೂಜೆಯ ನಂತರ ಜ್ಯೋತಿಷಿಗಳಿಂದ ಸಂಕ್ರಾಂತಿ ಮೂರ್ತಿಯ ಸ್ವರೂಪ ಮತ್ತು ಆ ವರ್ಷದ ಸಂಕ್ರಾಂತಿ ಫಲವನ್ನು ಓದಿಸಿ ತಿಳಿಯುವ ಪದ್ಧತಿಯೂ ಇದೆ. ಸಂಕ್ರಾಂತಿ ಪುರುಷನಿಗೆ ಮೂರು ತಲೆಗಳು, ಎರಡು ಮುಖಗಳು, ಐದು ಬಾಯಿಗಳು, ಮೂರು ಕಣ್ಣುಗಳು, ಜೋಲಾಡುವ ಕಿವಿ ಮತ್ತು ಹುಬ್ಬುಗಳು, ಕೆಂಪು ಹಲ್ಲು, ಉದ್ದವಾದ ಮೂಗು, ಎಂಟು ತೋಳುಗಳು, ಎರಡು ಕಾಲುಗಳು, ಕಪ್ಪುಬಣ್ಣದ ಅರ್ಧ ಗಂಡು ಅರ್ಧ ಹೆಣ್ಣಿನ ರೂಪ ಇರುವುದು. ಅದು ಬಂದಿರುವ ವಾರದ ಫಲ, ಪಕ್ಷದ ಫಲ, ತಿಥಿಯ ಫಲ, ನಕ್ಷತ್ರದ ಫಲ, ಯೋಗಕರಣಗಳ ಫಲ, ಅದರ ದೃಷ್ಟಿ ಮತ್ತು ಪ್ರಯಾಣದ ದಿಕ್ಕು, ಕಾಲ, ಅದರ ಸ್ನಾನ ತೀರ್ಥದ ಫಲ, ವಸ್ತ್ರಲೇಪನ, ಧರಿಸಿರುವ ಹೂ, ಅಲಂಕಾರ, ಆಹಾರ, ಏರಿರುವ ವಾಹನ, ಹೊಂದಿರುವ ಆಯುಧಗಳು, ಇತ್ಯಾದಿಗಳ ಫಲಗಳೇನೆಂಬುದನ್ನು ಜ್ಯೋತಿಷಿಗಳು ಅರ್ಥೈಸುತ್ತಾರೆ.

images5.jpg

                                                  images6.jpg

                                                                                                       images7.jpg

ಈ ಶುಭಸಂದರ್ಭಕ್ಕೆ ನನ್ನದೊಂದು ಪುಟ್ಟ ಕವನವನ್ನೂ ಇಲ್ಲಿ ಇರಿಸುತ್ತಿರುವೆ.

ನೇಸರನು ತನ್ನ ಪಥವ ಬದಲಿಸುತಿರಲು

ಮಾಗಿಯ ಛಳಿ ಮಾಯವಾಗುತಿರಲು

ಹೊಸ ಚೈತನ್ಯ ಲವಲವಿಕೆ ಮೂಡುತಿದೆ

ಹೊಸ ಬೆಳೆ ಹೊಸ ಕ್ರಾಂತಿ ಹರಡುತಿದೆ

caepf2rn.jpg

ಹಸನಾದ ದವಸವು ಒಲೆಯ ಮೇಲೇರುತಿದೆ

ಹುಗ್ಗಿ ಹಾಲುಗಳು ಉಕ್ಕಿ ಹರಿಯುತ್ತಿದೆ

ಪುಟ್ಟಕ್ಕ ಪುಟ್ಟಣ್ಣರ ಸಂಭ್ರಮ ಹೇಳುತಿದೆ

ಸಂಕ್ರಾಂತಿ ಹಬ್ಬವು ಮನೆಯೊಳಗೆ ಕಾಲಿಟ್ಟಿದೆ

cao5uiff.jpg

ಕೈಯಲಿ ಹಿಡಿದಿಹೆ ಪುಟ್ಟ ಬೆಳ್ಳಿಯ ಹರಿವಾಣ

ಎಳ್ಳು ಬೀರಲು ಹೊರಟಿಹಳ ಪುಟ್ಟಿಗಿಲ್ಲ ಕಡಿವಾಣ

ಹದವಾಗಿ ಮಿಶ್ರಿತ ಎಳ್ಳು ಬೆಲ್ಲ ಕುಸುರಿ ಕಾಳು

ಬಾಳೆಯಹಣ್ಣಿನೊಂದಿಗಿಹುದು ಕಬ್ಬಿನ ಹೋಳು

ಅಕ್ಕಾ ತಂಗೇರು ಬಂದು ಎಲಚಿ ಆರತಿಯ ಎತ್ತಿ

ಕಬ್ಬಿನ ಚೂರು, ಕಾಸು ಕೂಸಿನ ಮೇಲೆರೆಯಿರೇ

ಬಣ್ಣ ಬಣ್ಣದ ಜರತಾರಿ ಕುಪ್ಪಸ ತೊಟ್ಟ ತಂಗಿ

ಜರಿ ಅಂಚಿನ ಲಂಗದಿ ಕುಣಿವ ಚೈತನ್ಯದ ಭಂಗಿ

ಇನ್ನೊಂದು ಕವನ

cakub8d7.jpg

ಬಾರೆ ತಂಗಿ ಎಳ್ಳು ಬೆಲ್ಲ ಬೀರೋಣ ಬಾ

ಜರತಾರಿ ಲಂಗ ಜರತಾರಿ ಕುಪ್ಪಸ ತೊಟ್ಟು ಬಾ

ಬಣ್ಣದ ಅಂಗಿ ಚಡ್ಡಿ ತೊಟ್ಟು ನಾ ಬರುವೆ

ಅಮ್ಮ ಕೊಟ್ಟ ಎಳ್ಳು ಬೆಲ್ಲವ ಎಲ್ಲರ ಮನೆಗಳಿಗೆ ಬೀರೋಣ ಬಾ


ಬೆಳ್ಳಿಯ ಹರಿವಾಣದಲಿ ಕಸೂತಿಯ ಕರವಸ್ತ್ರ

ಬೆಳ್ಳಿಯ ಬಟ್ಟಲಲಿ ಎಳ್ಳು ಬೆಲ್ಲ ಸಮ್ಮಿಶ್ರ

ಜೊತೆಯಲಿ ಬೆಳ್ಳನೆಯ ಮೃದು ಸಕ್ಕರೆಯ ಅಚ್ಚು

ಅರಿಶಿನ ಕುಂಕುಮ ಬಾಳೆಹಣ್ಣು ಎಲಚಿಯ ಗುಚ್ಚು

ca5z8g3v.jpg

ಈ ಕಡೆ ಮನೆಯವರೀವರು ಪೊಂಗಲ್ ತಿಂಡಿ

ಆ ಕಡೆ ಮನೆಯವರೀವರು ತಿಲ್‍ಗೋಳ್ ಉಂಡಿ

ಅವರ ಮನೆಯ ಗಂಗೆ ಗೌರಿಗಳ ಪೂಜಿಸೋಣ

ಗೆಳೆಯರೊಡಗೂಡಿ ಗಾಳಿಪಟ ಹಾರಿಸೋಣ

ಕೊಬ್ಬರಿ ಕಡಲೆ ಬಾಯ್ತುಂಬ ತಿನ್ನೋಣ

ಕಬ್ಬನು ಸಿಗಿದು ರಸ ಹೀರೋಣ

ಸಂಜೆ ಬೆಂಕಿಯ ಕೊಂಡವ ಹಾಯೋಣ

ಹೊಸ ಧಾನ್ಯವ ಗಾಡಿಯ ಮೇಲೆ ಹೊತ್ತು ತರೋಣ

ಎಲ್ಲರಿಗೂ ಹಂಚೋಣ ನಮ್ಮನೆಯ ಎಳ್ಳು ಬೆಲ್ಲ

ಸ್ನೇಹ ಸಂಪಾದಿಸಿ ಒಂದಾಗಿ ಬಾಳುವ ನಾವೆಲ್ಲಾ

ಸಂಕ್ರಾಂತಿಯಿಂದ ಶುಭಕ್ರಾಂತಿಯ ತರೋಣ

ನಾಡ ಕಟ್ಟೋಣ, ಎಲ್ಲರ ಕೈ ಜೋಡಿಸೋಣ

 

carjxr7d.jpg

ಬಾರೆ ತಂಗಿ ಎಳ್ಳು ಬೆಲ್ಲ ಬೀರೋಣ ಬಾ

ಜರತಾರಿ ಲಂಗ ಜರತಾರಿ ಕುಪ್ಪಸ ತೊಟ್ಟು ಬಾ

ಬಣ್ಣದ ಅಂಗಿ ಚಡ್ಡಿ ತೊಟ್ಟು ನಾ ಬರುವೆ

ಅಮ್ಮ ಕೊಟ್ಟ ಎಳ್ಳು ಬೆಲ್ಲವ ಎಲ್ಲರ ಮನೆಗಳಿಗೆ ಬೀರೋಣ ಬಾ